CM Yeddyurappa

ಜೂನ್ 14 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ನಿಯಮ ವಿಸ್ತರಣೆ; 500 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ: ಸಿಎಂ
ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಈಗ ಇರುವ ನಿಯಮಗಳು ಜೂನ್ 14 ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕೋವಿಡ್ 3ನೇ ಅಲೆ ಸಿದ್ಧತೆ ಕುರಿತು ವಾರದಲ್ಲಿ ಕಾರ್ಯಪಡೆ ವರದಿ: ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್ 3ನೇ ಅಲೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತಂತೆ ರಚಿಸಲಾಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೆ ಸಭೆ ನಡೆಸಿ, ಚರ್ಚಿಸಿದರು.

ಜಿಲ್ಲಾಸ್ಪತ್ರೆಗಳ ಸ್ಥಿತಿಗತಿ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಲು ಸಿಎಂ ಸೂಚನೆ
ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಔಷಧಿ ಆಕ್ಸಿಜನ್ ಸೇರಿದಂತೆ ಇತರೆ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದು ವರದಿ ತರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ."

ಕೋವಿಡ್ ನಿಯಂತ್ರಣಕ್ಕೆ ಉಸ್ತುವಾರಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಚಿವರಿಗೆ ಸಿಎಂ ಸೂಚನೆ
ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸಹ ತ್ವರಿತವಾಗಿ ಕ್ರಮ ಕೈಗೊಳ್ಳುವುದು ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಕೋವಿಡ್-19: ಲಾಕ್ ಡೌನ್ ಸಂಬಂಧ ಏ. 18ರಂದು ಸರ್ವಪಕ್ಷ ಸಭೆ ಕರೆದಿರುವ ಮುಖ್ಯಮಂತ್ರಿ ಯಡಿಯೂರಪ್ಪ
ಕೋವಿಡ್ -19 ಪರಿಸ್ಥಿತಿ ಮತ್ತು ಲಾಕ್‌ಡೌನ್ ಹೇರುವ ಕುರಿತು ಚರ್ಚಿಸಲು ಈ ತಿಂಗಳ 18 ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸಾರಿಗೆ ಸಿಬ್ಬಂದಿಗಳೊಂದಿಗೆ ಮಾತುಕತೆ ಪ್ರಶ್ನೆಯೇ ಇಲ್ಲ, ಗೈರಾದವರನ್ನು ಕ್ಷಮಿಸೋದಿಲ್ಲ: ಸಿಎಂ ಖಡಕ್ ಮಾತು
ಸಾರಿಗೆ ಸಿಬ್ಬಂದಿಗಳೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಸರ್ವಾಂಗೀಣ ಅಭಿವೃದ್ಧಿಯ ದೂರದೃಷ್ಟಿಯ ಬಜೆಟ್-ಡಿವಿಎಸ್; ಸಮತೋಲಿತ ಬಜೆಟ್-ಬೊಮ್ಮಾಯಿ
ಕೊರೊನಾ ಸಂಕಷ್ಟದ ಹಿನ್ನಲೆಯಲ್ಲಿ ಉಂಟಾದ ಆರ್ಥಿಕ ಹಿಂಜರಿತದ ಮಧ್ಯೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಆಶಯದೊಂದಿಗೆ ಸಮತೋಲಿತ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

ಮುಂದಿನ ಬಾರಿಯೂ ಸಿದ್ದರಾಮಯ್ಯ ವಿಪಕ್ಷದಲ್ಲೇ ಇರುತ್ತಾರೆ, ಹಾಗೆ ಮಾಡದಿದ್ದರೆ ನಾನು ಯಡಿಯೂರಪ್ಪನೇ ಅಲ್ಲ: ಬಿಎಸ್ ವೈ
"ಸಂಕಷ್ಟ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಮಾಡಿದ್ದೇನೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ವವ್ಯಾಪಿ ಬಜೆಟ್ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಅನುದಾನ; ಬೂದಿ ದಿಬ್ಬ ಅಭಿವೃದ್ಧಿ, ಅಂತಾರಾಷ್ಟ್ರೀಯ ದರ್ಜೆಗೆ ಕಡಲ ತೀರಗಳು
ಸಿಎಂ ಯಡಿಯೂರಪ್ಪ ಮಾ.08 ರಂದು ಮಂಡಿಸಿದ 2021 ನೇ ಸಾಲಿನ ಆಯ-ವ್ಯಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.

