CM Yeddyurappa

ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿದ್ದಲ್ಲಿ ಕಠಿಣ ಕ್ರಮ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ
ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿ.ಬಿ.ಎಂ.ಪಿ ನಿಯಂತ್ರಣಾ ಕೊಠಡಿ/ಸಹಾಯವಾಣಿಗಳಿಗೆ ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಸಾಂತ್ವನ ಕೇಂದ್ರಗಳನ್ನು ಮುಂದುವರೆಸಲು ಮುಖ್ಯಮಂತ್ರಿಗಳ ಸೂಚನೆ
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ಅಗತ್ಯ ನೆರವು ಒದಗಿಸುತ್ತಿರುವ ಸಾಂತ್ವನ ಯೋಜನೆಯನ್ನು ಮುಂದುವರೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸೂಚಿಸಿದರು.

ಇನ್ನೆರಡು ದಿನದಲ್ಲಿ ಹೋಟೆಲ್ ಪುನರಾರಂಭ ಕುರಿತು ನಿರ್ಧಾರ: ಮುಖ್ಯಮಂತ್ರಿ ಯಡಿಯೂರಪ್ಪ
ಹೋಟೆಲ್ ಉದ್ಯಮ ಪುನರಾರಂಭ ಸಂಬಂಧ ಇನ್ನೆರಡು ದಿನದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೈಗಾರಿಕಾ ವಲಯಕ್ಕೆ ಮೂರು ಲಕ್ಷ ಕೋಟಿ ಆರ್ಥಿಕ ನೆರವು ಸ್ವಾಗತಾರ್ಹ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಕೈಗಾರಿಕಾ ವಲಯಕ್ಕೆ ಕೇಂದ್ರ ಸರ್ಕಾರ 3 ಲಕ್ಷ ಕೋಟಿ ಆರ್ಥಿಕ ನೆರವು ನೀಡಿರುವುದನ್ನು ಸಿಎಂ ಯಡಿಯೂರಪ್ಪ ಸ್ವಾಗತಿಸಿದ್ದಾರೆ.

ಯು.ಎ.ಇ. ಕನ್ನಡಿಗರೊಂದಿಗೆ ಮುಖ್ಯಮಂತ್ರಿಗಳ ವಿಡಿಯೋ ಸಂವಾದ: ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವ ಭರವಸೆ
ಕೋವಿಡ್ 19 ನಿಂದ ತೊಂದರೆಗೀಡಾದ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರು ಇಂದು ವೀಡಿಯೋ ಸಂವಾದ ನಡೆಸಿದರು.

ಶುಶ್ರೂಷಕರು ಜೀವ ರಕ್ಷಕರು: ಸಿಎಂ ಯಡಿಯೂರಪ್ಪ
ಕೋವಿಡ್ - 19 ಸೋಂಕು ನಿಯಂತ್ರಣದಲ್ಲಿ ಸೇನಾನಿಗಳಾಗಿ ದುಡಿಯುತ್ತಿರುವ ವಿಶ್ವದ ಎಲ್ಲಾ ಶುಶ್ರೂಷಕರಿಗೆ ಫ್ಲಾರೇನ್ಸ್ ನೈಟಿಂಗೇಲ್‍ರವರ ಹುಟ್ಟು ಹಬ್ಬ ಹಾಗೂ ವಿಶ್ವ ಶುಶ್ರೂಷಕರ ದಿನಾಚರಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಕೋರಿದ್ದಾರೆ.

ಮುಖ್ಯಮಂತ್ರಿಗಳನ್ನು ಭೇಟಿಯಾದ ಸರ್ವಪಕ್ಷಗಳ ನಿಯೋಗ: ಸರ್ಕಾರದ ಕ್ರಮಗಳನ್ನು ವಿವರಿಸಿದ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿರೋಧ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ ಕೋವಿಡ್ 19 ಪರಿಸ್ಥಿತಿ ಕುರಿತು ಚರ್ಚಿಸಿದರು.

ವಿಶಾಖಪಟ್ಟಣ ವಿಷಾನಿಲ ದುರಂತವನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು: ಯಡಿಯೂರಪ್ಪ
ವಿಶಾಖಪಟ್ಟಣದಲ್ಲಿ ನಡೆದ ವಿಷಾನಿಲ ಸೋರಿಕೆಯ ದುರಂತ ಘಟನೆ ದುರದೃಷ್ಟಕರ. ಇಂತಹ ಘಟನೆ ಎಲ್ಲಿಯೂ ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಪೂರ್ಣ ಪ್ರಮಾಣದ ಆರ್ಥಿಕ ಚಟುವಟಿಕೆ ಪುನಾರಂಭ; ವಲಸೆ ಹೋಗದಂತೆ ಕಾರ್ಮಿಕರಿಗೆ ಯಡಿಯೂರಪ್ಪ ಮನವಿ
ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ಹತೋಟಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಆರ್ಥಿಕ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಯಾವುದೇ ಅಡ್ಡಿಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಕಾರ್ಯವನ್ನು ಕೆಂಪುವಲಯ ಹೊರತುಪಡಿಸಿ ಇತರ ಕಡೆ ಆರಂಭಿಸಲಿದ್ದು ವಲಸೆ ಕಾರ್ಮಿಕರು ಗಾ

