CM Yediyurappa

ಬೆಂಗಳೂರಿನಲ್ಲಿ ಒಂದೇ ವಾರ ಲಾಕ್ ಡೌನ್, ಮತ್ತೆ ಲಾಕ್ ಡೌನ್ ವಿಸ್ತರಣೆ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಕೊರೋನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಮಾತ್ರ ಲಾಕ್ ಡೌನ್ ಜಾರಿಗೊಳಿಸಲಾಗಿದೆ.

ಲಾಕ್ ಡೌನ್ ಬದಲು ಪರ್ಯಾಯ ಕ್ರಮಗಳ ಬಗ್ಗೆ ಚಿಂತಿಸಿ, ಅಗತ್ಯ ಬಿದ್ದರೆ ಲಾಕ್ ಡೌನ್ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸಲಹೆ
ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಈಗಾಗಲೇ 1955 ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಜಿಲ್ಲೆಗಳಿಗೆ ಟೆಸ್ಟಿಂಗ್ ಗೆ ಅನುಕೂಲವಾಗಲಿ ಎಂದು 1 ಲಕ್ಷ ರ್ಯಾಪಿಡ್ ಆಂಟಿಜೆನ್ ಕಿಟ್‌ಗಳನ್ನು ಕಳುಹಿಸಿಕೊಡಲಾಗಿದೆ.

ಕೊರೋನ ನಿಯಂತ್ರಣಕ್ಕೆ 4,500 ಬೆಡ್ ಮೀಸಲಿಡಲು ಖಾಸಗಿ ಆಸ್ಪತ್ರೆಗಳ ಸಮ್ಮತಿ: ಮುಖ್ಯಮಂತ್ರಿ ಬಿಎಸ್ ವೈ
ಕೊರೊನ ಸೋಂಕು ನಿಯಂತ್ರಿಸಲು ಸರ್ಕಾರದ ಜೊತೆಗೆ ಖಾಸಗಿ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳು 4,500 ಸಾವಿರ ಬೆಡ್ ಗಳನ್ನು ಕೋವಿಡ್-19 ಗೆ ಮೀಸಲಿರಿಸಲು ಸಮ್ಮತಿಸಿವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಕೋವಿಡ್-19 ಲಾಕ್‍ಡೌನ್ ಸಂದರ್ಭದಲ್ಲಿ ಪೊಲೀಸರ ಕೊಡುಗೆ ಅಪಾರ: ಸಿಎಂ ಯಡಿಯೂರಪ್ಪ
ರಾಜ್ಯ ಪೊಲೀಸ್ ಪಡೆ ಅತ್ಯಂತ ವಿಶ್ವಾಸಾರ್ಹ ಮತ್ತು ದಕ್ಷ ಪೊಲೀಸ್ ಪಡೆ ಎಂದು ಇಡೀ ದೇಶದಲ್ಲಿ ಹೆಸರಾಗಿದ್ದು, ಕೋವಿಡ್ 19 ಸಂಕಷ್ಟ ಸಂದರ್ಭದಲ್ಲಿ ಪೊಲೀಸರು ಜೀವ ಲೆಕ್ಕೆಸದೇ ಕಾರ್ಯನಿರ್ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬಿಎಸ್ ವೈ ಕನಸು ನನಸಾಯ್ತು! ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಚಾಲನೆ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಜೂನ್ 15 ರ ಸೋಮವಾರ ತಮ್ಮ ತವರು ಜಿಲ್ಲೆಯಾದ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ರೆಸ್ಟೋರೆಂಟ್, ಹೋಟೆಲ್ ತೆರೆಯಲು ಮಾರ್ಗಸೂಚಿಗಳ ಪಾಲನೆ ಕಡ್ಡಾಯ: ಸಿಎಂ ಯಡಿಯೂರಪ್ಪ
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ದೇವರಾಜು ಅರಸು ಪುಣ್ಯಸ್ಮರಣೆ: ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರ ಗೌರವ ನಮನ
ರಾಜ್ಯದ ಮುಖ್ಯಮಂತ್ರಿಯಾಗಿ, ದೂರದೃಷ್ಟಿಯುಳ್ಳ ನಾಯಕರಾಗಿ ಮಾನವೀಯ ತುಡಿತವಿರುವ ಆಡಳಿತಗಾರರಾಗಿ ದಿ. ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಕೈಗೊಂಡ ನಿರ್ಧಾರಗಳು ಚರಿತ್ರಾರ್ಹವಾದುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

3 ಸಾವಿರಕ್ಕೂ ಹೆಚ್ಚು ಹೋಂ ಗಾರ್ಡ್ ಸೇವೆ ಮುಂದುವರಿಸಲು ರಾಜ್ಯ ಸರ್ಕಾರ ತೀರ್ಮಾನ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಗೃಹ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಕೊರೋನಾ ಭೀತಿ: ಇ-ಆಫೀಸ್ ಮೂಲಕ ಮಾತ್ರ ಕಡತ ಸಲ್ಲಿಸಲು ಸಿಎಂ ಯಡಿಯೂರಪ್ಪ ಸೂಚನೆ
ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನ ಏರಿಕೆಯಾಗುತ್ತಿರುವುದರಿಂದ ಇನ್ನುಮುಂದೆ ತಮ್ಮ ಕಚೇರಿಗೆ ಕಡತಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ " ಇ - ಆಫೀಸ್ " ಮೂಲಕ ಮಾತ್ರ ಕಡತ ಮತ್ತು ಪತ್ರಗಳನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

