CMBSYediyurappa

ಬೆಂಗಳೂರಿನಲ್ಲಿ ನ್ಯಾನೋ ಪಾರ್ಕ್ ನಿರ್ಮಾಣಕ್ಕೆ ಭೂಮಿ ಅಂತಿಮ: ರಾಜ್ಯಸರ್ಕಾರದಿಂದ ಸಂಪೂರ್ಣ ಬೆಂಬಲ-ಯಡಿಯೂರಪ್ಪ
ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಸಾಮಾನ್ಯ ಸೌಕರ್ಯದೊಂದಿಗೆ ಬೆಂಗಳೂರಿನಲ್ಲಿ ನ್ಯಾನೋ ಪಾರ್ಕ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ.

ಮುಖ್ಯಮಂತ್ರಿ ಭೇಟಿಯಾಗಿ ಮನವಿ ಸಲ್ಲಿಸಿದ ಕನ್ನಡ ಪರ ಹೋರಾಟಗಾರರು
ಡಾ. ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ಕನ್ನಡ ಪರ ಹೋರಾಟಗಾರರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ಪ್ರೊ. ಎಂ. ಡಿ. ನಂಜುಂಡಸ್ವಾಮಿ ಜನ್ಮ ದಿನ: ಮುಖ್ಯಮಂತ್ರಿ ಯಡಿಯೂರಪ್ಪ ಗೌರವ ಸಲ್ಲಿಕೆ
ಕರ್ನಾಟಕ ರಾಜ್ಯ ರೈತ ಸಂಘದ ನಾಯಕ, ದಿವಂಗತ ಪ್ರೊ. ಎಂ ಡಿ ನಂಜುಂಡಸ್ವಾಮಿ ಅವರ ಜನ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ

ಯಡಿಯೂರಪ್ಪ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ- ಸಿದ್ದರಾಮಯ್ಯ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕ ರಾಜ್ಯ ಕಂಡ ಅತ್ಯಂತ 'ದುರ್ಬಲ' ಮುಖ್ಯಮಂತ್ರಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಂದ ಕೇಂದ್ರದ ನೆರವು ಪಡೆಯಲು ಅವರಿಗೆ ಯಾವುದೇ ಧೈರ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಟೀಕಿಸಿದ್ದಾರೆ

ಬೀದರ್ ಶಾಲೆ ಪ್ರಕರಣ: ನಿಮ್ಮ ಮೌನ ನೋಡಿ ಆಘಾತಗೊಂಡಿದ್ದೇನೆ-ಮುಖ್ಯಮಂತ್ರಿಗೆ ಪತ್ರ ಬರೆದ ಮಾರ್ಗರೇಟ್ ಆಳ್ವಾ
ಬೀದರ್ ಶಾಲೆಯಲ್ಲಿ ಸಿಎಎ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ದೇಶದ್ರೋಹಿಗಳು ಎಂಬಂತೆ ಬಿಂಬಿಸಿ ಪೊಲೀಸರು ಅವರೊಂದಿಗೆ ನಡೆದುಕೊಳ್ಳುತ್ತಿರುವ ರೀತಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ರಾಜ್ಯಪಾಲೆ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ

ಶುಕ್ರವಾರ ಸಚಿವ ಸಂಪುಟ ವಿಸ್ತರಣೆ ಖಚಿತ: ದೆಹಲಿಗೆ ತೆರಳುವ ಮುನ್ನ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ

ಸಂಪುಟದಲ್ಲಿ 11 ಶಾಸಕರಿಗೂ ಸ್ಥಾನ, ಅಮಿತ್ ಶಾ ಜೊತೆಗೆ ಚರ್ಚಿಸಿ ನಿರ್ಧಾರ-ಯಡಿಯೂರಪ್ಪ
ಸಚಿವ ಸ್ಥಾನ ಆಕಾಂಕ್ಷಿಗಳ ತೀವ್ರ ಒತ್ತಡ ಹೆಚ್ಚಾಗಿರುವಂತೆ ಇಕ್ಕಟ್ಟಿಗೆ ಸಿಲುಕಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ಗೆದ್ದಿರುವ ಶಾಸಕರು ತಲೆ ಕೆಡಿಸುವ ಅಗತ್ಯವಿಲ್ಲ, ಎಲ್ಲಾ 11 ಶಾಸಕರಿಗೂ ಸಚಿವ ಸ್ಥಾನ ನೀಡಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ

ಬಿಜೆಪಿಗೆ ಬಹುಮತ ಬಾರದಂತೆ ತಡೆಯಲು ಕಾಂಗ್ರೆಸ್ , ಜೆಡಿಎಸ್ ಕಾರ್ಯಕರ್ತರ ಹುನ್ನಾರ- ಯಡಿಯೂರಪ್ಪ
ಉತ್ತರ ಕರ್ನಾಟಕ ಹಾಗೂ ಮೈಸೂರು ಭಾಗದಲ್ಲಿ ಒಂದು ವಾರ ಪ್ರಚಾರ ನಡೆಸಿದ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಬೆಂಗಳೂರಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು

ಫಡ್ನವೀಸ್ ಗಾದಂತೆ ಯಡಿಯೂರಪ್ಪಗೂ ಆಗುತ್ತದೆ- ಎಚ್. ಡಿ. ಕುಮಾರಸ್ವಾಮಿ
ತಾವು ಮಾಡಿದ್ದರ ಪ್ರತಿಫಲವನ್ನು ಫಡ್ನವೀಸ್ ಉಣ್ಣುತ್ತಿದ್ದಾರೆ. ಇದೇ ರೀತಿಯಲ್ಲಿ ಯಡಿಯೂರಪ್ಪ ಕೂಡ ಉಣ್ಣುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

