ರಾಜ್ಯಬಿಟಿಎಸ್ 2021: ಮೊದಲ ಬಾರಿಗೆ ಯುಎಇ, ವಿಯಟ್ನಾಂ, ಆಫ್ರಿಕಾ, ಯುರೋಪಿಯನ್ ಒಕ್ಕೂಟ ಭಾಗಿ- ಅಶ್ವತ್ಥ ನಾರಾಯಣ
ನವೆಂಬರ್ 17 ರಿಂದ 19ರವರೆಗೆ ನಗರದಲ್ಲಿ ನಡೆಯಲಿರುವ 24ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ (ಬಿಟಿಎಸ್ -2021) ಸಂಯುಕ್ತ ಅರಬ್ ಸಂಸ್ಥಾನ, ವಿಯಟ್ನಾಂ, ಯುರೋಪಿಯನ್ ಯೂನಿಯನ್ ಮತ್ತು ದಕ್ಷಿಣ ಆಫ್ರಿಕಾ ದೇಶಗಳು ಪಾಲ್ಗೊಳ್ಳುತ್ತಿವೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.