ದೇಶಸಿಕ್ಕಿಂ ಪ್ರವಾಹ: ಮೃತರ ಸಂಖ್ಯೆ 14ಕ್ಕೆ ಏರಿಕೆ, 23 ಸೇನಾ ಸಿಬ್ಬಂದಿ ಸೇರಿ 102 ಮಂದಿ ನಾಪತ್ತೆ; ಮುಂದುವರಿದ ಶೋಧ ಕಾರ್ಯ
ಉತ್ತರ ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಉಂಟಾದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, 23 ಸೇನಾ ಸಿಬ್ಬಂದಿ ಸೇರಿ 102 ಜನ ನಾಪತ್ತೆಯಾಗಿದ್ದಾರೆ. ಕಣ್ಮರೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.