ರಾಜ್ಯಬಿಜೆಪಿ ಎಂಎಲ್ಸಿ ಆರ್.ಶಂಕರ್ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ: 50 ಸಾವಿರ ಸೀರೆ, 20 ಸಾವಿರ ಶಾಲಾ ಬ್ಯಾಗ್'ಗಳು ವಶಕ್ಕೆ
ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿರುವ ಬಿಜೆಪಿ ಎಂಎಲ್ಸಿ ಆರ್.ಶಂಕರ್ ಅವರ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, 50 ಸಾವಿರಕ್ಕೂ ಹೆಚ್ಚು ಸೀರೆಗಳು, 20 ಸಾವಿರ ಶಾಲಾ ಬ್ಯಾಗ್ಗಳು ಮತ್ತು ಸಾವಿರಾರು ಸ್ಟೀಲ್ ಪ್ಲೇಟ್ಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.