ದೇಶಕೋವಿಡ್-19 ಲಸಿಕೆ ನೀಡಿಕೆಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಸಂವಹನ ಕಾರ್ಯತಂತ್ರ ಬಿಡುಗಡೆ!
ದೇಶದಲ್ಲಿ ಕೋವಿಡ್-19 ಲಸಿಕೆ ವಿತರಣೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಸಂವಹನ ಕಾರ್ಯತಂತ್ರವನ್ನು ಬಿಡುಗಡೆ ಮಾಡಿದೆ. ಆತಂಕಗಳನ್ನು ನಿವಾರಿಸಿ, ಲಸಿಕೆ ಸ್ವೀಕರಿಸಬಹುದು ಎಂಬ ಖಾತ್ರಿಯೊಂದಿಗೆ ನಿಖರ ಮತ್ತು ಪಾರದರ್ಶಕ ರೀತಿಯಲ್ಲಿ ಮಾಹಿತಿ ಪ್ರಸಾರಕ್ಕೆ ಪ್ರಯತ್ನಿಸಲಾಗುತ್ತಿದೆ.