Compensation

ಕೆಂಗೇರಿ ಕೆರೆಯಲ್ಲಿ ಮುಳುಗಿದ ಮಕ್ಕಳ ಕುಟುಂಬಕ್ಕೆ 5 ಲಕ್ಷ ರೂ, ಮಳೆಯಿಂದ ಹಾನಿಗೊಳಗಾದವರಿಗೆ ತಲಾ 10 ಸಾವಿರ ಪರಿಹಾರ: DCM
ನಗರದಾದ್ಯಂತ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದ್ದು, ಈಗಾಗಲೇ ವಿಶ್ವಬ್ಯಾಂಕ್‌ನಿಂದ 1000 ಕೋಟಿ ರೂಪಾಯಿ ಸಾಲ ಪಡೆದು ಮಳೆನೀರು ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಓಲಾ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಪಾವತಿ ಆದೇಶಕ್ಕೆ ಹೈಕೋರ್ಟ್ ತಡೆ
2019ರಲ್ಲಿ ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ಚಾಲಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದು, ಚಾಲಕನ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಕೋರಿ ಸಂತ್ರಸ್ತೆಯು ಎಎನ್ಐ ಟೆಕ್ನಾಲಜೀಸ್ಗೆ ದೂರು ನೀಡಿದ್ದರು.

ಓಲಾ ಚಾಲಕನಿಂದ ಕಿರುಕುಳ: ಸಂತ್ರಸ್ತೆಗೆ 5 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ನಿರ್ದೇಶನ
ಪ್ರಕರಣ ಸಂಬಂಧ ನೀಡಿರುವ ದೂರಿನ ಕುರಿತು ತನಿಖೆ ನಡೆಸಲು ಕಂಪನಿಯ ಆಂತರಿಕ ದೂರು ಸಮಿತಿಗೆ ನಿರ್ದೇಶಿಸಬೇಕು ಎಂದು ಕೋರಿ ಸಂತ್ರಸ್ತ ಯುವತಿ ಸಲ್ಲಿಸಿದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಏಕಸದಸ್ಯ ಪೀಠ ಪ್ರಕಟಿಸಿದೆ.

KIADB ಪರಿಹಾರದಲ್ಲಿ ವಂಚನೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಇಬ್ಬರ ಬಂಧನ
KIADB ಕರ್ನಾಟಕದಲ್ಲಿ ಭೂಸ್ವಾಧೀನಕ್ಕೆ ನೋಡಲ್ ಏಜೆನ್ಸಿಯಾಗಿದೆ. ಹಣ ವರ್ಗಾವಣೆ ಪ್ರಕರಣ ಧಾರವಾಡ ಜಿಲ್ಲಾ ಸಿಐಡಿ ಸಲ್ಲಿಸಿದ ಎಫ್‌ಐಆರ್ ಮತ್ತು ಆರೋಪಪಟ್ಟಿಯನ್ನು ಆಧರಿಸಿದೆ.

ಬೆಳಗಾವಿ: ವಿಮಾನ ನಿಲ್ದಾಣಕ್ಕೆ ನೀಡಿದ ಭೂಮಿಗೆ ಸಿಗದ ಪರಿಹಾರ; ಎಸಿ ಕಚೇರಿ ಪೀಠೋಪಕರಣ ಹೊತ್ತೊಯ್ದ ರೈತರು
2008 ರಲ್ಲಿ ಸಾಂಬ್ರಾದಲ್ಲಿ ಕನಿಷ್ಠ 270 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಮತ್ತು ಪ್ರತಿ ಎಕರೆ ಭೂಮಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಸರ್ಕಾರಕ್ಕೆ ಆದೇಶಿಸಿದೆ.

ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ; ಸಂತ್ರಸ್ತರಿಗೆ ಮನೆ, ಪರಿಹಾರದ ಘೋಷಣೆ
ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಗಿತ್ತು. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ.

ಅಂಕೋಲಾ ಗುಡ್ಡ ಕುಸಿತ ಪ್ರಕರಣ: ಮುಂದುವರೆದ ರಕ್ಷಣಾ ಕಾರ್ಯಾಚರಣೆ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಅಂಕೋಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ ಪೂ.5 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಅಂಜಲಿ ಹತ್ಯೆ ಪ್ರಕರಣ: ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ಒದಗಿಸಲು ಕ್ರಮ- ಡಾ. ಜಿ. ಪರಮೇಶ್ವರ್
ಸಾಮಾನ್ಯವಾಗಿ ಹತ್ಯೆ ಪ್ರಕರಣಗಳಲ್ಲಿ ಸರ್ಕಾರಿ ಪರಿಹಾರ ನೀಡಲ್ಲ. ಆದರೆ, ಸಂತ್ರಸ್ತೆ ಕುಟುಂಬದ ತೀವ್ರ ಬಡತನವನ್ನು ಪರಿಗಣಿಸಿ, ಇದನ್ನು ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಿದೆ.

MUDA ಹಗರಣ: ಜಮೀನಿನ ಬದಲು ನಿವೇಶನ ಕೊಡಲು ಕಷ್ಟವಿದ್ದರೆ 60 ಕೋಟಿ ರೂ. ಹಣ ಕೊಟ್ಟುಬಿಡಲಿ- ಸಿಎಂ
ನಮಗೆ ಇಂಥಾ ಕಡೆಯೇ ಬದಲಿ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ.

