componsation

ಚಿತ್ರದುರ್ಗದ ಕವಾಡಿಗರಹಟ್ಟಿಗೆ ಆರೋಗ್ಯ ಸಚಿವ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ
ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಅಲ್ಲದೇ ಮೃತರ ಕುಟುಂಬಗಳಿಗೆ ಸರ್ಕಾರ ವತಿಯಿಂದ ತಲಾ 10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.

ಮೈಸೂರಿನಲ್ಲಿ ಚಿರತೆ ದಾಳಿಗೆ ಯುವತಿ ಸಾವು: ಶೂಟೌಟ್ ಗೆ ಸರ್ಕಾರ ಆದೇಶ; 7.5 ಲಕ್ಷ ರೂ. ಪರಿಹಾರ ಘೋಷಣೆ, ಉದ್ಯೋಗ ಭರವಸೆ
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಚಿರತೆ ಎರಡು ಮಂದಿಯನ್ನು ಬಲಿತೆಗೆದುಕೊಂಡ ನಂತರ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲುವ ಆದೇಶ ಹೊರಡಿಸಿದ್ದು, ಕಾರ್ಯಾಚರಣೆಗಿಳಿದಿದೆ.

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು: ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ಘೋಷಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಕಸದ ಲಾರಿ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್‌ನಲ್ಲಿದ್ದ ಮೃತಪಟ್ಟ ಇಬ್ಬರು ಯುವಕರ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಹಾಸನದ ಅರಸೀಕೆರೆ ಬಳಿ ಭೀಕರ ಅಪಘಾತ: ಟ್ಯಾಂಕರ್ ಚಾಲಕ ಪೊಲೀಸರ ವಶಕ್ಕೆ, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ
ಧರ್ಮಸ್ಥಳ ಮಂಜುನಾಥ, ಕುಕ್ಕೆ ಸುಬ್ರಹ್ಮಣ್ಯ ದೇಗುಲ ಬಳಿಕ ಹಾಸನಾಂಬೆಯ ದರ್ಶನ ಮಾಡಿ ತಮ್ಮೂರು ಹಾಸನದ ಅರಸೀಕೆರೆಯ ಬಾಣಾವರಕ್ಕೆ ಖುಷಿಯಿಂದ ಇನ್ನೇನು ತಲುಪಬೇಕೆನ್ನುವಷ್ಟರಲ್ಲಿ ಜವರಾಯನ ಕರೆಗೆ ಓಗೊಟ್ಟು ಕಳೆದ ತಡರಾತ್ರಿ ಮೃತಪಟ್ಟ 9 ಮಂದಿಯ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮಳೆಯಿಂದ ಹಾನಿಗೊಳಗಾದ ಮನೆಗಳ ದುರಸ್ತಿಗೆ ತಕ್ಷಣ 10 ಸಾವಿರ ರೂ. ಪರಿಹಾರ: ಸಿಎಂ ಬೊಮ್ಮಾಯಿ
ರಾಜ್ಯದೆಲ್ಲೆಡೆ ಮತ್ತೆ ಪ್ರವಾಹ ರೀತಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಕಡೆಗಳಲ್ಲಿ ಅವಾಂತರಗಳು ಆಗಿವೆ. ಈ ಬಗ್ಗೆ 16 ಜಿಲ್ಲೆಗಳಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಸ್ಥಿತಿಯನ್ನು ಸರಿಪಡಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶಿರಾ ಬಳಿ ಅಪಘಾತ: ಮೃತರ ಕುಟುಂಬಸ್ಥರಿಗೆ 2 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಪ್ರಧಾನಿ, ಸಿಎಂ ಕಂಬನಿ
ತುಮಕೂರು ಜಿಲ್ಲೆಯ ಶಿರಾ ಬಳಿಯ ಕಳ್ಳಂಬೆಳ್ಳದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಮಂದಿ ಕೂಲಿ ಕಾರ್ಮಿಕರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ನೈಸರ್ಗಿಕ ವಿಕೋಪ ಪರಿಹಾರ ನಿಧಿ (PMNRF) ಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಮಳೆ ಹಾನಿ ನಷ್ಟದ ಮಾಹಿತಿ ಇಂದು ಸಂಜೆಯೊಳಗೆ ಬಿಡುಗಡೆ; ಕೊಡಗು ಜಿಲ್ಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರವಾಸ
ರಾಜ್ಯದಲ್ಲಿ ಮಳೆ ಹಾನಿಯಿಂದ ಇಲ್ಲಿಯವರೆಗೆ ಉಂಟಾಗಿರುವ ನಷ್ಟದ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು, ನಷ್ಟದ ಪ್ರಮಾಣ ಎಷ್ಟಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿಯನ್ನು ಇಂದು ಸಂಜೆ ಮಾಧ್ಯಮಗಳ ಮೂಲಕ ಜನತೆಗೆ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಳೆ ಸಂಬಂಧಿ ಅವಘಡಗಳಿಂದ ಜೀವಹಾನಿಯಾದವರ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ: ಆರ್ ಅಶೋಕ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಿಂದ ಪ್ರಾಣಹಾನಿಯಾದವರ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ: ಕಂದಕಕ್ಕೆ ಬಸ್ಸು ಉರುಳಿ ಬಿದ್ದು ಶಾಲಾ ಮಕ್ಕಳು ಸೇರಿ 16 ಸಾವು, ಪ್ರಧಾನ ಮಂತ್ರಿ ಪರಿಹಾರ ಘೋಷಣೆ
ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.

