ರಾಜಕೀಯಸಿಎಂ ರೇಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಸರು ತಂದ ಡಿಕೆಶಿ, ಚರ್ಚೆಗೆ ಗ್ರಾಸ!
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿಯ ಮಾತುಗಳು ಕೇಳಿಬರುತ್ತಿರುವಂತೆಯೇ, ಇದೀಗ ಡಿಕೆಶಿ ಸಿಎಂ ರೇಸ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ತರುವ ಪ್ರಯತ್ನ ಮಾಡಿದ್ದಾರೆ.