Congress government

ಬೆಂಗಳೂರಿಗೆ ಬಂದ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ; ಬಿಎಸ್‌ವೈ ಮುಗಿಸಲು ಕಾಂಗ್ರೆಸ್ ಬಯಸಿದೆ ಎಂದ ಕೇಂದ್ರ ಸಚಿವ!
ವಿಮಾನ ನಿಲ್ದಾಣದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ಪಕ್ಷವು ಸಂಚು ರೂಪಿಸಿದೆ. ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಕೇಸ್ ಹಾಕುವ ಮೂಲಕ ಅವರ ವಿರುದ್ಧವೂ ಪಕ್ಷ ಷಡ್ಯಂತ್ರ ನಡೆಸುತ್ತಿದೆ ಎಂದು ದೂರಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಪರವಾಗಿ ಸರ್ಕಾರದ ಮೇಲೆ ಒತ್ತಡ; ಆರೋಪ ತಳ್ಳಿಹಾಕಿದ ಡಿಕೆ ಶಿವಕುಮಾರ್
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ಅವರ ಪರವಾಗಿ ರಾಜ್ಯ ಸರ್ಕಾರವು ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿದೆ ಎಂಬ ವರದಿಗಳನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ತಳ್ಳಿಹಾಕಿದ್ದಾರೆ.

'ಶಕ್ತಿ' ಯೋಜನೆ ಅನುಷ್ಠಾನಕ್ಕೆ ಒಂದು ವರ್ಷ; 227 ಕೋಟಿ ಮಹಿಳೆಯರು ಉಚಿತ ಪ್ರಯಾಣ: ರಾಮಲಿಂಗಾ ರೆಡ್ಡಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ವರ್ಷ ಜೂನ್ 11 ರಂದು ಪಕ್ಷವು ವಿಧಾನಸಭೆ ಚುನಾವಣೆಗೆ ಮೊದಲು ಭರವಸೆ ನೀಡಿದ್ದ ಐದು ಖಾತರಿಗಳಲ್ಲಿ ಒಂದಾದ 'ಶಕ್ತಿ' ಯೋಜನೆಯನ್ನು ಪ್ರಾರಂಭಿಸಿತು.
ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆ ಕೇಳಿಲ್ಲ; ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿ ಬಿ ನಾಗೇಂದ್ರ ಅವರ ರಾಜೀನಾಮೆಯನ್ನು ಕೇಳಿಲ್ಲ. ಎಸ್‌ಟಿ ಅಭಿವೃದ್ಧಿ ನಿಗಮದ ಅವ್ಯವಹಾರದ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ ವರದಿಯನ್ನು ಆಧರಿಸಿ ಆ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ.

ಸರ್ಕಾರದ ಸಂಭ್ರಮದ ಮೇಲೆ ಹಗರಣದ ಕರಿ ನೆರಳು (ಸುದ್ದಿ ವಿಶ್ಲೇಷಣೆ)
ನಡೆದಿರುವುದು ಬಹು ದೊಡ್ಡ ಹಗರಣ. ಆಡಳಿತ ಕಾಂಗ್ರೆಸ್ ಪಕ್ಷದ ಸಂಭ್ರಮವನ್ನೇ ಅದು ಕಸಿಯುತ್ತಾ? ನಿಜಕ್ಕೂ ಆರೋಪಿ ಸ್ಥಾನದಲ್ಲಿರುವವರು ಅಮಾಯಕರಾ? ಸಚಿವರ ಗಮನಕ್ಕೇ ಬರದೇ ಇಂಥದೊಂದು ದೊಡ್ಡ ಮೊತ್ತದ ಹಣದ ಅಕ್ರಮ ವಹಿವಾಟು ನಡೆಯಲು ಸಾಧ್ಯವಾ?

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ನಾಮನಿರ್ದೇಶನ ವಾಪಸ್: ಸರ್ಕಾರದ ಕ್ರಮವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದ್ದ ಮಾಜಿ ಎಂಎಲ್‌ಸಿ ಅಬ್ದುಲ್ ಅಜೀಂ ಅವರ ನಾಮನಿರ್ದೇಶನ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದ್ದು, ಸರ್ಕಾರದ ನಡೆಯನ್ನು ಪ್ರಶ್ನಿಸಿ ಅಬ್ದುಲ್ ಅಜೀಂ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಯಿಂದ ಸತ್ಯ ಗೊತ್ತಾಗಲಿದೆ- ಜಿ ಪರಮೇಶ್ವರ
ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್‌ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ಭ್ರಷ್ಟಾಚಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಶಾಸಕ ಆಗ್ರಹ
ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್‌ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ.

ಕ್ರಮ ಕೈಗೊಳ್ಳದಿದ್ದರೆ ಡ್ರಗ್ಸ್ ಮಾಫಿಯಾದಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ: ಪ್ರಲ್ಹಾದ್ ಜೋಶಿ
ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾದಕ ದ್ರವ್ಯ ದಂಧೆ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳದಿದ್ದರೆ, ರಾಜ್ಯವು ಡ್ರಗ್ಸ್ ಹಾವಳಿಯಲ್ಲಿ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದ್ದಾರೆ.

