Congress government

ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ; ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರಲ್ಲವೇ?
ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಶಾಂತಿಯುತ ಹೊಸ ವರ್ಷಾಚರಣೆಗೆ ರಾಜ್ಯದಾದ್ಯಂತ ಮುಂಜಾಗ್ರತಾ ಕ್ರಮ: ಗೃಹ ಸಚಿವ ಜಿ ಪರಮೇಶ್ವರ
ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಹೊಸ ವರ್ಷ ಮತ್ತು ಸಂಬಂಧಿತ ಆಚರಣೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದರು.

ಹಿಂದಿನ ಜಾತಿ ಗಣತಿ ವ್ಯವಸ್ಥಿತವಾಗಿ ನಡೆದಿಲ್ಲ, ಈಗ ಹೊಸದಾಗಿ ಸಮೀಕ್ಷೆ ಆಗಬೇಕು: ಬಿಎಸ್ ಯಡಿಯೂರಪ್ಪ
ಹಿಂದಿನ 'ಜಾತಿ ಗಣತಿ'ಯನ್ನು ವ್ಯವಸ್ಥಿತವಾಗಿ ಮಾಡಿಲ್ಲ. ಹೀಗಾಗಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಹೊಸ ಸಮೀಕ್ಷೆಯನ್ನು ಮಾಡಿ ಜನರ ಮುಂದೆ ಸತ್ಯವನ್ನು ಪ್ರಸ್ತುತಪಡಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ.

ಹಿಜಾಬ್ ಮೇಲಿನ ನಿಷೇಧ ಹಿಂಪಡೆಯುವ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಯೂಟರ್ನ್
ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರದ ಸಾಧನೆ-ಯೋಜನೆಗಳ ಪ್ರಚಾರಕ್ಕೆ ಒಪ್ಪಂದ; ಪಾರದರ್ಶಕತೆ ಮಾಯ ಎಂದ ಅರವಿಂದ್ ಬೆಲ್ಲದ್
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರವನ್ನು ಪ್ರತಿನಿಧಿಸುವ ಬೆಲ್ಲದ್, ಕಾಂಗ್ರೆಸ್ ಸರ್ಕಾರವು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳನ್ನು ಪ್ರಚಾರ ಮಾಡಲು ಪಾಲಿಸಿ ಫ್ರಂಟ್ ಎಂಬ ಸಂಘಟನೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಮತ್ತು ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಆರೋಪಿಸಿದರು.

ಹಿಜಾಬ್ ಮೇಲಿನ ನಿಷೇಧ ತೆರವು: 'ಇತರರು ಕೇಸರಿ, ನೀಲಿ, ಹಳದಿ ಶಾಲು ಬಳಸಲು ಕೇಳಬಹುದು' ಎಂದ ಸಿಟಿ ರವಿ
ಕಾಂಗ್ರೆಸ್ ಸರ್ಕಾರವು ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿರುವುದು ಶಾಲಾ-ಕಾಲೇಜುಗಳಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಗಳನ್ನು ಸೂಚಿಸುತ್ತದೆ. ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಇತರರು ಕೂಡ ಕೇಸರಿ ಮತ್ತು ಇತರ ಬಣ್ಣದ ಶಾಲುಗಳನ್ನು ಧರಿಸಲು ಬಯಸುತ್ತಾರೆ ಎಂದು ಬಿಜೆಪಿ ನಾಯಕ ಸಿಟಿ ರವಿ ಶನಿವಾರ ಹೇಳಿದ್ದಾರೆ.

ಸರ್ಕಾರದ 5ನೇ ಗ್ಯಾರಂಟಿ 'ಯುವನಿಧಿ' ನೋಂದಣಿಗೆ ಡಿಸೆಂಬರ್ 26ಕ್ಕೆ ಚಾಲನೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯದಾದ ‘ಯುವನಿಧಿ’ ನಿರುದ್ಯೋಗ ಭತ್ಯೆ ಯೋಜನೆಯ (Yuva Nidhi Scheme) ನೋಂದಣಿಗೆ ಡಿಸೆಂಬರ್ 26ರಂದು ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಗುರುವಾರ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಬುಧವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ಆರ್ ಅಶೋಕ್
ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು.

ಯುವ ನಿಧಿ ಯೋಜನೆಗೆ ಡಿಸೆಂಬರ್ 21 ರಿಂದ ನೋಂದಣಿ ಆರಂಭ: ಸಚಿವ ಡಾ. ಶರಣಪ್ರಕಾಶ ಪಾಟೀಲ
ಕಾಂಗ್ರೆಸ್ ಸರ್ಕಾರದ ಐದನೇ ಖಾತರಿಯಾದ ಯುವ ನಿಧಿ ಯೋಜನೆಯ ನೋಂದಣಿ ಡಿಸೆಂಬರ್ 21 ರಿಂದ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಶನಿವಾರ ತಿಳಿಸಿದರು.

