Congress government

ಕಾಂಗ್ರೆಸ್ ಸರ್ಕಾರದಿಂದ ಕೃತಕ ವಿದ್ಯುತ್ ಅಭಾವ ಸೃಷ್ಟಿ; ಜಾರ್ಜ್ಗೆ ಹೈಕಮಾಂಡ್ ಏನಾದರೂ 'ಫಿಕ್ಸ್' ಮಾಡಿದೆಯೇ?: ಎಚ್ ಡಿಕೆ
ರಾಜ್ಯದಲ್ಲಿ ಬರ ಇರುವುದು ನಿಜ. ಅದರ ನಡುವೆಯೂ ಸಾಮರ್ಥ್ಯಕ್ಕೆ ತಕ್ಕಷ್ಟು ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ’ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲಿನ ಕೇಸು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ
ಮೇಕೆದಾಟು ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಕೋರಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ: ಕೆ ಎಸ್ ಈಶ್ವರಪ್ಪ
ರಾಜ್ಯದಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪದೇ ಪದೇ ಸರ್ಕಾರ ಪತನವಾಗಲಿದೆ ಎಂದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ!
ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ 42 ಕೋಟಿ ರುಪಾಯಿಗಳನ್ನು ವಶಕ್ಕೆ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ನವರಾತ್ರಿಗೂ ಮೊದಲೆ ಕತ್ತಲೆ ಭಾಗ್ಯ; ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು: ಎಚ್.ಡಿ. ಕುಮಾರಸ್ವಾಮಿ
ರಾಜ್ಯ ಕಾಂಗ್ರೆಸ್ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕೋಲಾರ ಪಾಕಿಸ್ತಾನದಲ್ಲಿದೆಯೇ? ನಮ್ಮ ಖಡ್ಗ, ಗದೆ, ತ್ರಿಶೂಲ, ಸುದರ್ಶನ ಚಕ್ರ ಹೊರ ತೆಗೆಯಬೇಕಾಗುತ್ತದೆ: ಸಿ.ಟಿ ರವಿ
ಕೋಲಾರದಲ್ಲಿ ಪ್ರತಿಭಟನೆಗೆ ಬರಬಾದರು ಎಂದು ಹೇಳುತ್ತಾರೆ. ಇದೇನು ಪಾಕಿಸ್ತಾನದಲ್ಲಿದೆಯೇ, ನಾನು ತಾಲಿಬಾಲಿನವನಲ್ಲ, ಬಾಂಬ್ ಹಾಕಿದವನಲ್ಲ. ಕೋಲಾರದ ಜನರು ಉಂಡ ಮನೆಗೆ ಎರಡು ಬಗೆದವರ ಬಗ್ಗೆ ಎಚ್ಚರ ವಹಿಸಬೇಕು .

ಕಾಂಗ್ರೆಸ್ ಆಡಳಿತದಲ್ಲಿ ಮಧ್ಯಮ ವರ್ಗದವರ ಬದುಕು ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ: ಸಂಸದ ತೇಜಸ್ವಿ ಸೂರ್ಯ
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಮಧ್ಯಮ ವರ್ಗದವರ ಬದುಕು ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಕರ್ನಾಟಕದ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ: ರಾಹುಲ್ ಗಾಂಧಿ
ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ ಮತ್ತು 'ನಮ್ಮ ಆಡಳಿತ ಮಾದರಿಯು ರಾಜ್ಯದ ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡುವುದನ್ನು ಖಾತ್ರಿಪಡಿಸುತ್ತಿರುವುದು ಹೆಮ್ಮೆಯ ಸಂಗತಿ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಶ್ಲಾಘಿಸಿದರು.

ಶಿವಮೊಗ್ಗ ಗಲಭೆ: ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ; ಡಿಕೆ ಶಿವಕುಮಾರ್
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಯಾರೇ ಕಾನೂನನ್ನು ಕೈಗೆತ್ತಿಕೊಂಡರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

