Congress government

ಕಾಂಗ್ರೆಸ್ ಸರ್ಕಾರಕ್ಕೆ ತಿಂಗಳು ಮೂರು; ಒಳಜಗಳ ನೂರಾರು; ಅನ್ನದಾತನಿಗೆ ಆತ್ಮಹತ್ಯೆ ಗ್ಯಾರಂಟಿ!
ಇದು ಯಾರು ಬರೆದ ಕಥೆಯೋ, ನಮಗಾಗಿ ಬಂದ ವ್ಯಥೆಯೋ ಎಂಬಂತಾಗಿದೆ ಅನ್ನದಾತರ ಬದುಕು, ರಾಜ್ಯದಲ್ಲಿ ದಿನನಿತ್ಯ ರೈತರು ನೇಣಿನ ಕುಣಿಕೆಗೆ ಕೊರಳಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ಸಮಸ್ಯೆ ಎದುರಾದಾಗ ಬೀದಿಯಲ್ಲಿ ನಿಂತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಸಿಎಂ ಸಿದ್ದರಾಮಯ್ಯ ಬೃಹನ್ನಳೆ ನಾಟಕ!
ರಾಜ್ಯದಲ್ಲಿ ನೂರಾರು ಸಮಸ್ಯೆಗಳು ಎದುರಾಗಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೀದಿಯಲ್ಲಿ ನಿಂತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಬೃಹನ್ನಳೆ ನಾಟಕವಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಕಾವೇರಿ ವಿಚಾರದಲ್ಲಿ ಸರ್ಕಾರ ಹೆಜ್ಜೆಹೆಜ್ಜೆಗೂ ಎಡವಿದೆ; ನೀರಿನ ವಿಚಾರದಲ್ಲಿ ಬೆಂಗಳೂರಿಗರ ಮೌನ ಅಚ್ಚರಿ ತಂದಿದೆ: ಎಚ್.ಡಿ.ಕೆ
ನೆರೆ ರಾಜ್ಯಗಳಿಂದ ಬಂದು ಇಲ್ಲಿ ನೆಮ್ಮದಿಯಾಗಿರುವವರು ಕೂಡ ಕಾವೇರಿ ಬಗ್ಗೆ ದನಿ ಎತ್ತಬೇಕು. ಇವರಾರಿಗೂ ಕಾವೇರಿ ನೀರಿನ ಚಿಂತೆಯೇ ಇಲ್ಲ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಪತ್ರ ಬರೆದಿದ್ದ ಒಂಬತ್ತನೇ ತರಗತಿ ಬಾಲಕಿ!
ಕುಂದಗೋಳ ತಾಲೂಕಿನ ಮಳಲಿ ಗ್ರಾಮದ ಶ್ರೀ ಜಗದ್ಗುರು ಫಕ್ಕೀರೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿರುವ ಆಶಾ ಪಾಟೀಲ ಅವರು ಶನಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಲಾಘವ ಮಾಡಿದ್ದು ವಿಶೇಷವಾಗಿತ್ತು.

ದೇಶದ್ಯಾಂತ ಮುಂಗಾರು ಕಣ್ಣಮುಚ್ಚಾಲೆ; ಗಗನಕ್ಕೇರುತ್ತಿದೆ ಅಕ್ಕಿ ಬೆಲೆ: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯಕ್ಕೆ ಕುತ್ತು!
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಈಡೇರಿಸಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ, ಆದರೆ ಈ ಯೋಜನೆಗೆ ಗಂಭೀರ ತೊಡಕು ಎದುರಾಗಿದೆ.

ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲು ಕಾಂಗ್ರೆಸ್ ಪೊಲೀಸರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಆರೋಪ
ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಮತ್ತು ಕಿರುಕುಳ ನೀಡಲು ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ, ಬಿಜೆಪಿ ನಿಯೋಗವು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿತು.

ಮಾನವ-ಆನೆ ಸಂಘರ್ಷ ತಡೆಗೆ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧ: ಸಚಿವ ಈಶ್ವರ ಖಂಡ್ರೆ
ರಾಜ್ಯದಲ್ಲಿ ಮಾನವ- ಪ್ರಾಣಿ ಸಂಘರ್ಷವನ್ನು ಎದುರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಹಂತ ಹಂತವಾಗಿ ಈ ಸಂಘರ್ಷವನ್ನು ನಿಭಾಯಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಬುಧವಾರ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಬಂದ್; ಸೆ. 11ರಂದು ರಸ್ತೆಗಿಳಿಯದ ಆಟೋಗಳು, ಕ್ಯಾಬ್‌ಗಳು
ಶಕ್ತಿ ಯೋಜನೆ ಜಾರಿಯಿಂದಾಗಿ ತಮ್ಮ ಆದಾಯಕ್ಕೆ ಹೊಡೆತ ಬಿದ್ದಿದ್ದು, ಸರ್ಕಾರ ಪರಿಹಾರ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಒತ್ತಾಯಿಸಿದ್ದು, ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರ್ಕಾರದ ವಿರುದ್ಧ ಸೆ.11ರಂದು ಬಂದ್‌ಗೆ ಕರೆ ನೀಡಲಾಗಿದೆ. ಅಂದು ನಗರದಲ್ಲಿ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‌ಗಳು ಸಂಚರಿಸುವುದಿಲ್ಲ ಎನ್ನಲಾಗಿದೆ.

ಇಂದಿರಾಗಾಂಧಿ ಕಾಲದ ಗತವೈಭವ ಎಂದರೆ ತುರ್ತು ಪರಿಸ್ಥಿತಿಯೇ? ನಳಿನ್ ಕುಮಾರ್ ಕಟೀಲ್
ಇಂದಿರಾಗಾಂಧಿ ಕಾಲದ ಗತವೈಭವ ಮರುಕಳಿಸುತ್ತಿದೆ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ಆ ಗತವೈಭವದಲ್ಲಿ ತುರ್ತು ಪರಿಸ್ಥಿತಿ ಯನ್ನೂ ಹೇರಲಾಗಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

