Congress government

ಸರ್ಕಾರಕ್ಕೆ ನೀಡಿದ್ದ ಗಡುವು ಅಂತ್ಯ; ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಸಭೆಯಲ್ಲಿ 'ಬೆಂಗಳೂರು ಬಂದ್' ಬಗ್ಗೆ ನಿರ್ಧಾರ
ತಮ್ಮ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ರಾಜ್ಯ ಸರ್ಕಾರಕ್ಕೆ ನೀಡಿದ್ದ ಹತ್ತು ದಿನಗಳ ಗಡುವು ಬುಧವಾರ ಅಂತ್ಯಗೊಂಡಿದ್ದು, ಖಾಸಗಿ ಸಾರಿಗೆ ಸಂಸ್ಥೆಗಳು ಇದೀಗ ‘ಬೆಂಗಳೂರು ಬಂದ್’ಗೆ ಸಜ್ಜಾಗುತ್ತಿವೆ.

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸಲಿದೆ, ಜನಪರ ಆಡಳಿತ ನೀಡಲಿದೆ: ಸಲೀಂ ಅಹ್ಮದ್
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸ್ಥಿರತೆಯ ಪ್ರಶ್ನೆಗಳ ನಡುವೆ, ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತದೆ ಮತ್ತು ಸ್ಥಿರ, ಜನಪರ ಆಡಳಿತವನ್ನು ನೀಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಂಗಳವಾರ ಹೇಳಿದ್ದಾರೆ.

'ನಮ್ಮ ನಾಯಕನನ್ನು ಮುಖ್ಯಮಂತ್ರಿ ಮಾಡಪ್ಪಾ'; ದೇವರ ಮೊರೆ ಹೋದ ಡಿಕೆಶಿ, ಪರಮೇಶ್ವರ್; ಬೆಂಬಲಿಗರ ಪ್ರಾರ್ಥನೆ!
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಜಿಲ್ಲೆಗೆ ಭೇಟಿ ನೀಡಿ ನಿನ್ನೆ ಭಾನುವಾರ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ 100 ದಿನ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ದೇವರ ದರ್ಶನ ಪಡೆದರು.

ಗೃಹಲಕ್ಷ್ಮಿ ಯೋಜನೆ ಯಶಸ್ಸಿಗೆ ಸರ್ಕಾರದ ಭರ್ಜರಿ ಸಿದ್ಧತೆ: ಸಿಎಂ ಸಿದ್ದರಾಮಯ್ಯ ಸಹಿತ ಸರ್ಕಾರದ ಹಲವು ಸಚಿವರು ಮೈಸೂರಿನಲ್ಲಿ ಮೊಕ್ಕಾಂ
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ಮನೆಯ ಯಜಮಾನಿಯ ಖಾತೆಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ನಾಡಿದ್ದು ಆಗಸ್ಟ್ 30ರಂದು ಉದ್ಘಾಟನೆಗೊಳ್ಳುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಹಿತ ಅರ್ಧ ಡಜನ್ ಸಚಿವರು ಮೈಸೂರಿನಲ್ಲಿ ಮೊಕ್ಕಾಂ ಹೂಡಲಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿಕೆ ಶಿವಕುಮಾರ್
ಕರ್ನಾಟಕ-ತಮಿಳುನಾಡು ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಇಲ್ಲಿ ಹೇಳಿದರು.

ಸಿದ್ದರಾಮಯ್ಯ, ಡಿಕೆಶಿ ಜೊತೆಯಾಗಿ ಕೆಲಸ ಮಾಡುತ್ತಿದ್ದಾರಾ ಅಥವಾ ಪ್ರತಿಸ್ಪರ್ಧಿಯಾಗಿ ಕೆಲಸ ಮಾಡುತ್ತಿದ್ದಾರಾ?
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಗಸ್ಟ್ 30 ಕ್ಕೆ 100 ದಿನಗಳನ್ನು ಪೂರೈಸಲಿದ್ದು, ಐದು ಭರವಸೆಗಳಲ್ಲಿ ನಾಲ್ಕನ್ನು ಸ್ವಲ್ಪಮಟ್ಟಿಗೆ ಜಾರಿಗೊಳಿಸಿದೆ, ಆದರೆ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವೆ ಸಮನ್ವಯತೆ ಕೊರತೆಯ ಗುಸುಗುಸು ಇದೆ.

ಗೃಹ ಲಕ್ಷ್ಮಿ ಯೋಜನೆ ಉದ್ಘಾಟನೆ: ಕಾರ್ಯಕ್ರಮಕ್ಕೆ ಎಲ್ಲಾ ಶಾಸಕರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್
ಆಗಸ್ಟ್ 30ರಂದು ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವಂತೆ ಆಡಳಿತ ಮತ್ತು ವಿರೋಧ ಪಕ್ಷಗಳ ಎಲ್ಲಾ ಶಾಸಕರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಆಹ್ವಾನ ನೀಡಿದ್ದಾರೆ.

ಮಾತಲ್ಲೇ ಮಂಡಕ್ಕಿ ತಿನ್ನಿಸುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಭಂಡ ಸರ್ಕಾರದ ಒಣ ರಾಜಕೀಯವನ್ನು ಕನ್ನಡಿಗರು ಕ್ಷಮಿಸಲ್ಲ ಸ್ವಾಮಿ!
ಕರ್ನಾಟಕದಲ್ಲಿ ದುರಾದೃಷ್ಟವಶಾತ್ 10 ವರ್ಷದ ಬಳಿಕ ಮತ್ತೆ ಬರದ ಛಾಯೆ ಆವರಿಸಿದೆ. ಮುಂಗಾರಿನಲ್ಲಿ ಬಂದ ಅಲ್ಪ ಮಳೆಯನ್ನೇ ನಂಬಿ ಕಾವೇರಿ ಒಡಲಿನ ಎರಡೂ ಮಡಿಲುಗಳಲ್ಲಿ ರೈತರು ಬಿತ್ತನೆ ಮಾಡಿ ಬೆಳೆಗಾಗಿ ಕಾಯುತ್ತಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಆಪರೇಷನ್ ಹಸ್ತ: ನಾವಿಕನಿಲ್ಲದ ಹಡಗಿನ 'ಜಂಪಿಂಗ್ ಸ್ಟಾರ್ಸ್'; ಏನಿದು ಕಾಂಗ್ರೆಸ್ ನ ಗೇಮ್ ಪ್ಲಾನ್?
135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ನಾಲ್ಕು ವರ್ಷಗಳ ನಂತರ ಪಕ್ಷಕ್ಕೆ ಮರಳುವವರಿಗೆ ಮಹತ್ತರವಾದ ಹುದ್ದೆ ನೀಡುವ ಸ್ಥಿತಿಯಲ್ಲಿಲ್ಲ. ಇದರ ಜೊತೆಗೆ ಪಕ್ಷ ತೊರೆದು ಕಾಂಗ್ರೆಸ್ ಗೆ ಬರುವವರು ಸಹ ಸ್ಪಷ್ಟ ರಾಜಕೀಯ ಲಾಭವಿಲ್ಲದೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ದೊಡ್ಡ ಅಪಾಯವನ್ನು ತೆಗೆದುಕೊಳ್ಳಲು ಬಯಸುವುದಿಲ್ಲ.

