Congress government

ಸಿಎಂ-ಡಿಸಿಎಂ ಜೊತೆ ಇಂದು 8 ಶಾಸಕರು ಸಚಿವರಾಗಿ ಪ್ರಮಾಣ ವಚನ: ಮಲ್ಲಿಕಾರ್ಜುನ ಖರ್ಗೆ; ಆ ಶಾಸಕರು ಯಾರು?
ದಶಕ ನಂತರ ಕರ್ನಾಟಕದಲ್ಲಿ ಹೊಸ ಸ್ಥಿರ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿರುವುದು ಖುಷಿಯ ವಿಚಾರ. ಕರ್ನಾಟಕ ರಾಜ್ಯದ ಜನತೆಗೆ ನೂತನ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು ದೇಶದಲ್ಲಿಯೇ ಜನರಿಗೆ ಬದುಕಲು ಪೂರಕ ವಾತಾವರಣ ನಿರ್ಮಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನನಗೆ ಪೂರ್ವದ ದ್ವಾರ, ನನಗೆ ಬೇಕು ಉತ್ತರದ ಬಾಗಿಲು: 'ವಾಸ್ತು' ಕೊಠಡಿಗಾಗಿ ನೂತನ ಶಾಸಕರ ದುಂಬಾಲು!
ಶನಿವಾರ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ರಚನೆಯಾಗುತ್ತಿದ್ದು, ವಿಧಾನಸೌಧ, ವಿಕಾಸಸೌಧ, ಶಾಸಕರ ಗೃಹ ಹಾಗೂ ಮಿನಿಸ್ಟರ್ಸ್ ಕ್ವಾರ್ಟರ್ಸ್‌ನಲ್ಲಿ ಉತ್ತಮ ಕೊಠಡಿಗಳನ್ನು ಪಡೆದುಕೊಳ್ಳಲು ಪೈಪೋಟಿ ಆರಂಭವಾಗಿದೆ.

ಸ್ಪೀಕರ್ ಸ್ಥಾನ ದೊಡ್ಡ ಜವಾಬ್ದಾರಿ, ಆ ಅರ್ಹತೆ ನನಗಿಲ್ಲ: ಆರ್.ವಿ ದೇಶಪಾಂಡೆ ಟಾಂಗ್
ಹೊಸ ಕಾಂಗ್ರೆಸ್ ಸರ್ಕಾರದಲ್ಲಿ ನನಗೆ ವಿಧಾನಸಭೆ ಸ್ಪೀಕರ್ ಆಗುವ ಅರ್ಹತೆ ಇಲ್ಲವೆಂದು ಅನಿಸುತ್ತದೆ ಎಂದು ಸ್ವತಃ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ಗೆಲುವಿನಿಂದ ಉತ್ಸುಕರಾಗಿರುವ ಮಾಜಿ ಕಾರ್ಪೋರೇಟರ್ಸ್: ಪಾಲಿಕೆ ಚುನಾವಣೆ ನಡೆಸಲು ಹೊಸ ಸರ್ಕಾರಕ್ಕೆ ಒತ್ತಾಯ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನಿಂದ ಉತ್ಸುಕರಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್‌ಗಳು ಶೀಘ್ರವೇ ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬರ್ತಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ: ಬೆಸ್ಕಾಂ ಸಿಬ್ಬಂದಿ ಮುಂದೆ ಪಟ್ಟುಹಿಡಿದ ಗ್ರಾಮಸ್ಥರು!
ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ಘೋಷಿಸಿತ್ತು. ಅದರಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕೂಡ ಒಂದು. ಈಗ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಸರ್ಕಾರ ರಚಿಸಲು ಹೊರಟಿರುವ ಕಾಂಗ್ರೆಸ್ ಗೆ ಸಿಎಂ ಆಯ್ಕೆ ಕಗ್ಗಂಟಾಗಿ ಉಳಿದಿದೆ.

ಮಳೆ ಬಂದಾಗ ಬೆಂಗಳೂರು ಜಲಾವೃತವಾಗುವುದಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕಾರಣ: ಸಿಎಂ ಬೊಮ್ಮಾಯಿ
ಸಿಲಿಕಾನ್ ಸಿಟಿ, ಉದ್ಯಾನನಗರಿ ಎಂದು ಕರೆಸಿಕೊಳ್ಳುವ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಒಂದು ದಿನ ವ್ಯಾಪಕವಾಗಿ ಮಳೆ ಬಿದ್ದಾಗ ಬಹುತೇಕ ಕಡೆಗಳಲ್ಲಿ ನೀರು ತುಂಬಿಕೊಂಡು, ತಗ್ಗು ಪ್ರದೇಶಗಳು ಜಲಾವೃತವಾಗಿ ಹಾನಿ ಉಂಟಾಗುತ್ತದೆ. ಹಲವೆಡೆ ಅನಾಹುತವಾಗುತ್ತವೆ. ಈ ಬಾರಿಯ ಮಳೆಗೆ ಬೆಂಗಳೂರಿನಲ್ಲಿ ಸಾಕಷ್ಟು ತೊಂದರೆಯಾಗಿದೆ.

ಕಾಂಗ್ರೆಸ್ ಅವಧಿಯಲ್ಲಿ ಕೋವಿಡ್ ಬಂದಿದಿದ್ದರೆ ಅಣ್ಣ-ತಂಗಿ ಇಬ್ಬರು ಇಟಲಿಗೆ ಪರಾರಿಯಾಗುತ್ತಿದ್ದರು: ಯೋಗಿ ಆದಿತ್ಯನಾಥ್
ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಬಂದಿದ್ದರೇ ಅಣ್ಣ-ತಂಗಿ ಇಬ್ಬರು ಇಟಲಿಗೆ ಓಡಿ ಹೋಗುತ್ತಿದ್ದರು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲೇವಡಿ ಮಾಡಿದ್ದಾರೆ.

ರಾಜಸ್ಥಾನ: ನಾಳೆಯಿಂದ ಅಧಿವೇಶನ ಆರಂಭ, ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ನಿರ್ಧಾರ
ನಾಳೆಯಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನ ಸಂದರ್ಭದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯವೊಂದನ್ನು ಮಂಡಿಸಲಿದೆ ಎಂದು ಪ್ರತಿಪಕ್ಷ ನಾಯಕ ಗುಲಾಬ್ ಚಂದ್ ಕಟಾರಿಯಾ ಗುರುವಾರ ತಿಳಿಸಿದ್ದಾರೆ.

ರಾಜಸ್ಥಾನ ಸರ್ಕಾರದ ಬಿಕ್ಕಟ್ಟು Live Updates: ಇತ್ತ ಸಿಎಲ್ ಪಿ ಸಭೆ, ಅತ್ತ ಕಾಂಗ್ರೆಸ್ ನಾಯಕರಿಗೆ ಐಟಿ ದಾಳಿಯ ಶಾಕ್!
ರಾಜಸ್ಥಾನದಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟ ಜು.13 ರಂದು ಹೊಸ ತಿರುವು ಪಡೆದುಕೊಂಡಿದ್ದು ಕಾಂಗ್ರೆಸ್ ನಾಯಕರ ಮನೆ ಐಟಿ ದಾಳಿ ನಡೆದಿದೆ. ಐಟಿ ದಾಳಿಯ ನಡುವೆಯೇ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಿಎಲ್ ಪಿ ಸಭೆ ನಡೆಸುತ್ತಿದ್ದಾರೆ.

