Congress guarantee

13 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರ ಬಜೆಟ್ ಕೌಶಲ್ಯ ಒರೆಗೆ ಹಚ್ಚುವ ಸಮಯ; ಈ ಬಾರಿ ಕಠಿಣ ಪರೀಕ್ಷೆ!
ರಾಜ್ಯ ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಜುಲೈ 7ರಂದು ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಮಂಡಿಸುತ್ತಿರುವ ಬಜೆಟ್ ಇದಾಗಿದೆ.

ಗ್ಯಾರಂಟಿ ಘೋಷಣೆ ಜಾರಿ ವಿಳಂಬ, ಮತಾಂತರ ನಿಷೇಧ ಕಾಯ್ದೆ ಹಿಂತೆಗೆತಕ್ಕೆ ನಿರ್ಧಾರ: ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್ ಐದು ಗ್ಯಾರಂಟಿ ಘೋಷಣೆ ವಿಳಂಬ ವಿರೋಧಿಸಿ, 5 ಗ್ಯಾರಂಟಿಗಳಿಗೆ ವಿಧಿಸಿರುವ ಷರತ್ತುಗಳು, ಗೋ ಹತ್ಯೆ ಮತ್ತು ಮತಾಂತರ ಕಾಯ್ದೆಯನ್ನ ವಾಪಾಸ್ ಪಡೆಯುತ್ತಿರುವ ಬಗ್ಗೆ ವಿರೋಧಿಸಿ ಇಂದು ಮಂಗಳವಾರ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಯೋಜನೆ: ಭರವಸೆ ಈಡೇರಿಸದಿದ್ದರೆ ವಿಧಾನಸೌಧದಲ್ಲಿ ಪ್ರತಿಭಟನೆ: ಬಿಜೆಪಿ
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಎಲ್ಲಾ 5 ಭರವಸೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಬೇಕು. ಇಲ್ಲದಿದ್ದರೆ, ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಎಚ್ಚರಿಕೆ ನೀಡಿದೆ.

ಬಿಜೆಪಿ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಈಗ ಜಾರಿಗೆ ಬಂದಿದೆ; ಬಾಡಿಗೆ ಮನೆ, ಸ್ವಂತ ಮನೆ ಎಲ್ಲರಿಗೂ ಗೃಹಜ್ಯೋತಿ ಲಭ್ಯ: ಸಚಿವ ಜಾರ್ಜ್
ಹಿಂದಿನ ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಗ್ಯಾರಂಟಿ ಭಾಗ್ಯಗಳ ಅನುಷ್ಠಾನ ಕುರಿತು ಸಿಎಂ ಸಿದ್ದರಾಮಯ್ಯ ಸರಣಿ ಸಭೆ: ಜೂನ್ 1ಕ್ಕೆ ಅಂತಿಮ ನಿರ್ಧಾರ
ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ರಾಜ್ಯದ ಜನತೆಗೆ ನೀಡಿದ್ದ 5 ಭರವಸೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಸೋಮವಾರ ವಿಧಾನಸೌಧದಲ್ಲಿ ಹಣಕಾಸು ಮತ್ತು ಇತರ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿದರು.

ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ, ಜೂನ್ 1 ರಿಂದ ಹೋರಾಟ ಮಾಡುತ್ತೇವೆ: ಪ್ರತಾಪ್ ಸಿಂಹ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತಿದ್ದೀರಾ ಇದನ್ನು ಮೊದಲು ನಿಲ್ಲಿಸಿ. ಸಿಎಂ ಕುರ್ಚಿ ಶಾಶ್ವತ. ಆದರೆ ಪೊಲೀಸ್ ವ್ಯವಸ್ಥೆ ಶಾಶ್ವತವಾಗಿರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ನೆಪ ಹೇಳದೆ ತಕ್ಷಣ 5 ಗ್ಯಾರಂಟಿಗಳನ್ನು ಈಡೇರಿಸಿ: ಕಾಂಗ್ರೆಸ್ ಪಕ್ಷಕ್ಕೆ ಜನರ ಆಗ್ರಹ
ಐದು ಗ್ಯಾರಂಟಿಗಳನ್ನು ಘೋಷಿಸಿ 135 ಶಾಸಕರ ಗೆಲುವಿನೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸಲು ಮುಂದಾಗಿದೆ. ಆದರೆ ಚುನಾವಣಾ ಪೂರ್ವ ಭರವಸೆ ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸಬೇಕೆಂದು ರಾಜ್ಯಾದ್ಯಂತ ಜನಸಾಮಾನ್ಯರ ಕೂಗು ಜೋರಾಗುತ್ತಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ 5 ಗ್ಯಾರಂಟಿಗಳು ಸಂಪುಟ ಸಭೆಯಲ್ಲಿಯೇ ಜಾರಿ: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ
ಗೃಹಲಕ್ಷ್ಮಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಮನೆ ಯಜಮಾನಿಗೆ 2 ಸಾವಿರ ರೂಪಾಯಿ, ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂಪಾಯಿ, ಡಿಪ್ಲೊಮೊ ಪದವೀಧರರಿಗೆ 1,500 ರೂಪಾಯಿ ಆರ್ಥಿಕ ನೆರವು ಈ 5 ಗ್ಯಾರಂಟಿಗಳನ್ನು ಗ್ಯಾರಂಟಿ ನಾವು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನೀಡಲಾಗುವುದು ಎಂದು ಎಐಸಿಸ

