ದೇಶಜ.30ಕ್ಕೆ ಭಾರತ್ ಜೋಡೋ ಯಾತ್ರೆ ಸಮಾರೋಪ ಸಮಾರಂಭ: ಕಾಂಗ್ರೆಸ್ ಆಹ್ವಾನ ತಿರಸ್ಕರಿಸಿದ ಜೆಡಿಯು
ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಜನವರಿ 30 ರಂದು ನಡೆಯಲಿರುವ 'ಭಾರತ್ ಜೋಡೋ' ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯುಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಆದರೆ, ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಜೆಡಿಯು ಅಧ್ಯಕ್ಷ ಲಾಲನ್ ಸಿಂಗ್ ಗುರುವಾರ ಹೇಳಿದ್ದಾರೆ.