ದೇಶಸಿಖ್ ವಿರೋಧಿ ದಂಗೆ: ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಕಾಂಗ್ರೆಸ್ ನಾಯಕ ಟೈಟ್ಲರ್!
1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಮಂಗಳವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಕೇಂದ್ರೀಯ ತನಿಖಾ ದಳಕ್ಕೆ ನೋಟಿಸ್ ಜಾರಿ ಮಾಡಿದೆ.