ರಾಜಕೀಯಕಟುಕರಿಗೆ ಕಣ್ಣೀರು ಬರದು, ಮಾತೃ ಹೃದಯ ಇದ್ದವರಿಗೆ ಬರುತ್ತೆ: ನಿಖಿಲ್ ಬಗ್ಗೆ ವ್ಯಂಗ್ಯವಾಡಿದವರಿಗೆ ಕುಮಾರಸ್ವಾಮಿ ತಿರುಗೇಟು
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮತಯಾಚನೆ ವೇಳೆ ಕಣ್ಣೀರು ಹಾಕಿದ್ದನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, 'ಕಟುಕರಿಗೆ ಕಣ್ಣೀರು ಬರುವುದಿಲ್ಲ' ಎಂದು ಹೇಳಿದರು.