ರಾಜ್ಯಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆಗೆ ಜಮೀನು ಗುರುತಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಬಿಸಿಲ ನಾಡು ಗಣಿ ಜಿಲ್ಲೆ ಬಳ್ಳಾರಿಯನ್ನು ಭಾರತದ ಜೀನ್ಸ್ ರಾಜಧಾನಿಯನ್ನಾಗಿ ಮಾಡುವುದಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಚುನಾವಣಾ ಪೂರ್ವ ನೀಡಿದ ಭರವಸೆ ನನಸಾಗುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ. ಜಿಲ್ಲೆಯಲ್ಲಿ ಜೀನ್ಸ್ ಜವಳಿ ಪಾರ್ಕ್ ಸ್ಥಾಪಿಸಲು ಭೂಮಿಯನ್ನು ಆಯ್ಕೆ ಮಾಡುವಂತೆ ಕರ್ನಾಟಕ ಸರ್ಕಾರವು ಬಳ್ಳಾರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ.