ದೇಶಆಂಧ್ರ ಪ್ರದೇಶ: ಕಂಟೈನರ್-ಮಿನಿ ಟ್ರಕ್ ಡಿಕ್ಕಿ, ಆರು ಮಂದಿ ದಾರುಣ ಸಾವು
ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಶುಕ್ರವಾರ ಕಂಟೈನರ್ ಮತ್ತು ಮಿನಿ ಟ್ರಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯ ಪ್ರಕಾರ, ಮುಂಜಾನೆ 5 ಗಂಟೆ ಸುಮಾರಿಗೆ ಸೀತನಪಲ್ಲಿಯಲ್ಲಿ ಈ ಘಟನೆ ನಡೆದಿದೆ.