contractor

ಕಾಮಗಾರಿ ಬಿಲ್ ಪಾವತಿಸುವಲ್ಲಿ ನಿರ್ಲಕ್ಷ್ಯ: ಡೆತ್ ನೋಟ್ ಬರೆದಿಟ್ಟು ದಾವಣಗೆರೆ ಗುತ್ತಿಗೆದಾರ ಆತ್ಮಹತ್ಯೆ!
ಡೆತ್‌ನೋಟ್'ನಲ್ಲಿ ಕೆಆರ್‌ಐಡಿಎಲ್ ಕಾಮಗಾರಿ ನಡೆಸಿದ ಹಣ ಬಂದಿಲ್ಲ ಎಂಬುದು ಸೇರಿ ಇನ್ನಿತರ ಕಾರಣಗಳನ್ನೂ ಪ್ರಸ್ತಾಪಿಸಿದ್ದಾರೆ. ಇದನ್ನು ಆಧರಿಸಿ ಗೌಡರ್ ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು: ಈಜಿಪುರ ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ BBMP ಕಾರಣ- ಗುತ್ತಿಗೆದಾರರ ಆರೋಪ
ಈಜಿಪುರ ಮೇಲ್ಸೇತುವೆ ಯೋಜನೆಯನ್ನು ಕೈಗೆತ್ತಿಕೊಂಡಿರುವ ನಿರ್ಮಾಣ ಸಂಸ್ಥೆ ಬಿಎಸ್‌ಸಿಪಿಎಲ್ ಈ ಸಂಬಂಧ ಪ್ರತಿಕ್ರಿಯಿಸಿದ್ದು, ಯೋಜನೆಯನ್ನು ನಿರ್ವಹಿಸಲು ಸಾಕಷ್ಟು ಕಾರ್ಮಿಕರಿದ್ದಾರೆ ಮತ್ತು ಸಿಬ್ಬಂದಿ ಕೊರತೆಯ ವರದಿಗಳು ನಿಜವಲ್ಲ ಎಂದು ಹೇಳಿದೆ.

ಮಂಗಳೂರು: ಸಿಬಿಐ ಅಧಿಕಾರಿ ಸೋಗಿನಲ್ಲಿ ಗುತ್ತಿಗೆದಾರರಿಗೆ 15 ಲಕ್ಷ ರೂ. ವಂಚನೆ
ಸಿಬಿಐ ಅಧಿಕಾರಿಯ ಸೋಗಿನಲ್ಲಿ ಗುತ್ತಿಗೆದಾರರೊಬ್ಬರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳಿ 15 ಲಕ್ಷ ರೂ.ಗೂ ಅಧಿಕ ಹಣವನ್ನು ದೋಚಿರುವ ಘಟನೆ ಭಾನುವಾರ ನಡೆದಿದೆ. ಕೊಟ್ಟಾರ ನಿವಾಸಿಯಾದ ಸಂತ್ರಸ್ತರಿಗೆ ಏಪ್ರಿಲ್ 25 ರಂದು ಕರೆ ಬಂದಿದೆ. ಬಳಿಕ ಈ ವಂಚನೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಅವರು ಹೇಳಿದರು.

ರಾಮಮೂರ್ತಿಗೆ ಕೃಷ್ಣಶಿಲೆ ಕೊಟ್ಟಾತನಿಗೆ 80 ಸಾವಿರ ರೂ. ದಂಡ: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಆಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಆಯ್ಕೆಯಾಗಿರುವ ‘ಬಾಲರಾಮ’ನ ಮೂರ್ತಿ ಕೆತ್ತಲು ಬಳಸಿದ ಕೃಷ್ಣಶಿಲೆಯನ್ನು ಒದಗಿಸಿದ ಕಲ್ಲು ಗಣಿಗಾರಿಕೆ ಗುತ್ತಿಗೆದಾರನಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದಂಡ ವಿಧಿಸಿತ್ತು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದ್ದು, ಸರ್ಕಾರದ ಈ ನಡೆಗೆ ಬಿಜೆಪಿ ತೀವ್ರ ಕಿಡಿಕಾರಿದೆ.

ಕೊಪ್ಪಳ: ವಿದ್ಯುತ್ ಸ್ಪರ್ಶಿಸಿ ನೆನಪಿನ ಶಕ್ತಿ ಕಳೆದುಕೊಂಡ 10 ವರ್ಷದ ಬಾಲಕ; ಗುತ್ತಿಗೆದಾರನ ವಿರುದ್ಧ ದೂರು
ಜಿಲ್ಲೆಯ ಕಾರಟಗಿ ತಾಲೂಕಿನ ಮಿಲಾಪುರ ಗ್ರಾಮದಲ್ಲಿ 10 ವರ್ಷದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಆತ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಪ್ರಕರಣಖ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರನ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗುತ್ತಿಗೆದಾರರ ಸಾಲ ತೀರಿಸಲು 600 ರೂ.ಕೋಟಿ ಸಾಲ ಕೋರಿ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು(BBMP) ಗುತ್ತಿಗೆದಾರರಿಗೆ 2,500 ಕೋಟಿ ರೂಪಾಯಿ ನೀಡಲು ಬಾಕಿ ಉಳಿಸಿಕೊಂಡಿದ್ದು, ಕೆಲವು ಬಿಲ್‌ಗಳನ್ನು ಇತ್ಯರ್ಥಪಡಿಸಲು 600 ಕೋಟಿ ರೂಪಾಯಿ ಸಾಲ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಪಾಲಿಕೆಯು 2020 ರಿಂದ ಗುತ್ತಿಗೆದಾರರಿಗೆ ಯಾವುದೇ ಬಿಲ್‌ಗಳನ್ನು ತೆರವುಗೊಳಿಸಿಲ್ಲ ಎಂದು ಹೇಳಲಾಗಿದೆ.

ವೈದ್ಯಕೀಯ ಸೀಟು ಕೊಡಿಸುವುದಾಗಿ ಹೇಳಿ ಒಕ್ಕಲಿಗರ ಸಂಘದ ಪದಾಧಿಕಾರಿಯಿಂದ ಗುತ್ತಿಗೆದಾರನಿಗೆ 35 ಲಕ್ಷ ರೂ. ವಂಚನೆ
ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಯೊಬ್ಬರು ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ಗುತ್ತಿಗೆದಾರರಿಗೆ 35 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರಧಾನಿ ಭೇಟಿ ವೇಳೆ ಕಳಪೆ ಕಾಮಗಾರಿ: ಬಿಬಿಎಂಪಿಯಿಂದ ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ವೇಳೆಯಲ್ಲಿ ಕಳಪೆ ಕಾಮಗಾರಿ ಕಾರಣಕ್ಕೆ ಮೂವರು ಬಿಬಿಎಂಪಿ ಇಂಜಿನಿಯರ್ ಗಳ ವಿರುದ್ಧ ಷೋಕಾಸ್ ನೋಟಿಸ್ ಹೊರಡಿಸಿದ ನಂತರ ಗುತ್ತಿಗೆದಾರ ರಮೇಶ್ ಗೆ 3 ಲಕ್ಷ ರೂಪಾಯಿ ದಂಡ ವಿಧಿಸಿರುವುದಾಗಿ ಪಾಲಿಕೆ ಹೇಳಿದೆ.

ಬೆಂಗಳೂರು: ಚಾಕು ತೋರಿಸಿ ನಮ್ಮ ಮೆಟ್ರೋ ಪಾರ್ಕಿಂಗ್ ಗುತ್ತಿಗೆದಾರನ ದರೋಡೆ
ಇತ್ತೀಚಿಗೆ ಸ್ವಾಮಿ ವಿವೇಕಾನಂದ ರಸ್ತೆ ನಮ್ಮ ಮೆಟ್ರೋ ನಿಲ್ದಾಣದಲ್ಲಿನ ಪಾರ್ಕಿಂಗ್ ಪ್ರದೇಶದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ಚಾಕು ತೋರಿಸಿ ಮೆಟ್ರೋ ಗುತ್ತಿಗೆದಾರರೊಬ್ಬರಿಂದ 16 ಸಾವಿರ ರೂ. ದರೋಡೆ ಮಾಡಿದ್ದಾನೆ.

