Corona Virus

ಕೊರೋನಾ ವೈರಸ್ ಎಫೆಕ್ಟ್: ಎನ್ ಪಿಆರ್-ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪರಿಷ್ಕರಣೆ ಮುಂದೂಡಿದ ಕೇಂದ್ರ ಸರ್ಕಾರ
ಕೊರೋನಾ ವೈರಸ್ ಸೋಂಕು (ಕೋವಿಡ್–19) ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಪರಿಷ್ಕರಣೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಕೊರೋನಾ ಸೋಂಕು ಭೀತಿ, ದುಬೈಯಿಂದ ಮರಳಿದ ವ್ಯಕ್ತಿ ಆಸ್ಪತ್ರೆಗೆ ದಾಖಲು
ದುಬೈಯಿಂದ ಬೆಂಗಳೂರು ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕರಾಯ ಎಂಬ ಗ್ರಾಮಕ್ಕೆ ಬಂದಿರುವ ಯುವಕನೋರ್ವ ಕೆಮ್ಮು-ನೆಗಡಿಯಿಂದ ಬಳಲುತ್ತಿದ್ದು, ಸ್ಥಳೀಯ ಪಂಚಾಯತ್ ಆಡಳಿತದ ಸೂಚನೆ ಮೇರೆಗೆ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೋನಾ ವೈರಸ್: 21 ದಿನಗಳ ಲಾಕ್ ಡೌನ್ ಹಿನ್ನಲೆ, ಹೊಸ ಪಡಿತರ ಯೋಜನೆ ಘೋಷಿಸಿದ ಕೇಂದ್ರ ಸರ್ಕಾರ
ಮಾರಕ ಕೊರೋನಾ ವೈರಸ್ ಹಿನ್ನಲೆಯಲ್ಲಿ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಈ ಅವಧಿಯಲ್ಲಿ ಜನರ ಸಂಕಷ್ಟ ನಿವಾರಣೆಗೆ ಕೇಂದ್ರ ಸರ್ಕಾರ ಹೊಸ ಪಡಿತರ ಯೋಜನೆ ಘೋಷಣೆ ಮಾಡಿದೆ.

ಲಾಕ್ ಡೌನ್ ಆದೇಶ ಪಾಲಿಸಿ ಮನೆಯಲ್ಲೇ ಇರಿ, ಇಲ್ಲವೇ ಕಂಡಲ್ಲಿ ಗುಂಡಿಕ್ಕಲು ಆದೇಶ: ತೆಲಂಗಾಣ ಸಿಎಂ ಕೆಸಿಆರ್ ಎಚ್ಚರಿಕೆ!
ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕೆ ದೇಶದಲ್ಲಿ ಹೇರಲಾಗಿರುವ 21 ದಿನಗಳ ಲಾಕ್ ಡೌನ್ ಅವಧಿಯಲ್ಲಿ ಮನೆಯಲ್ಲೇ ಇರಿ. ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೀದಿಗಿಳಿದರೆ ಅಥವಾ ಪರಿಸ್ಥಿತಿ ಕೈ ಮೀರುವ ಪರಿಸ್ಥಿತಿ ಬಂದರೆ ಕಂಡಲ್ಲಿ ಗುಂಡಿಡುವಂತೆ ಪೊಲೀಸರಿಗೆ ಆದೇಶ ನೀಡಬೇಕಾಗುತ್ತದೆ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಹೇಳಿದ್ದಾರೆ.

ಕೊರೋನಾ ವೈರಸ್: 21 ದಿನಗಳ ಲಾಕ್ ಡೌನ್ ನಿಂದಾಗಿ ಭಾರತಕ್ಕೆ 9 ಲಕ್ಷ ಕೋಟಿ ರೂ ನಷ್ಟ: ತಜ್ಞರ ಅಂದಾಜು
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಬ್ರೇಕ್ ಹಾಕಲು ಭಾರತ ಸರ್ಕಾರ 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಿದ್ದು, ಇದರಿಂದ ದೇಶಕ್ಕೆ ಬರೊಬ್ಬರಿ 9 ಲಕ್ಷ ಕೋಟಿ ರೂ ನಷ್ಟವಾಗಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕ್ವಾರಂಟೈನ್ ನಲ್ಲಿದ್ದರೂ ಬೀದಿ ಸುತ್ತಲು ಬಂದವನಿಗೆ ಗ್ರಹಚಾರ ಬಿಡಿಸಿದ ಬೆಂಗಳೂರು ಪೊಲೀಸರು, ಕೇಸ್ ದಾಖಲು!
ಇಡೀ ದೇಶವೇ ಕೊರೋನಾ ವೈರಸ್ ಭೀತಿಯಿಂದ ಲಾಕ್ ಡೌನ್ ಆಗಿದ್ದು, ಇದರ ನಡುವೆಯೇ ವಿದೇಶದಿಂದ ಬಂದು ಕ್ವಾರಂಟೈನ್ ನಲ್ಲಿರಬೇಕಾದ ವ್ಯಕ್ತಿ ಬೀದಿ ಸುತ್ತುತ್ತಿರುವುದನ್ನು ಗಮನಿಸಿದ ಬೆಂಗಳೂರು ಪೊಲೀಸರು ಅವನ ಗ್ರಹಚಾರ ಬಿಡಿಸಿದ್ದಾರೆ.

2ನೇ ಭಾಷಣದಲ್ಲೂ ಅಗತ್ಯ ನೆರವಿನ ಕ್ರಮ, ಪರಿಹಾರ ಪ್ರಕಟಿಸದಿರುವುದರಿಂದ ನಿರಾಶೆ: ಪ್ರಧಾನಿಗೆ ಯೆಚೂರಿ ಬಹಿರಂಗ ಪತ್ರ
ಪ್ರಧಾನಿ ಮೋದಿ ತಮ್ಮ 2ನೇ ಭಾಷಣದಲ್ಲೂ ಕೊರೋನಾ ವೈರಸ್ ಕುರಿತಂತೆ ಸಾರ್ವಜನಿಕರಿಗೆ ಅಗತ್ಯ ನೆರವಿನ ಕ್ರಮ, ಪರಿಹಾರ ಪ್ರಕಟಿಸದಿರುವುದರಿಂದ ನಿರಾಶೆಯಾಗಿದೆ ಎಂದು ಸಿಪಿಐಎಂ ಪಾಲಿಟ್ ಬ್ಯುರೋ ಸದಸ್ಯ ಸೀತಾರಾಂ ಯೆಚೂರಿ ಹೇಳಿದ್ದಾರೆ.

ಕೊರೋನಾ ನಿಯಂತ್ರಣದಲ್ಲಿ ಮಲೇರಿಯಾ ನಿರೋಧಕ ಔಷಧ ಪರಿಣಾಮಕಾರಿ ಎಂಬ ಸಲಹೆ, ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತಿಗೆ ಸರ್ಕಾರ ನಿಷೇಧ
ಕೊರೋನಾ ವೈರಸ್ ಹರಡುವಿಕೆಯ ನಡುವೆ ಜಾಗತಿಕ ಬೇಡಿಕೆ ಹೆಚ್ಚಾಗಿದ್ದರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಮಲೇರಿಯಾ ನಿರೋಧಕ ಔಷಧ ಹೈಡ್ರಾಕ್ಸಿಕ್ಲೋರೊಕ್ವಿನ್ ರಫ್ತಿಗೆ ಸರ್ಕಾರ ನಿಷೇಧಿಸಿದೆ.

ಕೊರೋನಾ ವಿರುದ್ಧ ಹೋರಾಡುವವರಿಗೆ ಭಗವಂತ ಸುರಕ್ಷತೆ ಕೊಡಲಿ: ಕನ್ನಡದಲ್ಲಿ ಪ್ರಧಾನಿ ಯುಗಾದಿ ಶುಭ ಹಾರೈಕೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೊಸ ವರ್ಷ ಯುಗಾದಿ ಪ್ರಯುಕ್ತ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

