Corona Virus

ಆರೋಗ್ಯ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಾನೂನು ಕ್ರಮ: ಕಲಬುರಗಿ ಜಿಲ್ಲಾಧಿಕಾರಿ ಶರತ್
ಕೊರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ / ಕ್ಲಿನಿಕ್ ಸಿಬ್ಬಂದಿಗಳು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ.ಮನವಿ ಮಾಡಿದ್ದಾರೆ.

ಆರ್‌ಟಿ-ಪಿಸಿಆರ್ ಕೋವಿಡ್ ಪರೀಕ್ಷೆಗೆ ದರ ನಿಗದಿ: ಡಾ. ಕೆ.ಸುಧಾಕರ್
ಸರ್ಕಾರದಿಂದ ಖಾಸಗಿ ಲ್ಯಾಬ್ ಗಳಿಗೆ ಕಳುಹಿಸುವ ಸ್ಯಾಂಪಲ್ ಗಳ ಆರ್‌ಟಿ-ಪಿಸಿಆರ್ ಕೋವಿಡ್ ಪರೀಕ್ಷೆಗೆ 2,000 ರೂ.ನಿಗದಿ ಮಾಡಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕಾಮೇಗೌಡರನ್ನು ಮಂಡ್ಯ ವೈದ್ಯಕೀಯ ಕಾಲೇಜಿಗೆ ದಾಖಲಿಸಿಕೊಳ್ಳುವಂತೆ ಸೂಚನೆ: ಸಚಿವ ಕೆ.ಸುಧಾಕರ್
ಕೋವಿಡ್–19 ಸೋಂಕಿಗೆ ತುತ್ತಾಗಿರುವ ಕಲ್ಮನೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾದ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಾಮೇಗೌಡರನ್ನು ಮಂಡ್ಯ ವೈದ್ಯಕೀಯ ಕಾಲೇಜಿಗೆ ದಾಖಲಿಸಿಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.

ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ವೈರಸ್ ನಿಂದ ಮರಣ ಪ್ರಮಾಣ ತೀರಾ ಕಡಿಮೆ: ಕೇಂದ್ರ ಸಚಿವ ಹರ್ಷವರ್ಧನ್
ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತೀರಾ ಕಡಿಮೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.

ಹೊಸಪೇಟೆ: ಕೊರೋನಾ ವೈರಸ್ ಹಿಮ್ಮೆಟ್ಟಿಸಿದ 'ಶತಾಯುಷಿ' ವೃದ್ಧೆ!
ಬಳ್ಳಾರಿಯ ಹೊಸಪೇಟೆಯ 'ಶತಾಯುಷಿ' ವೃದ್ಧರೊಬ್ಬರು ಮಾರಕ ಕೊರೋನಾ ವೈರಸ್ ನಿಂದ ಗುಣಮುಖರಾಗಿ ಇತರೆ ಸೋಂಕಿತರಿಗೆ ಸ್ಪೂರ್ತಿಯಾಗಿದ್ದಾರೆ.

ಲಕ್ಷಣಗಳಿಲ್ಲದ ಸೋಂಕಿತರ ಸಂಖ್ಯೆ ಏರಿಕೆಯಿಂದಲೇ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ!
ಕೊರೋನಾ ಸೋಂಕು ರೋಗ ಲಕ್ಷಣಗಳಿಲ್ಲದ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುತ್ತಿರುವುದರಿಂದಲೇ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಗಳು ಸಿಗುತ್ತಿಲ್ಲ ಎಂದು ಕೋವಿಡ್ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದುಬಾರಿ ಬೆಲೆ, ಕಾಳಸಂತೆ ಮಾರಾಟಕ್ಕೆ ಬ್ರೇಕ್: ಕರ್ನಾಟಕ ಸರ್ಕಾರದಿಂದಲೇ ಖಾಸಗಿ ಆಸ್ಪತ್ರೆಗಳಿಗೆ ರೆಮ್ಡೆಸಿವಿರ್ ಪೂರೈಕೆ
ದುಬಾರಿ ಬೆಲೆ, ಕಾಳಸಂತೆ ಮಾರಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಿಗೆ ರೆಮ್ಡೆಸಿವಿರ್ ಲಸಿಕೆ ಸರಬರಾಜು ಮಾಡುವ ಕುರಿತು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಹೆಚ್ಚಳ: ಸಿಎಂ ಖುದ್ದು ಮೇಲ್ವಿಚಾರಣೆ!
ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲಾಕ್ಡೌನ್ ಹೊರತಾಗಿಯೂ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡಬರುತ್ತಿರುವ ಹಿನ್ನಲೆಯಲ್ಲಿ ಖುದ್ಧು ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರು ಕೊರೋನಾ ನಿರ್ವಹಣೆಯ ಮೇಲ್ವಿಚಾರಣೆ ನಡೆಸಲಿದ್ದಾರೆ.

ಭಾರತದಲ್ಲಿ ಈವರೆಗೂ 1.47 ಕೋಟಿ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 3,43,243 ಮಂದಿಯ ಮಾದರಿಗಳನ್ನು ಪರೀಕ್ಷೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಬುಧವಾರ ಮಾಹಿತಿ ನೀಡಿದೆ.

