Corona Virus

ದುಬೈನಿಂದ ಆಗಮಿಸಿ ಮೆಜೆಸ್ಟಿಕ್ ನಲ್ಲಿ ಸುತ್ತಾಟ; ಕೈಲಿದ್ದ ಸೀಲ್ ನೋಡಿ ಆಸ್ಪತ್ರೆಗೆ ಸೇರಿಸಿದ ಪೊಲೀಸರು
ದುಬೈನಿಂದ ಆಗಮಿಸಿದ್ದ ಕೊರೋನಾ ಸೋಂಕು ಶಂಕಿತ ವ್ಯಕ್ತಿಯೋರ್ವ ಬೆಂಗಳೂರಿನಲ್ಲಿ ರೂಂ ಸಿಗದೆ ದುಬೈನಿಂದ ಪರದಾಡಿ, ಮೆಜೆಸ್ಟಿಕ್ ಪ್ರದೇಶೇದಲ್ಲಿ ಓಡಾಡಿರುವ ಘಟನೆ ನಡೆದಿದೆ.

ಕೊರೋನಾ ಚಿಕಿತ್ಸೆಗೆ ಸರ್ಕಾರ ವಿಶೇಷ ಪ್ಯಾಕೆಜ್ ನೀಡಬೇಕು:ಡಿ ಕೆ ಶಿವಕುಮಾರ್
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ನಿಯಂತ್ರಣ ಹಾಗೂ ಅದರಿಂದಾಗುವ ಪ್ರತಿಕೂಲ ಪರಿಸ್ಥಿತಿ ನಿವಾರಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಕೊರೋನಾ ವೈರಸ್ ಪೀಡಿತ ಇಟಲಿಯಿಂದ 263 ಭಾರತೀಯರ ರಕ್ಷಣೆ; ಐಟಿಬಿಪಿ ಕ್ವಾರಂಟೈನ್ ನಲ್ಲಿ ತೀವ್ರ ವೈದ್ಯಕೀಯ ನೀಗಾ!
ಮಾರಕ ಕೊರೋನಾ ವೈರಸ್ ಗೆ ಅತೀ ಹೆಚ್ಚು ಬಲಿಯಾಗಿರುವ ಇಟಲಿಯಲ್ಲಿ ಅಪಾಯಕ್ಕೆ ಸಿಲುಕಿದ್ದ 263 ಭಾರತೀಯರನ್ನು ರಕ್ಷಣೆ ಮಾಡಿ ಭಾರತಕ್ಕೆ ವಾಪಸ್ ಕರೆತರಲಾಗಿದೆ.

ಹೊಟೇಲ್‌ಗಳಲ್ಲಿ ಕ್ವಾರೆಂಟೇನ್ ಮಾಡಲು ಕಾಂಗ್ರೆಸ್ ನಾಯಕ ಎಚ್.ಕೆ.ಪಾಟೀಲ್ ಸಲಹೆ
ಹೊರದೇಶಗಳಿಂದ ರಾಜ್ಯಕ್ಕೆ ಬರುವವರಿಂದ ಸುರಕ್ಷಿತವಾಗಲು ಸರ್ಕಾರ ಕ್ವಾರೆಂಟೇನ್ ಮಾಡುವಂತೆ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸಲಹೆ ನೀಡಿದ್ದಾರೆ.

ವಿದೇಶದಿಂದ ಧಾರವಾಡಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 21ಕ್ಕೇರಿಕೆ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21ಕ್ಕೆಏರಿಕೆಯಾಗಿದೆ. ಆಸ್ಟ್ರೇಲಿಯಾ, ದುಬೈ, ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ ಓರ್ವ ವ್ಯಕ್ತಿ ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಕೋವಿಡ್ -19:ದೇಶಾದ್ಯಂತ 'ಜನತಾ ಕರ್ಫ್ಯೂ' ಆಚರಣೆ, 315ಕ್ಕೆ ತಲುಪಿದ ಕೊರೋನಾ ಸೋಂಕಿತರ ಸಂಖ್ಯೆ
ಮಹಾಮಾರಿ ಕೊರೋನಾ ವೈರಸ್ ತಡೆಗೆ ಇಂದು ದೇಶಾದ್ಯಂತ ಜನತಾ ಕರ್ಫ್ಯೂ ನಡೆಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಯಂತೆ ಜನರು ಸ್ವ ಇಚ್ಛೆಯಿಂದ ಮನೆಯಲ್ಲಿಯೇ ಉಳಿದುಕೊಳ್ಳಲು ಬಯಸಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಜನತಾ ಕರ್ಫ್ಯೂ ಆರಂಭವಾಗಿದ್ದು ರಾತ್ರಿ 9 ಗಂಟೆಯವರೆಗೆ ಮುಂದುವರಿಯಲಿದೆ.

ಕೊರೋನಾ ಗೆ ಮದ್ದಿಲ್ಲ: ನಿಯಂತ್ರಣವೇ ಮದ್ದು - ಕೇಂದ್ರ ಸಚಿವ ಸದಾನಂದಗೌಡ
ಜಾಗತಿಕವಾಗಿ ತೀವ್ರ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್ ಗೆ ಈವರೆಗೆ ಯಾವುದೇ ಲಸಿಕೆ ಸಿದ್ಧವಾಗಿಲ್ಲ. ಹೀಗಾಗಿ ರೋಗ ಬರದಂತೆ ನೋಡಿಕೊಳ್ಳುವುದೇ ಪರಿಹಾರ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ಚಪ್ಪಾಳೆ ತಟ್ಟುವುದರಿಂದ ಏನೂ ಪ್ರಯೋಜನವಿಲ್ಲ: ಜನತಾ ಕರ್ಫ್ಯೂ ಬಗ್ಗೆ ರಾಹುಲ್ ಗಾಂಧಿ
ಮಾರ್ಚ್ 22ರಂದು ಮನೆಯಲ್ಲೇ ಇದ್ದು ಜನತಾ ಕರ್ಫ್ಯೂ ಆಚರಿಸಿ, ಸಂಜೆ 5 ಗಂಟೆಗೆ ಮನೆಯಲ್ಲಿಯೇ ಚಪ್ಪಾಳೆ ತಟ್ಟಿ ಆರೋಗ್ಯ ಇಲಾಖೆಯವರಿಗೆ ಗೌರವ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಸ್ಪಯಂ ಪ್ರೇರಿತವಾಗಿ 'ಜನತಾ ಕರ್ಪ್ಯೂ' ನಡೆಯಬೇಕು, ಪೊಲೀಸರು ಪ್ರಕರಣ ದಾಖಲಿಸುವುದಿಲ್ಲ: ಬಸವರಾಜ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಪ್ಯೂ ಹಿನ್ನಲೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳು ಹಾಗೂ ಪೊಲೀಸರ ಕಾರ್ಯನಿರ್ವಹಣೆ ಕುರಿತಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ತುರ್ತು ಸಭೆ ನಡೆಸಿದರು.

