Corona Virus

ವಾಣಿ ವಿಲಾಸ ಆಸ್ಪತ್ಪೆಯಲ್ಲಿ 100ಕ್ಕೂ ಹೆಚ್ಚು ಕೋವಿಡ್-19 ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ
ಕೋವಿಡ್ ಸೋಂಕು ದಾಳಿ ಆರಂಭಿಸಿದ ನಂತರ ಬೆಂಗಳೂರು ನಗರದ ಬಹುದೊಡ್ಡ ಹೆರಿಗೆ ಆಸ್ಪತ್ರೆಯಾದ ವಾಣಿ ವಿಲಾಸ್‌ನಲ್ಲಿ ಇಲ್ಲಿಯವರೆಗೆ 100ಕ್ಕೂ ಹೆಚ್ಚು ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸಿದೆ.

ಮಹಾರಾಷ್ಟ್ರ ಪೊಲೀಸ್ ನೆರವಿಗೆ ನಿಂತ ಸೋನು ಸೂದ್; 25 ಸಾವಿರ ಫೇಸ್ ಶೀಲ್ಡ್ ಪೂರೈಕೆ
ಕೊರೋನಾ ವೈರಸ್ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದ ಬಾಲಿವುಡ್ ನಟ ಸೋನು ಸೂದ್ ಇದೀಗ ಮಹಾರಾಷ್ಟ್ರ ಪೊಲೀಸರಿಗೆ ನೆರವಿಗೆ ನಿಂತಿದ್ದಾರೆ.

ಮಹಾರಾಷ್ಟ್ರ: ಒಂದೇ ದಿನ 8,641 ಹೊಸ ಪ್ರಕರಣ ಪತ್ತೆ, 266 ಬಲಿ; 2,84,281ಕ್ಕೇರಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 8,641 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,84,281ಕ್ಕೇರಿದೆ.

ಮುಂಬೈನಲ್ಲಿ ಇಂದು 1498 ಹೊಸ ಕೊರೋನಾ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 97,751 ಕ್ಕೆ ಏರಿಕೆ
ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ಇಂದು 1498 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 97,751ಕ್ಕೆ ಏರಿಕೆಯಾಗಿದೆ.

2 ಲಕ್ಷ ಆಂಟಿಜೆನ್ ಕಿಟ್ ಖರೀದಿಗೆ ನಿರ್ಧಾರ: ಆರೋಗ್ಯ ಸಚಿವ ಬಿ. ಶ್ರೀರಾಮುಲು
ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಶೇಕಡಾ 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಸೂಚನೆ ನೀಡಲಾಗಿದೆ. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೊರೋನಾ ಆರ್ಭಟ; ಒಂದೇ ದಿನ 4,549 ಹೊಸ ಸೋಂಕು ಪ್ರಕರಣ
ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,549 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ದೆಹಲಿ: 24 ಗಂಟೆಗಳಲ್ಲಿ 1,652 ಹೊಸ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 118645ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 1,652 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಇನ್ನೊಂದು ವಾರ ಮದ್ಯ ಮಾರಾಟ ನಿಷೇಧ: ಭಾಸ್ಕರ್ ರಾವ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಬೆಂಗಳೂರಿನಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಒಂದು ವಾರಗಳ ಲಾಕ್ಡೌನ್ ಸಂದರ್ಭದಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರ: ಒಂದೇ ದಿನ 7,975 ಹೊಸ ಪ್ರಕರಣ ಪತ್ತೆ, 213 ಬಲಿ; 2,75,640ಕ್ಕೇರಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 7,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,75,640ಕ್ಕೇರಿದೆ.

