Corona Virus

ಬಿಗ್ ಬಿ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು
ಬಾಲಿವುಡ್ ನ ಖ್ಯಾತ ಹಿರಿಯ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಧಾರಾವಿಯಲ್ಲಿ ಕೊರೋನಾ ನಿಯಂತ್ರಣ: ವಿಶ್ವಸಂಸ್ಥೆ ಆರೋಗ್ಯ ಸಂಸ್ಥೆ ಶ್ಲಾಘನೆ
ಮಾರಕ ಕೊರೋನಾ ವೈರಸ್ ಮಹಾರಾಷ್ಟ್ರದಲ್ಲಿ ಅರ್ಭಟ ಜೋರಾಗಿದೆಯಾದರೂ ಏಷ್ಯಾದ ಅತೀ ದೊಡ್ಡ ಸ್ಲಂ ಎಂದೇ ಖ್ಯಾತಿ ಗಳಿಸಿರುವ ಧಾರಾವಿಯಲ್ಲಿ ಮಾತ್ರ ಕೊರೋನಾವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ. ಮಹಾರಾಷ್ಟ್ರ ಸರ್ಕಾರದ ಈ ಕಾರ್ಯಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘನೆ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ಲಾಕ್ಡೌನ್: ಯಾವೆಲ್ಲಾ ಸೇವೆಗಳು ಲಭ್ಯ, ಯಾವ ಸೇವೆಗಳು ಇರುವುದಿಲ್ಲ..! ಇಲ್ಲಿದೆ ಸಂಪೂರ್ಣ ಮಾಹಿತಿ
ಮಾರಕ ಕೊರೋನಾ ವೈರಸ್ ಸೋಂಕು ಗಣನೀಯವಾಗಿ ಹೆಚ್ಚಾಗುತ್ತಿರುವ ಪರಿಣಾಮ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 7 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಯಾವೆಲ್ಲ ಸೇವೆಗಳು ಇರಲಿವೆ ಮತ್ತು ಯಾವೆಲ್ಲಾ ಸೇವೆಗಳು ಇರುವುದಿಲ್ಲ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಮಂಗಳವಾರದಿಂದ 7 ದಿನ ಲಾಕ್ಡೌನ್ ಜಾರಿ: ಸಿಎಂ ಬಿಎಸ್ ಯಡಿಯೂರಪ್ಪ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ14ರಿಂದ ಜುಲೈ 23ರವರೆಗೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕೊರೋನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಬಹುದು: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ
ಕಳೆದ ಒಂದು ತಿಂಗಳಿಂದ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಕೂಡ ವೈರಸ್ ನ್ನು ನಿಯಂತ್ರಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಕೊರೋನಾ ಎಫೆಕ್ಟ್: ಪದವಿ ಪರೀಕ್ಷೆಗಳು ರದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ವೈದ್ಯಕೀಯ ವಿಮೆ ಇದ್ದರೆ ಮಾತ್ರ ವಿದ್ಯಾರ್ಥಿಗಳಿಗೆ ಐಐಎಸ್ ಸಿ ಕ್ಯಾಂಪಸ್ ಪ್ರವೇಶ!
ಮಾರಕ ಕೊರೋನಾ ವೈರಸ್ ನಿಂದಾಗಿ ಸ್ಥಗಿತವಾಗಿದ್ದ ಭಾರತೀಯ ವಿಜ್ಞಾನ ಸಂಸ್ಥೆ(IISc) ಕೊನೆಗೂ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ನಿರ್ಧರಿಸಿದೆ. ಆದರೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಐಐಎಸ್ ಸಿ ಕೆಲ ಷರತ್ತುಗಳನ್ನು ವಿಧಿಸಿದೆ.

ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸಚಿವ ಕೆ.ಸುಧಾಕರ್
ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ದೆಹಲಿ: 24 ಗಂಟೆಗಳಲ್ಲಿ 2187 ಹೊಸ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 1,07,051 ಕ್ಕೆ ಏರಿಕೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕೊರೋನಾ ಆರ್ಭಟಿಸಿದ್ದು, ನಿನ್ನೆ ಒಂದೇ ದಿನ 2187 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ.

