Corona Virus

ಮುಂಬೈನಲ್ಲಿ ಮತ್ತೆ 1,282 ಹೊಸ ಕೊರೋನಾ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 88,795 ಕ್ಕೆ ಏರಿಕೆ
ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ನಿನ್ನೆ 1,282 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 88,795 ಕ್ಕೆ ಏರಿಕೆಯಾಗಿದೆ.

ಸಚಿವರಿಗೆ ಕೊವಿಡ್-19 ಸೋಂಕು: ಜಾರ್ಖಂಡ್ ಮುಖ್ಯಮಂತ್ರಿಗೆ ಹೋಮ್ ಕ್ವಾರಂಟೈನ್
ಸಂಪುಟದ ಸಹೋದ್ಯೋಗಿ ಸಚಿವರಿಗೆ ಕೊರೋನಾ ಸೋಂಕು ದೃಢವಾದ ಹಿನ್ನಲೆಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.

ಹಾಸನ: ಕೊರೊನಾಗೆ ಮತ್ತೊಂದು ಬಲಿ; ಮೃತರ ಸಂಖ್ಯೆ 12ಕ್ಕೆ ಏರಿಕೆ, 15 ದಿನ ಸಲೂನ್ ಶಾಪ್ ಬಂದ್
ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಮೃತಪಟ್ಟಿದ್ದು, ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಕಲಬುರಗಿಯಲ್ಲಿ ಕೊರೊನಾ ಸೋಂಕಿತ ವೃದ್ಧೆಯನ್ನು ಮನೆಯಲ್ಲೇ ಬಿಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ!
ಕೊರೊನಾ ಸೋಂಕು ಹೆಚ್ಚಳಗೊಂಡ ನಂತರ ರಾಜ್ಯದಲ್ಲಿ ಅಮಾನವೀಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಕೊರೋನಾ ಸೋಂಕಿತರ ಹೆಚ್ಚಳ ಹಿನ್ನಲೆ: ಬೆಳ್ಳಂಬೆಳಗ್ಗೆ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಬೆಳ್ಳಂ ಬೆಳಗ್ಗೆಯೇ ತಮ್ಮ ನಿವಾಸದಲ್ಲಿ ಉಪಮುಖ್ಯಮಂತ್ರಿಗಳು, ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

ಶಾಲಾ ಕಾಲೇಜುಗಳ ಪ್ರಾರಂಭ, ಆನ್‍ಲೈನ್ ತರಗತಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ: ಸುರೇಶ್ ಕುಮಾರ್
ರಾಜ್ಯದಲ್ಲಿ ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‍ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೊರೋನಾ ತಪ್ಪಿಸಲು ಮಾಸ್ಕ್ ಧರಿಸುವುದೂ ಕೂಡ ಮುಖ್ಯ: ಆಂಗ್ಲರ ವಿರುದ್ಧ ನೊಬೆಲ್ ವಿಜೇತ ವಿ.ರಾಮಕೃಷ್ಣನ್ ಕಿಡಿ
ವಿಶ್ವದ ಬಹುತೇಕ ಎಲ್ಲ ರಾಷ್ಟ್ರಗಳನ್ನೂ ಇನ್ನಿಲ್ಲದಂತೆ ಪೀಡಿಸುತ್ತಿರುವ ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದೂ ಕೂಡ ಮುಖ್ಯ ಎಂದು ಭಾರತ ಮೂಲದ ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ವೆಂಕಟರಮಣನ್ ರಾಮಕೃಷ್ಣನ್ ಅವರು ಹೇಳಿದ್ದಾರೆ.

ಬೆಂಗಳೂರಿನ ಶಾಂತಲಾ ನಗರ ಈಗ ಕೊರೋನಾ ವೈರಸ್ ಹಾಟ್ ಸ್ಪಾಟ್!
ರಾಜ್ಯ ರಾಜಧಾನಿ ಮತ್ತು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರಕ ಕೊರೋನಾ ವೈರಸ್ ಹಾವಳಿ ಇನ್ನಿಲ್ಲದಂತೆ ಕಾಡುತ್ತಿದ್ದು, ಪಾದರಾಯನಪುರ, ಹೊಂಗ ಸಂದ್ರ ಮತ್ತು ಶಿವಾಜಿನಗರದ ಬಳಿಕ ಇದೀಗ ಶಾಂತಲಾನಗರ ಹೊಸ ಕೊರೋನಾ ವೈರಸ್ ಹಾಟ್ ಸ್ಫಾಟ್ ಆಗಿ ಬದಲಾಗುತ್ತಿದೆ.

ಕೊನೆಗೂ ಕ್ರಿಕೆಟ್ ಆರಂಭಕ್ಕೆ ಕ್ಷಣಗಣನೆ: ನಾಳೆ ಇಂಗ್ಲೆಂಡ್-ವೆಸ್ಟ್ ಇಂಡೀಸ್ ಪ್ರಥಮ ಟೆಸ್ಟ್ ಆರಂಭ
ಸತತ ಮೂರೂವರೆ ತಿಂಗಳ ಉಪವಾದ ಬಳಿಕ ಕ್ರಿಕೆಟ್ ಪ್ರಿಯರಿಗೆ ಟೆಸ್ಟ್ ಕ್ರಿಕೆಟ್‌ನ ಭಕ್ಷ ಭೋಜನ ಲಭ್ಯವಾಗಲು ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿ ಉಳಿದಿದೆ.

