Corona Virus

ಮಹಾರಾಷ್ಟ್ರ: 24 ಗಂಟೆಗಳಲ್ಲಿ 5,493 ಹೊಸ ಕೊರೋನಾ ಪ್ರಕರಣ, 156 ಸೋಂಕಿತರ ಸಾವು!
ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 5493 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ದೆಹಲಿ: ಒಂದೇ ದಿನ 2,889 ಹೊಸ ಕೊರೋನಾ ಪ್ರಕರಣ, 83 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಮುಗಿಲುಮುಟ್ಟಿದ್ದು, ದೆಹಲಿಯಲ್ಲಿ ಇದೀಗ ಕೊರೋನಾ ಸೋಂಕಿತರ ಸಂಖ್ಯೆ 83 ಸಾವಿರ ಗಡಿದಾಟಿದೆ.

ಕೋವಿಡ್-19: 5 ಲಕ್ಷ ಗಡಿ ದಾಟಿದ ಕೊರೋನಾ ವೈರಸ್ ಸೋಂಕಿತರ ಜಾಗತಿಕ ಸಾವಿನ ಸಂಖ್ಯೆ
ವಿಶ್ವದ 213ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಇದೀಗ 5 ಲಕ್ಷ ಗಡಿ ದಾಟಿದೆ.

ಕೊರೋನಾ ವೈರಸ್: ಲಕ್ಷಣ ರಹಿತ ಸೋಂಕಿತರಿಗೆ ಪ್ರತ್ಯೇಕ ಕೋವಿಡ್-19 ಸೆಂಟರ್ ನಲ್ಲಿ ಚಿಕಿತ್ಸೆ!
ಮಾರಕ ಕೊರೋನಾ ವೈರಸ್ ಸೋಂಕಿತರ ಪ್ರಮಾಣ ಬೆಂಗಳೂರಿನಲ್ಲಿ ದಿನೇ ದಿನೇ ಗಣನೀಯವಾಗಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಲಕ್ಷಣ ರಹಿತ ಸೋಂಕಿತರಿಗೆ ಪ್ರತ್ಯೇಕ ಕೋವಿಡ್-19 ಸೆಂಟರ್ ನಲ್ಲಿ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕೊರೋನಾಘಾತ: ಐದೇ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಸೋಂಕು ಪ್ರಕರಣ ದ್ವಿಗುಣ
ಮಾರಕ ಕೊರೋನಾ ವೈರಸ್ ಸಿಲಿಕಾನ್ ಸಿಟಿ ಬೆಂಗಳೂರನ್ನು ಬಿಟ್ಟೂ ಬಿಡದೇ ಕಾಡುತ್ತಿದ್ದು, ಕೇವಲ ಐದೇ ದಿನಗಳಲ್ಲಿ ನಗರದಲ್ಲಿ ಸೋಂಕು ಪ್ರಕರಣಗಳ ಪ್ರಮಾಣ ದ್ವಿಗುಣವಾಗಿದೆ.

ಕೇರಳಕ್ಕೆ ಮತ್ತೆ ಕೊರೋನಾಘಾತ; ಒಂದೇ ದಿನ 118 ಸೋಂಕು ಪ್ರಕರಣ ದಾಖಲು
ಕೊರೋನಾ ವೈರಸ್ ನಿಯಂತ್ರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಿದ್ದ ಕೇರಳದಲ್ಲಿ ಮತ್ತೆ ಕೊರೋನಾ ವೈರಸ್ ತನ್ನ ಆರ್ಭಟ ಶುರು ಮಾಡಿದ್ದು ನಿನ್ನೆ ಒಂದೇ ದಿನ ಕೇರಳದಲ್ಲಿ 118 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ಪಕ್ಕದ ಮನೆಯವರಿಗೆ ಕೊರೋನಾ; ಸ್ವಯಂ ನಿರ್ಬಂಧ ಹೇರಿಕೊಂಡ ಪ್ರಿಯಾಂಕ್ ಖರ್ಗೆ
ಪಕ್ಕದ ಮನೆಯವರೆಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸ್ವಯಂ ನಿರ್ಬಂಧ ಹೇರಿಕೊಂಡಿದ್ದಾರೆ.

ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಮುಖ್ಯ ಕಾರ್ಯದರ್ಶಿ
ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಕೋವಿಡ್-19 ಸೋಂಕಿಗೆ ಇಬ್ಬರು ಬಲಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಕೊವಿಡ್-19 ಸೋಂಕಿನಿಂದ ಮತ್ತಿಬ್ಬರು ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 12 ಕ್ಕೆ ಏರಿದೆ.ಮೃತರ ಪೈಕಿ ಬಂಟ್ವಾಳ ಮೂಲದ 57 ವರ್ಷದ ಮಹಿಳೆ ಮತ್ತು ಸೂರತ್ಕಲ್ ನ 31 ವರ್ಷದ ಯುವಕ ಸೇರಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

