corona

ಹಿರಿಯ ಪತ್ರಕರ್ತ ಗೌರೀಪುರ ಚಂದ್ರು ನಿಧನ
ಹಿರಿಯ ಪತ್ರಕರ್ತ, ಗೌರೀಪುರ ಚಂದ್ರು (54 ವರ್ಷ) ಅವರು ಗುರುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನಾ ಕುರಿತು ಸಿಎಂ-ಪಿಎಂ ವಿಡಿಯೋ ಸಂವಾದ: ಮತ್ತಷ್ಟು ಲಾಕ್'ಡೌನ್ ವಿನಾಯ್ತಿಗೆ ಯಡಿಯೂರಪ್ಪ ಮನವಿ
ರಾಜ್ಯ ಕೊರೋನಾ ಪರಿಸ್ಥಿತಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಬುಧವಾರ ಮಾತುಕತೆ ನಡೆಸಿದ್ದು, ಮಾತುಕತೆ ವೇಳೆ ಮತ್ತಷ್ಟು ಕ್ಷೇತ್ರಗಳ ಚಟುವಟಿಕೆಗಳಿಗೆ ವಿನಾಯಿತಿ ನೀಡುವಂತೆ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದು, ಇದಕ್ಕೆ ಪ್ರಧಾನಿ ಮೋದಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರಂದು ತಿಳಿದುಬಂದಿದೆ.

ತಮಿಳುನಾಡು ಸಿಎಂ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಕೊರೋನಾಗೆ ಬಲಿ
ತಮಿಳುನಾಡು ರಾಜ್ಯ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿಯವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಮಹಾಮಾರಿ ಕೊರೋನಾವೈರಸ್'ಗೆ ಬಲಿಯಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ.

ಕೊರೋನಾ ವಾರಿಯರ್ಸ್'ಗೆ ವೇತನ, ಕ್ವಾರಂಟೈನ್ ವ್ಯವಸ್ಥೆಗಳನ್ನು ಸೂಕ್ತ ರೀತಿಯಲ್ಲಿ ಒದಗಿಸಿ: ಕೇಂದ್ರಕ್ಕೆ 'ಸುಪ್ರೀಂ' ಸೂಚನೆ
ಮಹಾಮಾರಿ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್ಸ್'ಗಳಿಗೆ ಸರಿಯಾದ ವೇತನ ಹಾಗೂ ಕ್ವಾರಂಟೈನ್ ವ್ಯವಸ್ಥೆಗಳನ್ನು ಸೂಕ್ತ ರೀತಿಯಲ್ಲಿ ಒದಗಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಸೂಚನೆ ನೀಡಿದೆ.

ಕೊರೋನಾ ನಿಯಮ ಪಾಲಿಸುತ್ತಿರುವ ಬಿಎಂಟಿಸಿ: ಡೋಂಟ್ ಕೇರ್ ಎಂದ ಪ್ರೈವೇಟ್ ಬಸ್!
ಕೊರೋನಾ ಲಾಕ್ ಡೌನ್ ಬಿಎಂಟಿಸಿಯಲ್ಲಿ ಪ್ರಯಾಣಿಕರ ಸಂಚಾರಕ್ಕಾಗಿ ಸಾರಿಗೆ ಇಲಾಖೆ ಎಲ್ಲಾ ನಿಯಮಗಳನ್ನು ಪಾಲಿಸುವುದಾಗಿ ಭರವಸೆ ನೀಡಿತ್ತು. ಆದರೆ ಖಾಸಗಿ ಬಸ್ ಗಳು ಯಾವುದೇ ನಿಯಮಗಳನ್ನು ಗಾಳಿಗೆ ತೂರಿದೆ.

ಕೊರೋನಾ ಎಫೆಕ್ಟ್: ತವರಿನಲ್ಲೇ ಉಳಿದ ಮುಂಬೈ ಉಡುಪಿ ಹೋಟೆಲ್'ನ ಸಾವಿರಾರು ಸಿಬ್ಬಂದಿ, ಕೆಲಸಕ್ಕಾಗಿ ಹುಡುಕಾಟ
ಮುಂಬೈನ ಪ್ರತಿಷ್ಟಿತ ಉಡುಪಿ ಹೋಟೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾವಿರಾರು ನೌಕರರು ಕೊರೋನಾ ವೈರಸ್ ಪರಿಣಾಮ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಇದೀಗ ತಮ್ಮ ತವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೇ ಉಳಿದಿರುವ ಸ್ಥಳೀಯ ನೌಕರಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಕೊರೋನಾ ಎಫೆಕ್ಟ್: ಫೇಸ್ ಬುಕ್ ಲೈವ್ ನಲ್ಲಿ ವಧುವರರ ವಿವಾಹ, ವೈರಸ್ ತಡೆಗೆ ಸಾಮಾಜಿಕ ಬದ್ಧತೆ ಮೆರೆದ ಜೋಡಿಗಳು!
ಕೊರೋನಾ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳಲ್ಲಿ ಭಾಗವಹಿಸುವ ಆಹ್ವಾನಿತರ ಸಂಖ್ಯೆಯ ಮೇಲೆ ಸರ್ಕಾರ ನಿರ್ಬಂಧ ಹೇರಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ನಡೆಯಲವಿರುವ ವಿವಾಹವೊಂದು ಫೇಸ್'ಬುಕ್ ನಲ್ಲಿ ನೇರ ಪ್ರಸಾರವಾಗಲಿದೆ.

ದೆಹಲಿಯಲ್ಲಿ ರೋಗಿಗಳನ್ನು ಪ್ರಾಣಿಗಳಿಗಿಂತಲೂ ಕೀಳಾಗಿ ನೋಡಲಾಗುತ್ತಿದೆ: ಆಸ್ಪತ್ರೆಗಳ ಅವ್ಯವಸ್ಥೆ ಕುರಿತು ಕೇಜ್ರಿವಾಲ್ ವಿರುದ್ಧ ಹರಿಹಾಯ್ದ ಸುಪ್ರೀಂಕೋರ್ಟ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೋಗಿಗಳನ್ನು ಪ್ರಾಣಿಗಳಿಗಿಂತಲೂ ಕೀಳಾಗಿ ನೋಡಲಾಗುತ್ತಿದೆ ಎಂದು ಆಸ್ಪತ್ರೆಗಳ ಅವ್ಯವಸ್ಥೆ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸರ್ಕಾರದ ವಿರುದ್ಧ ಸರ್ವೋಚ್ಛ ನ್ಯಾಯಾಲಯ ಶುಕ್ರವಾರ ತೀವ್ರವಾಗಿ ಕಿಡಿಕಾರಿದೆ.

ಟಿಟಿಡಿ ಸಿಬ್ಬಂದಿಯಲ್ಲಿ ಕೊರೋನಾ ಪಾಸಿಟಿವ್: ತಿರುಪತಿ ಶ್ರೀ ಗೋವಿಂದರಾಜ ಸ್ವಾಮಿ ದೇಗುಲ ಬಂದ್
ಟಿಟಿಡಿ ಸಿಬ್ಬಂದಿಯೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ತಿರುಪತಿ ಶ್ರೀ ಗೋವಿಂದರಾಜ ಸ್ವಾಮಿ ದೇವಾಲಯವನ್ನು ಬಂದ್ ಮಾಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.

