coronavirus

ದೇಶದಲ್ಲಿ ಕೋವಿಡ್ ಭೀತಿ: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 196 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,428ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಆಸ್ಪತ್ರೆಗಳಲ್ಲಿ ಆಮ್ಲಜನಕ, ಜೀವರಕ್ಷಕ ಸಾಧನಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಮುಂದೆ ಎದುರಾಗುವ ಯಾವುದೇ ಸವಾಲುಗಳನ್ನು ಎದುರಿಸಲು ಆಸ್ಪತ್ರೆಗಳಲ್ಲಿ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್, ಸಿಲಿಂಡರ್‌ಗಳ ಸಾಕಷ್ಟು ದಾಸ್ತಾನು ಮತ್ತು ವೆಂಟಿಲೇಟರ್‌ಗಳಂತಹ ಕ್ರಿಯಾತ್ಮಕ ಜೀವರಕ್ಷಕ ಸಾಧನಗಳು ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ಶನಿವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಿಗಳಿಗೆ ಸೂಚಿಸಿದೆ.

ದೇಶದಾದ್ಯಂತ ಕೋವಿಡ್ ಭೀತಿ: 24 ಗಂಟೆಗಳಲ್ಲಿ 201 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 201 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಐದು ಬಾರಿ ಮುಂದೂಡಲ್ಪಟ್ಟಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮತ್ತೆ ಕೋವಿಡ್ ಕರಿನೆರಳು; ಸಾಹಿತ್ಯ ಪ್ರಿಯರಲ್ಲಿ ತಳಮಳ
ಈ ವರ್ಷ ಐದು ಬಾರಿ ಮುಂದೂಡಲ್ಪಟ್ಟಿರುವ ವಾರ್ಷಿಕ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಈಗ ಕೋವಿಡ್-19 ರ ಕರಿ ನೆರಳು ಬೀಳುವ ಸಾಧ್ಯತೆ ಇದೆ. ಈಗಾಗಲೇ ಘೋಷಿಸಿರುವ ವೇಳಾಪಟ್ಟಿಯಂತೆ 2023ರ ಜನವರಿ 6ರಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಬಳಸಿ, ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಳ್ಳಿ: ಡಾ. ವಿಕೆ ಪೌಲ್
ಭಾರತದ ಅರ್ಹ ಜನಸಂಖ್ಯೆಯ ಶೇ 27 ರಿಂದ 28ರಷ್ಟು ಜನರು ಮಾತ್ರ ಕೋವಿಡ್-19ರ ಬೂಸ್ಟರ್ ಡೋಸ್ ಅನ್ನು ತೆಗೆದುಕೊಂಡಿದ್ದಾರೆ ಮತ್ತು ಜನನಿಬಿಡ ಸ್ಥಳಗಳಲ್ಲಿ ಜಾಗ್ರತೆ ವಹಿಸಲು ಮತ್ತು ಮಾಸ್ಕ್ ಧರಿಸಲು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿಕೆ ಪೌಲ್ ಬುಧವಾರ ಸಲಹೆ ನೀಡಿದ್ದಾರೆ.

ಚೀನಾದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಕಳವಳಕಾರಿ; ಆದರೆ, ಲಸಿಕೆಯಿಂದಾಗಿ ಭಾರತ ಭಯಪಡುವ ಅಗತ್ಯವಿಲ್ಲ: ಅದಾರ್ ಪೂನಾವಾಲಾ
ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಿಇಒ ಅದಾರ್ ಪೂನಾವಾಲ ಮಂಗಳವಾರ ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ, ಭಾರತದಲ್ಲಿ ವ್ಯಾಕ್ಸಿನೇಷನ್ ಕವರೇಜ್ ಅತ್ಯುತ್ತಮವಾಗಿರುವುದರಿಂದ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖುಗೆ ಕೋವಿಡ್ ಪಾಸಿಟಿವ್
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಸೋಮವಾರ ದೆಹಲಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಕಠಿಣ ನಿರ್ಬಂಧಗಳ ಹೊರತಾಗಿಯೂ ಚೀನಾದಲ್ಲಿ ಆರು ತಿಂಗಳ ಬಳಿಕ ಕೋವಿಡ್‌ನಿಂದ ಮೊದಲ ಸಾವು
ಕೋವಿಡ್ ವಿರುದ್ಧ ಬೀಜಿಂಗ್ ಮತ್ತು ದೇಶದಾದ್ಯಂತ ಹೇರಲಾಗಿರುವ ನಿರ್ಬಂಧಗಳ ನಡುವೆಯೂ ಕಳೆದ ಆರು ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಚೀನಾದಲ್ಲಿ ಕೋವಿಡ್-19 ನಿಂದಾಗಿ ಮೊದಲ ಸಾವು ಪ್ರಕರಣ ವರದಿಯಾಗಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ಕೇರಳವೊಂದರಲ್ಲೇ 15 ಸೇರಿದಂತೆ ದೇಶದಾದ್ಯಂತ 17 ಮಂದಿ ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 556 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,68,523 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

