corruption

'ಇಂದು ಭಾರತ ಒಂದೇ ಧ್ವನಿಯಲ್ಲಿ ಭ್ರಷ್ಟಾಚಾರ, ರಾಜವಂಶ, ತುಷ್ಠೀಕರಣ ಭಾರತ ಬಿಟ್ಟು ತೊಲಗಲಿ ಎಂದು ಹೇಳುತ್ತಿದೆ': ಪ್ರಧಾನಿ ಮೋದಿ
ಇಂದು ಆಗಸ್ಟ್ 8, ದೇಶದ ಪಿತಾಮಹ ಮಹಾತ್ಮಾ ಗಾಂಧಿಯವರು ಕ್ವಿಟ್ ಇಂಡಿಯಾ ಚಳವಳಿಗೆ ಕರೆಕೊಟ್ಟ ದಿನ. ಕ್ವಿಟ್ ಇಂಡಿಯಾ ಚಳವಳಿಯನ್ನು ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ಭಾರತ ಈಗ ಭ್ರಷ್ಟಾಚಾರ, ರಾಜವಂಶ ಮತ್ತು ತುಷ್ಟೀಕರಣದ ವಿರುದ್ಧ ಒಂದೇ ಧ್ವನಿಯಲ್ಲಿ ಮಾತನಾಡುತ್ತಿದೆ ಎಂದು ಹೇಳಿದ್ದಾರೆ.

'ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಕನಸು ಕಂಡಿದ್ದ ಎಚ್‌ಡಿಕೆಗೆ ನಮ್ಮ ಸರ್ಕಾರ ಬಂದಾಗಿನಿಂದ ನೆಮ್ಮದಿ ಇಲ್ಲದಂತಾಗಿದೆ'
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್‌ಡಿ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಎಚ್‌ಡಿಕೆ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಕಿಡಿಕಾರಿದ್ದಾರೆ.

ನೈಸ್ ಯೋಜನೆ ಅಕ್ರಮ ಕುರಿತು ದೆಹಲಿಯಲ್ಲಿ ಪುರಾವೆ ಬಿಡುಗಡೆ; ಪ್ರಧಾನಿ ಮೋದಿಗೆ ದಾಖಲೆ ನೀಡುತ್ತೇನೆ: ಎಚ್ ಡಿ ಕುಮಾರಸ್ವಾಮಿ
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ವ್ಯವಹಾರದಲ್ಲಿ 1,000 ಕೋಟಿ ರೂಪಾಯಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

'ಹಣ ತಂದಿದ್ದರೆ ಒಳಗೆ ಬನ್ನಿ, ಇಲ್ಲದಿದ್ದರೆ ಹೊರಗೆ ಇರಿ ಎಂದು ಹೇಳುತ್ತಾರಂತೆ... ಕಾಂಗ್ರೆಸ್ ಇರೋದು ವಸೂಲಿಗೆ': ದಳಪತಿ ಸಿಡಿಮಿಡಿ
ಪರ್ಸೆಂಟೇಜ್ ಭ್ರಷ್ಟಾಚಾರ ಆರೋಪದ ಮೇಲೆ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಹಿಂದಿನ ಬಿಜೆಪಿ ಸರ್ಕಾರದಂತೆ ಈಗಿನ ಕಾಂಗ್ರೆಸ್ ಸರ್ಕಾರದ ಮೇಲೆ ಈ ಹಿಂದೆಯೇ ಮಾಜಿ ಸಿಎಂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಅಗತ್ಯ ಬಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಿ ಆರೋಪ ಸಾಬೀತು ಮಾಡುವುದಾಗಿಯೂ ಹೇಳಿದ್ದರು.

ಭ್ರಷ್ಟಾಚಾರ ಸಹಿಸಿಕೊಳ್ಳಲು ಸಾಧ್ಯವಿಲ್ಲ: ರಾಜ್ಯದ ಸಚಿವರಿಗೆ ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ
ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪಗಳಿಂದ ಆತಂಕಕ್ಕೊಳಗಾಗಿದ್ದ ಕಾಂಗ್ರೆಸ್ ಹೈಕಮಾಂಡ್ ಬುಧವಾರ ಈ ಸಂಬಂಧ ರಾಜ್ಯ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದೆ.

ಭ್ರಷ್ಟಾಚಾರದಲ್ಲಿ ಭಾಗಿ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡ ಕಂದಾಯ ಇಲಾಖೆ!
ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೆಲವೊಂದು ಕ್ರಮಗಳನ್ನು ಕೈಗೊಳ್ಳಲು ಸಚಿವ ಕೃಷ್ಣ ಬೈರೇಗೌಡ ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

'ಶ್ಯಾಡೋ ಸಿಎಂ' ಯತೀಂದ್ರ ಹಸ್ತಕ್ಷೇಪದಿಂದ ಕಾಂಗ್ರೆಸ್'ನಲ್ಲಿ ಆಂತರಿಕ ಸಂಘರ್ಷ ಶುರುವಾಗಿದೆ: ಬಿಜೆಪಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಶ್ಯಾಡೋ ಸಿಎಂ ಎಂದು ವ್ಯಂಗ್ಯವಾಡಿರುವ ಬಿಜೆಪಿ, ಯತೀಂದ್ರ ಅವರ ಅತಿಯಾದ ಹಸ್ತಕ್ಷೇಪದಿಂದ, ಮುಖ್ಯಮಂತ್ರಿ ಮತ್ತು ಸಚಿವರುಗಳ ಮಧ್ಯೆ ಈಗಾಗಲೇ ಆಂತರಿಕ ಸಂಘರ್ಷ ಶುರುವಾಗಿದೆ ಎಂದು ಸೋಮವಾರ ಹೇಳಿದೆ.

ಎನ್‌ಸಿಪಿಯ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮಾತನಾಡಿದ್ದಾರೆ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು: ಶರದ್ ಪವಾರ್
ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಸಿಪಿ ನಾಯಕರ ಬೃಹತ್ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಆದ್ದರಿಂದ ಅವರು ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಶರದ್ ಪವಾರ್ ಶನಿವಾರ ಹೇಳಿದ್ದಾರೆ.

ಬಿಜೆಪಿ ಜತೆಗಿನ ಮೈತ್ರಿ ಕೇವಲ ವದಂತಿ, ಹಿಂದಿನ ಸರಕಾರಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಜನತೆ ಮುಂದಿಡಬೇಕು: ಕುಮಾರಸ್ವಾಮಿ
ಮುಂಬರುವ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಎಲ್ಲಾ ಸುದ್ದಿಗಳು ಕೇವಲ ವದಂತಿ ಎಂದು ಜೆಡಿಎಸ್ ಹಿರಿಯ ನಾಯಕ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ, ಬಿಜೆಪಿ ನಾಯಕರ ಜೊತೆ ಅಂತಹ ಯಾವುದೇ ಚರ್ಚೆ ನಡೆದಿಲ್ಲ ಎಂದು ಕೂಡ ಸ್ಪಷ್ಟಪಡಿಸಿದ್ದಾರೆ.

