corruption

ಬಿಜೆಪಿ ಪಾಲಿಗೆ ರಾಜಕೀಯವೆಂದರೆ ಕಳ್ಳದಂಧೆ; ಮೋದಿ ಅಣತಿಯಂತೆ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟ: ಕಾಂಗ್ರೆಸ್
ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಆಪರೇಷನ್ ಕಮಲಕ್ಕಾಗಿ ಹಣ ಹೂಡಿದ್ದೇಕೆ ಎಂದು ಭಾರತೀಯ ಜನತಾ ಪಕ್ಷವನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಕೊರೋನಾ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ- ಡಿಕೆ ಶಿವಕುಮಾರ್
ಕೊರೋನಾ ನಿಗ್ರಹ ವಿಚಾರದಲ್ಲಿ ರಾಜ್ಯ ಮಟ್ಟದಲ್ಲಿ ಭಾರಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಅದರ ಪರಿಣಾಮವಾಗಿ ನಾಯಕತ್ವ ಬದಲಾವಣೆಯಾಗಿದೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರಾಫೆಲ್ ಒಪ್ಪಂದದ ತನಿಖೆಯನ್ನು ಜೆಪಿಸಿಗೆ ವಹಿಸದೆ ಕೇಂದ್ರ ಸರ್ಕಾರಕ್ಕೆ ಬೇರೆ ಆಯ್ಕೆಯೇ ಇಲ್ಲ: ಕಾಂಗ್ರೆಸ್
ರಾಫೆಲ್ ಒಪ್ಪಂದದ ತನಿಖೆಯನ್ನು ಜೆಪಿಸಿಗೆ ವಹಿಸದೇ ಸರ್ಕಾರಕ್ಕೆ ಬೇರೆ ಆಯ್ಕೆಯೇ ಇಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.

ರಫೆಲ್ ಯುದ್ಧ ವಿಮಾನ ಖರೀದಿ ಕುರಿತು ಫ್ರಾನ್ಸ್ ನಲ್ಲಿ ತನಿಖೆ ಪ್ರಾರಂಭ: ಜೆಪಿಸಿ ತನಿಖೆಗೆ ಆದೇಶಿಸುವಂತೆ ಪ್ರಧಾನಿಗೆ ಕಾಂಗ್ರೆಸ್ ಆಗ್ರಹ
ರಫೆಲ್ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಫ್ರಾನ್ಸ್ ಸರ್ಕಾರ ನ್ಯಾಯಾಧೀಶರನ್ನು ನೇಮಕ ಮಾಡಿದ ಬೆನ್ನಲ್ಲೇ ಇತ್ತ ಭಾರತದಲ್ಲೂ ಈ ಕುರಿತಂತೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ರಾಜ್ಯದಲ್ಲಿ ಲೂಟಿಕೋರರ ಆಡಳಿತ: ಜಿದ್ದಿಗೆ ಬಿದ್ದವರಂತೆ ಪೈಪೋಟಿಯಿಂದ ಭ್ರಷ್ಟಾಚಾರ- ಸಿದ್ದರಾಮಯ್ಯ
ರಾಜ್ಯದಲ್ಲಿ ಹಣ ದೋಚಲು ಆಡಳಿತ ಪಕ್ಷದವರ ನಡುವೆಯೇ ಕಿತ್ತಾಟ ನಡೆಯುತ್ತಿದೆ. ನಾನೆಷ್ಟು, ನೀನೆಷ್ಟು ಎಂದು ಜಿದ್ದಿಗೆ ಬಿದ್ದವರಂತೆ ಪೈಪೋಟಿಯಿಂದ ಬ್ರಷ್ಟಾಚಾರ ಮಾಡುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ಕಿತ್ತು ಹಾಕಿದರೆ ಮಾತ್ರ ರಾಜ್ಯಕ್ಕೆ ಪರಿಹಾರ ದೊರೆಯಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೂಡಲೆ ರಾಜೀನಾಮೆ ನೀಡಿ: ಮುಖ್ಯಮಂತ್ರಿ ಯಡಿಯೂರಪ್ಪಗೆ ಕಾಂಗ್ರೆಸ್ ಆಗ್ರಹ
ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಎಚ್.ವಿಶ್ವನಾಥ್ ಅವರು ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಆಗ್ರಹಿಸಿದ್ದಾರೆ.

ರಾಮಜನ್ಮಭೂಮಿ ಟ್ರಸ್ಟ್ ನಿಂದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ: ಆಪ್ ಮತ್ತು ಸಮಾಜವಾದಿ ಪಕ್ಷ ಆರೋಪ
ಕಳೆದ ಮಾರ್ಚ್ ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ನಿರ್ಮಾಣಕ್ಕೆ ಖರೀದಿಸಿರುವ ಜಮೀನಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ, ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರು ಮತ್ತು ಪದಾಧಿಕಾರಿಗಳು ಸೇರಿಕೊಂಡು ಈ ಭ್ರಷ್ಟಾಚಾರವೆಸಗಿದ್ದಾರೆ ಎಂದು ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

'ಮಹಾ' ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್‌ಗೆ ಸಿಬಿಐ ಸಮನ್ಸ್!
ಭ್ರಷ್ಟಾಚಾರ ಆರೋಪದ ಮೇಲೆ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಗೆ ಸಿಬಿಐ ಸಮನ್ಸ್ ನೀಡಿದೆ.

ಸಿಎಂ ಯಡಿಯೂರಪ್ಪ ವಿರುದ್ಧದ ಕೇಸ್ ರದ್ಧತಿಗೆ ಹೈಕೋರ್ಟ್ ನಕಾರ
ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐಟಿ ಕಾರಿಡಾರ್ ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ನಡೆದಿರುವ ಲೋಕಾಯುಕ್ತ ಕೋರ್ಟ್ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

