council

ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನೂತನ ಸದಸ್ಯರು
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ರಾಜ್ಯಪಾಲ ಅಂಗೀಕಾರ: ಆರತಿ ಕೃಷ್ಣ, ಪತ್ರಕರ್ತ ಶಿವಕುಮಾರ್ ಸೇರಿ ನಾಲ್ವರ ನೇಮಕ
ನಾಲ್ಕು ಸ್ಥಾನಗಳ ನಾಮ ನಿರ್ದೇಶನಕ್ಕೆ ರಾಜ್ಯಪಾಲರು ಅಂಗೀಕಾರ ಹಾಕಿದ್ದರಿಂದಾಗಿ, ಪರಿಷತ್ತಿನಲ್ಲಿ ಈಗ ಕಾಂಗ್ರೆಸ್ ಏಕೈಕ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ–ಜೆಡಿಎಸ್ ಸೇರಿ 37 ಸದಸ್ಯರ ಬಲ ಹೊಂದಿವೆ.

ಸೌಹಾರ್ದ ಸಹಕಾರಿ ಮಸೂದೆಗೆ ಮೇಲ್ಮನೆಯಲ್ಲಿ ಸೋಲು; 3 ಮತಗಳಿಂದ ವಿಧೇಯಕ ತಿರಸ್ಕೃತ; ಸರ್ಕಾರಕ್ಕೆ ಮುಖಭಂಗ
ವಿಧಾನ ಪರಿಷತ್ತಿನ ಬುಧವಾರದ ಕಲಾಪದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಸದರಿ ಮಸೂದೆ ಮಂಡಿಸಿದರು.

PM 'Vote chor': ಪರಿಷತ್‌ನಲ್ಲಿ ನಸೀರ್ ಅಹ್ಮದ್ ಹೇಳಿಕೆ; ವಾಗ್ವಾದ-ಕೋಲಾಹಲ
ಎಲೆಕ್ಷನ್‌ನಲ್ಲಿ ಫ್ರಾಡ್ ಮಾಡಿ ಪ್ರಧಾನಮಂತ್ರಿಯಾಗಿದ್ದಾರೆ. ನೋವಿನಿಂದ ನಾನು ಹೇಳಿದ್ದೇನೆ. ವ್ಯಕ್ತಿಗತವಾಗಿ ಟೀಕೆ ಮಾಡಬೇಕೆಂದೇನೂ ಇಲ್ಲ. ಇದರಿಂದ ಯಾರಿಗಾದರೂ ನೋವಾಗಿದ್ದರೆ ನಾನು ಹೇಳಿದ್ದನ್ನು ವಾಪಸ್ ಪಡೆಯುತ್ತೇನೆ.

ರಾಜ್ಯದ ಹಲವೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಳ: ಆಶ್ರಯ ತಾಣಗಳಿಗೆ ರವಾನಿಸುವಂತೆ ಆಗ್ರಹ
ಮಕ್ಕಳು, ಹಿರಿಯ ನಾಗರಿಕರ ಮೇಲೆ ನಾಯಿ ಕಚ್ಚುವ ಪ್ರಕರಣಗಳು ಅಧಿಕವಾಗುತ್ತಿವೆ. ಚಿಕ್ಕಮಗಳೂರಿಗೆ ಸೀಮಿತವಾಗಿರದೇ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಈ ಸಮಸ್ಯೆ ಉಲ್ಬಣಗೊಂಡಿದೆ.

ಹಲ್ಲೆಗೆ ಯತ್ನಿಸಿದವರ ವಿರುದ್ದ ಕಾನೂನು ಹೋರಾಟ, ಪರಿಷತ್ತಿನಲ್ಲಿ ಹಕ್ಕುಚ್ಯುತಿ ಮಂಡನೆ: ಸಿ.ಟಿ ರವಿ
ಹಲ್ಲೆಗೆ ಮುಂದಾದಾಗ ಇದ್ದವರು ಲಕ್ಷ್ಮಿ ಹೆಬ್ಬಾಳ್ಕರ್ ಕಡೆಯವರು. ಯಾರೂ ಅಪರಿಚಿತರಲ್ಲ. ಇಬ್ಬರು ಹೆಬ್ಬಾಳ್ಕರ್ ಪಿಎಗಳು ಹಾಗೂ ಬಹುತೇಕ ಮುಸ್ಲಿಮರು ಇದ್ದರು. ಮಾಹಿತಿ ಸಂಗ್ರಹಿಸಿದ್ದೇನೆ. ಎಲ್ಲವನ್ನೂ ಸಂಬಂಧಪಟ್ಟವರಿಗೆ ನೀಡುತ್ತೇನೆ.

ಬೆಂಗಳೂರು ಹೊರವಲಯದಲ್ಲಿ ಘನತ್ಯಾಜ್ಯ ವಿಲೇವಾರಿಗೆ ಶೀಘ್ರವೇ ಟೆಂಡರ್; ಹೊಸಕೋಟೆ, ಬಿಡದಿ, ನೆಲಮಂಗಲಕ್ಕೆ ಮೆಟ್ರೋ ವಿಸ್ತರಣೆ ಪ್ರಸ್ತಾಪ: DKS
ಮಾರ್ಗ ವಿಸ್ತರಣೆ ವಿಚಾರವನ್ನು ನಾನು ಈಗಾಗಲೇ ಯೋಜನೆಯಲ್ಲಿ ಸೇರಿಸಿ ವಿಸ್ತೃತ ಸಮೀಕ್ಷೆ ಮಾಡಿಸುತ್ತಿದ್ದೇನೆ. ನಮ್ಮ ಸರ್ಕಾರ ಹಾಗೂ ಮೆಟ್ರೋ ಸಂಸ್ಥೆ ಅವರ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸಿದೆ.

ಮೀಸಲಾತಿ ಮಿತಿ ಶೇ.50ಕ್ಕಿಂತ ಹೆಚ್ಚಿಸುವಂತೆ ಪರಿಷತ್ ನಲ್ಲಿ ಸದಸ್ಯರ ಒತ್ತಾಯ
ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳ ಮೀಸಲಾತಿ ಕೋಟಾವನ್ನು ಈಗಿರುವ ಶೇ.4ರಿಂದ ಶೇ.7ಕ್ಕೆ ಹೆಚ್ಚಿಸಬೇಕು ಎಂದು ಬಿಜೆಪಿ ಎಂಎಲ್ ಸಿ ತಳವಾರ ಸಾಬಣ್ಣ ಪ್ರಶ್ನಿಸಿದಾಗ ವಿಷಯ ಚರ್ಚೆಗೆ ಬಂತು.

ಪರಿಷತ್ ನಲ್ಲಿ ನಾಲ್ಕು ಸ್ಥಾನ ತೆರವು: ಮೇಲ್ಮನೆಯಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಬಲ; ಮಸೂದೆ ಪಾಸು ಮತ್ತಷ್ಟು ಸಲೀಸು!
ಸಿಪಿ ಯೋಗೇಶ್ವರ್ ಅವರ ಅನಿರೀಕ್ಷಿತ ರಾಜೀನಾಮೆ ಹಿನ್ನೆಲೆಯಲ್ಲಿ ಮೂರನೇ ಖಾಲಿ ಸ್ಥಾನ ಸೃಷ್ಟಿಸಿಯಾಗಿದೆ, ಇದರ ಜೊತೆಗೆ ಜೆಡಿಎಸ್ ಎಂಎಲ್ ಸಿ ತಿಪ್ಪೇಸ್ವಾಮಿ ಕೂಡ ಜನವರಿಯಲ್ಲಿ ನಿವೃತ್ತಿ ಹೊಂದಲಿದ್ದಾರೆ.

