council

ನಡೆಯದ ಬಿಬಿಎಂಪಿ ಚುನಾವಣೆ: ಕೌನ್ಸಿಲರ್ ಗಳಿಲ್ಲದೆ ಮಳೆಗಾಲದಲ್ಲಿ ಸಮಸ್ಯೆ ನಿರ್ವಹಿಸುವುದೇ ದುಸ್ತರ!
ರಾಜ್ಯದಲ್ಲಿ ಪ್ರತಿ ಚುನಾವಣೆಯೂ ನಿಗದಿತ ಸಮಯಕ್ಕೆ ನಡೆಯುತ್ತದೆ, ಅದು ವಿಧಾನಸಭೆ ಅಥವಾ ಲೋಕಸಭೆ ಅಥವಾ ಎಂಎಲ್‌ಸಿ ಚುನಾವಣೆಯಾಗಿರಲಿ, ಆದರೆ ಬಿಬಿಎಂಪಿ ಚುನಾವಣೆ ಯಾವಾಗಲೂ ವಿಳಂಬವಾಗುತ್ತದೆ.

ವಿಧಾನಸಭೆ ಕಲಾಪ: ಪರಿಷತ್ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಬಿಜೆಪಿ ಮೀನಾ ಮೇಷ!
ಮೇಲ್ಮನೆಯಲ್ಲಿ ಪ್ರಬಲ ನಾಯಕನ ಅಗತ್ಯವನ್ನು ಮನಗಂಡ ಬಿಜೆಪಿ, ಚಿಕ್ಕಮಗಳೂರಿನಿಂದ ಪರಾಭವಗೊಂಡಿದ್ದ ಮಾಜಿ ಶಾಸಕ ಸಿ.ಟಿ.ರವಿ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿತು. ಆದರೆ ಇಲ್ಲಿಯವರೆಗೆ, ಪಕ್ಷವು ವಿಪಕ್ಷ ನಾಯಕನ ಸ್ಥಾನವನ್ನು ಅಧಿಕೃತಗೊಳಿಸಿಲ್ಲ.

ತೆಲಂಗಾಣ ಚುನಾವಣೆಗೆ 20 ಕೋಟಿ ರೂ. ರವಾನೆ: ಬಿಜೆಪಿ ಎಂಎಲ್‌ಸಿ ಆರೋಪ; ಪರಿಷತ್ ನಲ್ಲಿ ಕೋಲಾಹಲ
ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗೆ ಮೀಸಲಾದ ಹಣವನ್ನು ತೆಲಂಗಾಣದಲ್ಲಿ ಚುನಾವಣೆ ನಡೆದ ವೇಳೆ ಸಹಕಾರಿ ಬ್ಯಾಂಕ್ ಖಾತೆಗೆ ಏಕೆ ಕಳುಹಿಸಲಾಗಿದೆ ಎಂದು ಪ್ರಶ್ನಿಸಿದ ಎಂಎಲ್‌ಸಿ ರವಿಕುಮಾರ್, ಬಳ್ಳಾರಿಗೂ 20 ಕೋಟಿ ರೂ. ವರ್ಗಾವಣೆಯಾಗಿದೆ ಎಂದು ಆರೋಪಿಸಿದರು.

ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರವಿ V/S ರವಿ ಪೈಪೋಟಿ; ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸ್ಥಾನಕ್ಕೆ ಕುತ್ತು?
ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಮತ್ತೊಬ್ಬ ಎಂಎಲ್‌ಸಿ ಎನ್ ರವಿಕುಮಾರ್ ಅವರ ಹೆಸರು ಕೂಡ ಕೇಳಿಬರುತ್ತಿದೆ.

ವಿಧಾನಸಭೆಯಿಂದ ಪರಿಷತ್ ಚುನಾವಣೆ: ಕಾಂಗ್ರೆಸ್ ನಿಂದ ಯತೀಂದ್ರ, ಬಿಜೆಪಿಯಿಂದ ಸಿ.ಟಿ ರವಿ, ಮಾಧುಸ್ವಾಮಿ ಆಯ್ಕೆಗೆ ಒಲವು!
ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಮತ್ತು ಬಿಜೆಪಿಯಿಂದ ಹಿರಿಯ ನಾಯಕ ಸಿ.ಟಿ.ರವಿ ಮುಂಚೂಣಿಯಲ್ಲಿದ್ದಾರೆ.

ಹಿಂದೂ ಧಾರ್ಮಿಕ ದತ್ತಿ ಮಸೂದೆಗೆ ವಿಧಾನಸಭೆಯಲ್ಲಿ ಮತ್ತೆ ಅಂಗೀಕಾರ; ರಾಜ್ಯಪಾಲರು ಅಂಕಿತ ಹಾಕುವರೇ?
ಕಳೆದ ವಾರ ವಿಧಾನ ಪರಿಷತ್ತಿನಲ್ಲಿ ತಿರಸ್ಕೃತಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ಗುರುವಾರ ಮತ್ತೆ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಲಾಗಿದೆ.

ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕನಾಗಿ ಅರವಿಂದ್ ಬೆಲ್ಲದ್ ನೇಮಕ!
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಎನ್ಇಪಿ ಚರ್ಚೆಯಲ್ಲಿ ಪ್ರಧಾನಿ ಮೋದಿ ಪದವಿ ಕುರಿತು ಪ್ರಸ್ತಾಪ: ಪರಿಷತ್ ಕಲಾಪದಲ್ಲಿ ತೀವ್ರ ಗದ್ದಲ
ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಕುರಿತ ಚರ್ಚೆಗೆ ಉತ್ತರ ನೀಡುವ ವೇಳೆ ಪ್ರಧಾನಿ ಮೋದಿ ಕುರಿತು ಪ್ರಸ್ತಾಪ ಮಾಡಿದ್ದಕ್ಕೆ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಶುಕ್ರವಾರ ವಾಕ್ಸಮರ ನಡೆಯಿತು.

ವಿಧಾನ ಪರಿಷತ್‌ನಲ್ಲಿ ಐದು ಮಸೂದೆಗಳಿಗೆ ಅಂಗೀಕಾರ
ವಿರೋಧ ಪಕ್ಷದ ಸದಸ್ಯರ ಗೈರುಹಾಜರಿಯ ನಡುವೆಯೇ ಐದು ತಿದ್ದುಪಡಿ ಮಸೂದೆಗಳಿಗೆ ಗುರುವಾರ ವಿಧಾನ ಪರಿಷತ್‌ನಲ್ಲಿ ಅಂಗೀಕಾರ ದೊರೆಯಿತು.

