council

ಪರಿಷತ್ತಿನಲ್ಲಿ ಪಾಸಾಗದ ಎಪಿಎಂಸಿ ತಿದ್ದುಪಡಿ ವಿಧೇಯಕ: ಮತ ವಿಭಜನೆಯಲ್ಲಿ ಸರ್ಕಾರಕ್ಕೆ ಸೋಲು, ಪರಿಶೀಲನೆಗೆ ಸದನ ಸಮಿತಿ ರಚನೆ
ವಿಧಾನಸಭೆಯಲ್ಲಿ ಅಂಗೀಕೃತವಾದ ‘ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ 2023’ ಅನ್ನು ಮೇಲ್ಮನೆಯಲ್ಲಿ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮತದಾನದ ಮೂಲಕ ಶಾಸನ ಪರಿಶೀಲನಾ ಸಮಿತಿಗೆ ಒಪ್ಪಿಸಲು ನಿರ್ಧರಿಸಲಾಯಿತು. ಇದರಿಂದಾಗಿ, ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ.

ಸರ್ಕಾರದ ಮುಂದೆ ಗೋಹತ್ಯೆ ನಿಷೇಧ ಕಾಯ್ದೆ ರದ್ದು ಪ್ರಸ್ತಾಪವಿಲ್ಲ: ಸಚಿವ ಕೆ.ವೆಂಕಟೇಶ್
ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ಅನ್ನು ರದ್ದುಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರದಿಂದ ಸ್ಪಷ್ಟ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ ನಂತರ ಪರಿಷತ್ತಿನಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು.

ವಿಧಾನ ಪರಿಷತ್ ಗೆ ನಾಮ ನಿರ್ದೇಶನ: ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್!
ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಗೊಳ್ಳುವ ಮೂವರು ನಾಯಕರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ. ಶಿಕ್ಷಣತಜ್ಞರಾದ ಮನ್ಸೂರ್ ಅಲಿ ಖಾನ್ ಮತ್ತು ಎಂಆರ್ ಸೀತಾರಾಮ್ ಮತ್ತು ಮಾಜಿ ಐಆರ್ ಎಸಿ ಅಧಿಕಾರಿ ಸುದಾಮ ದಾಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಅಧಿಕಾರಿಗಳಿಬ್ಬರಿಗೂ ಅಭಿಮಾನಿ ಸಂಘಗಳಿವೆ; ಇವರು ರಾಜಕಾರಣಿಗಳಾ, ಜನಪ್ರತಿನಿಧಿಗಳಾ? ಇಬ್ಬರು ಮಹಿಳೆಯರಿಂದ ರಾಜ್ಯದ ಆಡಳಿತಕ್ಕೆ ಅಗೌರವ!
ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳು ಬಹಿರಂಗವಾಗಿ ಕಿತ್ತಾಡಿಕೊಳ್ಳುವ ಮೂಲಕ ರಾಜ್ಯದ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ ಸಿ ಎಚ್.ವಿಶ್ವನಾಥ್ ಹೇಳಿದ್ದಾರೆ.

ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ
ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು.

ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆ: ವಿಧಾನ ಪರಿಷತ್ ನಲ್ಲಿ ಗದ್ದಲ-ಕೋಲಾಹಲ
10 ವರ್ಷಗಳಿಂದ ಮೂಲೆ ಸೇರಿದ್ದ ವಕ್ಫ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನ ಪರಿಷತ್ನಲ್ಲಿ ಮಂಡಿಸಲಾಯಿತು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಸದನದಲ್ಲಿ ಗದ್ದಲ ಉಂಟಾಯಿತು.

ಬೆಳಗಾವಿ ಅಧಿವೇಶನದಲ್ಲಿ ಎಸ್ಆರ್ ಪಾಟೀಲ್ ವಿದಾಯ ಭಾಷಣ; 2 ದಶಕಗಳ ನಂತರ ಮೇಲ್ಮನೆಯಿಂದ ಹೊರನಡೆದ ಮುತ್ಸದ್ದಿ
ಪಕ್ಷದ ನಿಷ್ಠಾವಂತ ನಾಯಕನಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಎಸ್ ಆರ್ ಪಾಟೀಲ್ ಅವರು ಶುಕ್ರವಾರ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ತಮ್ಮ ಜವಾಬ್ದಾರಿಯನ್ನು ಪೂರ್ಣಗೊಳಿಸಿದ್ದಾರೆ.

'ಚಿಂತಕರ ಚಾವಡಿ' ಪರಿಷತ್ ಈಗ 'ಉಳ್ಳವರ ಮನೆ'; ಮೇಲ್ಮನೆ ಘನತೆ, ಪಾವಿತ್ರ್ಯತೆ ಕಳೆದುಹೋಗುತ್ತಿದೆ: ರಘು ಆಚಾರ್
ವಿಧಾನ ಪರಿಷತ್ ನ ಪರಂಪರೆ ಮತ್ತು ಈಗಿನ ವ್ಯವಸ್ಥೆಯ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿದ ನಿರ್ಗಮಿತ ಸದಸ್ಯ ರಘು ಆಚಾರ್, ಹಿರಿಯ ಸದಸ್ಯರ ತರಾಟೆಯಿಂದ ಕ್ಷಮೆ ಕೇಳಿದ ಪ್ರಸಂಗ ಜರುಗಿತು.

ಕೆಎಸ್ ಆರ್ ಟಿಸಿ, ಬಿಎಂಟಿಸಿ ಖಾಸಗೀಕರಣ ಇಲ್ಲ: ಮೇಲ್ಮನೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಖಾಸಗೀಕರಣದ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಮಾಜ ಕಲ್ಯಾಣ ಸಚಿವರು ಆಗಿರುವ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ನಲ್ಲಿ ಹೇಳಿದ್ದಾರೆ.

