Counting of votes

ಕರ್ನಾಟಕ ಚುನಾವಣೆ ಫಲಿತಾಂಶಕ್ಕೆ ಕೌಂಟ್ ಡೌನ್; ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಭದ್ರತೆ
ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮುಗಿದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.

ನಾಳೆ ಮತ ಎಣಿಕೆ: ಈ ರಸ್ತೆಗಳಲ್ಲಿ ಸಂಚರಿಸಬೇಡಿ, ಪರ್ಯಾಯ ಮಾರ್ಗ ಈ ಕೆಳಗಿನಂತಿದೆ
ನಾಳೆ ಮೇ 13 ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಸಂಚಾರ ಮತ್ತು ಪಾರ್ಕಿಂಗ್ ನ್ನು ನಿರ್ಬಂಧಿಸಲಾಗಿದೆ.

ಮತ ಎಣಿಕೆಗೆ ಕ್ಷಣಗಣನೆ: ರಾಜಧಾನಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ, ಸಿದ್ಧತೆ ಹೇಗಿದೆ?
28 ವಿಧಾನಸಭೆ ಕ್ಷೇತ್ರ ಹೊಂದಿರುವ ಬೆಂಗಳೂರು ನಗರದಲ್ಲಿ ನಾಳೆ ಮತ ಎಣಿಕೆ ಸಂದರ್ಭದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 10 ಡಿಸಿಪಿಗಳು ಮತ್ತು ಇತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸುವುದರೊಂದಿಗೆ ನಗರದ ಎಲ್ಲಾ ಐದು ಎಣಿಕೆ ಕೇಂದ್ರಗಳಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

ಈಶಾನ್ಯ ರಾಜ್ಯಗಳ ಚುನಾವಣೆ: ನಾಗಾಲ್ಯಾಂಡ್, ತ್ರಿಪುರಾದಲ್ಲಿ ಬಿಜೆಪಿ ಮೈತ್ರಿಕೂಟ ಮುಂಚೂಣಿ, ಮೇಘಾಲಯದಲ್ಲಿ ಎನ್ ಪಿಪಿ ಮುನ್ನಡೆ
ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದರೆ,ಮೇಘಾಲಯದಲ್ಲಿ ಎನ್‌ಪಿಪಿ ಆರಂಭಿಕ ಮುನ್ನಡೆ ಸಾಧಿಸಿದೆ.

3 ಈಶಾನ್ಯ ರಾಜ್ಯಗಳ ಚುನಾವಣೆ: ಮತ ಎಣಿಕೆ ಆರಂಭ; ತ್ರಿಪುರಾದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ
ಮೂರು ಈಶಾನ್ಯ ರಾಜ್ಯಗಳ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮೂರು ರಾಜ್ಯಗಳಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದೆ.

ಗುಜರಾತ್, ಹಿಮಾಚಲ ಪ್ರದೇಶ ಜೊತೆಗೆ 4 ವಿಧಾನಸಭೆ ಮತ್ತು ಒಂದು ಲೋಕಸಭೆ ಕ್ಷೇತ್ರದ ಫಲಿತಾಂಶ ಇಂದು: ಮತ ಎಣಿಕೆ ಆರಂಭ
ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳ ಜೊತೆಗೆ ಆರು ವಿಧಾನಸಭೆ ಮತ್ತು ಒಂದು ಲೋಕಸಭೆ ಉಪಚುನಾವಣೆಗಳ ಮತ ಎಣಿಕೆ ಸಹ ಇಂದು ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಮತ ಎಣಿಕೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಮತ ಎಣಿಕೆ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಯಲ್ಲಿದೆ.

ದೆಹಲಿ ಮಹಾನಗರ ಪಾಲಿಕೆ 250 ವಾರ್ಡ್ ಗಳ ಚುನಾವಣೆ ಮತ ಎಣಿಕೆ ಆರಂಭ: 32 ವಾರ್ಡ್ ಗಳಲ್ಲಿ ಬಿಜೆಪಿ ಮುಂದು, ಆಪ್ 8, ಕಾಂಗ್ರೆಸ್ 1ರಲ್ಲಿ ಮುಂಚೂಣಿ
ದೆಹಲಿ ಮಹಾನಗರ ಪಾಲಿಕೆ(MCD) ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ದೆಹಲಿ ಮಹಾನಗರ ಪಾಲಿಕೆಯಲ್ಲಿ ಕಳೆದ 15 ವರ್ಷಗಳಿಂದ ಆಡಳಿತ ನಡೆಸುತ್ತಿದ್ದು ಈ ಬಾರಿ ಕೂಡ ಅಧಿಕಾರ ಉಳಿಸಿಕೊಳ್ಳುವ ಆಶಾವಾದದಲ್ಲಿದೆ.

ಡಿ.1 ಮತ್ತು 5 ರಂದು ಎರಡು ಹಂತಗಳಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ; ಡಿಸೆಂಬರ್ 8 ಕ್ಕೆ ಮತ ಎಣಿಕೆ
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಗುಜರಾತ್ ವಿಧಾನಸಭೆ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುರುವಾರ ಪ್ರಕಟಿಸಿದ್ದಾರೆ.

ಭಾರತದ 15ನೇ ರಾಷ್ಟ್ರಪತಿ ಯಾರು? ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿ, ಇಂದು ಸಂಜೆ ಫಲಿತಾಂಶ
ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ದೆಹಲಿಯ ಸಂಸತ್ ಭವನದಲ್ಲಿ ಈಗಾಗಲೇ ಆರಂಭವಾಗಿದ್ದು, ರಾಮ್ ನಾಥ್ ಕೋವಿಂದ್ ನಂತರ ದೇಶದ 15ನೇ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬುದು ಇಂದು ಸಂಜೆ ಗೊತ್ತಾಗಲಿದೆ.

