Court

ನನ್ನ ದೇಹದಲ್ಲಿ ಹ್ಯಾಕರ್ ಗಳು ಚಿಪ್ ಇಟ್ಟಿದ್ದಾರೆ: ವ್ಯಕ್ತಿಯ ಆರೋಪ ಆಧರಿಸಿ ತನಿಖೆಗೆ ಕೋರ್ಟ್ ಆದೇಶ!
ಹ್ಯಾಕರ್ ಗಳು ಚಿಪ್ ಇಟ್ಟಿದ್ದಾರೆ ಈ ಮೂಲಕ ತನ್ನ ಸಾಮಾಜಿಕ ಜಾಲತಾಣಗಳನ್ನು ಹ್ಯಾಕ್ ಮಾಡಿದಾರೆ ಎಂದು ಮುಂಬೈ ನ ವ್ಯಕ್ತಿಯೋರ್ವ ಆರೋಪ ಮಾಡಿದ್ದಾರೆ.

ಲಾಲು ಪ್ರಸಾದ್ ಯಾದವ್ ಕುಟುಂಬದ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ
ಉದ್ಯೋಗಕ್ಕಾಗಿ ಭೂಮಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಒಟ್ಟು 4,751 ಪುಟಗಳ ಚಾರ್ಜ್ ಶೀಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಗಲಭೆ ಪ್ರಕರಣ: ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು
ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಲಿದೆ.

ನ್ಯಾಯಾಲಯದಲ್ಲಿ ಸರ್ಕಾರಿ ಅಧಿಕಾರಿಗಳ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪ್ರಕಟ
ಸರಕಾರಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಲು ವಿವರವಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಮತ್ತು ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಕಟಿಸಿದೆ. ಅಂತಹ ಅಧಿಕಾರಿಗಳನ್ನು ಅವಮಾನಿಸುವ ಅಥವಾ ಅವರ ಉಡುಪಿನ ಬಗ್ಗೆ ಅನಗತ್ಯ ಕಾಮೆಂಟ್ ಮಾಡುವುದರ ವಿರುದ್ಧ ನ್ಯಾಯಾಲಯಗಳಿಗೆ ಎಚ್ಚರಿಕೆ ನೀಡಿದೆ.

ಚೆಕ್ ಬೌನ್ಸ್ ಪ್ರಕರಣ: ಸಚಿವ ಮಧು ಬಂಗಾರಪ್ಪ ಅವರಿಗೆ ವಿಧಿಸಿದ್ದ ಶಿಕ್ಷೆ ಅಮಾನತು
ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು 56ನೇ ಸೆಷನ್ಸ್ ನ್ಯಾಯಾಲಯ ಅಮಾನತಿನಲ್ಲಿ ಇರಿಸಿದೆ.

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ ದಂಡ, ಶಿಕ್ಷೆ!
ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಮುಸ್ಲಿಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಬಿಗ್ ರಿಲೀಫ್
ಮುಸ್ಲಿಂ ಮಹಿಳೆಯರ ಅವಹೇಳನ ಮತ್ತು ಧಾರ್ಮಿಕ ದ್ವೇಷ ಬಿತ್ತುವ ಭಾಷಣ ಮಾಡಿದ ಆರೋಪಕ್ಕೆ ಗುರಿಯಾಗಿರುವ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣ: ಲಲಿತ್ ಝಾ ಗೆ 7 ದಿನಗಳ ಪೊಲೀಸ್ ಕಸ್ಟಡಿ
ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಲಲಿತ್ ಝಾಗೆ 7 ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್ ಡಿ ಪಾಟೀಲ್ 9 ದಿನ ಸಿಐಡಿ ವಶಕ್ಕೆ
ಬ್ಲೂಟೂತ್ ಸಾಧನ ಬಳಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆ ಬರೆದ ಅಕ್ರಮ ಪ್ರಕರಣದ ಬಂಧಿತ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್'ನನ್ನು ಸಿಐಡಿ ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡಿದ್ದಾರೆ.

