Court

ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಜಾ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ರೋಹಿಣಿ ಸಿಂಧೂರಿ ಕೇಸ್: ರೂಪಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಆದೇಶಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಕೊಯಂಬತ್ತೂರು: ಕೋರ್ಟ್ ಆವರಣದಲ್ಲಿಯೇ ಪತ್ನಿ ಮೇಲೆ ಆ್ಯಸಿಡ್ ಎರಚಿದ ಪತಿ!
ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದ ಪತ್ನಿ ಮೇಲೆ ಪತಿಯೇ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

ರಸ್ತೆ ಅಪಘಾತ ಪ್ರಕರಣದ ಅಪರಾಧಿಗೆ ದಿನಕ್ಕೆ 5 ಬಾರಿ ನಮಾಜ್, 2 ಗಿಡ ನೆಡುವುದೇ ಶಿಕ್ಷೆ: ಕೋರ್ಟ್ ಆದೇಶ
ರಸ್ತೆ ಅಪಘಾತ ಪ್ರಕರಣದಲ್ಲಿನ ಗಲಾಟೆ ಪ್ರಕರಣದ ಅಪರಾಧಿಯೊಬ್ಬನಿಗೆ ದಿನಕ್ಕೆ 5 ಬಾರಿ ನಮಾಜ್ ಮಾಡುವುದು ಹಾಗೂ 2 ಗಿಡಗಳನ್ನು ನೆಡುವುದೇ ಕೋರ್ಟ್ ನೀಡುತ್ತಿರುವ ಶಿಕ್ಷೆಯಾಗಿದೆ ಎಂದು ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಮಾಲೇಗಾಂವ್ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.

'ಸತ್ಯಮೇವ ಜಯತೇ, ನನ್ನ ಮಾತು ಕೇಳಲು ಅವಕಾಶ ನೀಡಿದ ಕೋರ್ಟ್‌ಗೆ ಕೃತಜ್ಞಳು' ಎಂದು ಕಾನೂನು ಸಮರಕ್ಕೆ ಇಳಿದ ರೂಪಾ ಮೌದ್ಗಿಲ್
ಐಪಿಎಸ್ ಡಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಆರೋಪ -ಪ್ರತ್ಯಾರೋಪಗಳು ಮುಂದುವರಿದು ರೋಹಿಣಿ ಸಿಂಧೂರಿಯವರು ನ್ಯಾಯಾಲಯದ ಮೆಟ್ಟಿಲೇರಿ ಕೋರ್ಟ್ ರೂಪಾ ಅವರಿಗೆ ವೈಯಕ್ತಿಕ ವಿಚಾರಗಳು, ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕದಂತೆ, ಮಾಧ್ಯಮಗಳಿಗೆ ವೈಯಕ್ತಿಕ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸಿದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲುಶಿಕ್ಷೆ: ಕಾನೂನು ಕುಣಿಕೆಯಿಂದ ತಪ್ಪಿಸಲು ಸುಳ್ಳುಕಥೆ ಕಟ್ಟಿದ ಶಾಸಕ ಕುಮಾರಸ್ವಾಮಿ
ಎಂಟು ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಬೆಂಗಳೂರು ಸಿಟಿ ಕೋರ್ಟ್ ದೋಷಿ ಎಂದು ಘೋಷಿಸಿದೆ.

ಉತ್ತರ ಪ್ರದೇಶ: ವ್ಯಕ್ತಿಗೆ ಥಳಿಸಿ, ಹಣ ದೋಚಿದ್ದ 6 ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ
ವ್ಯಕ್ತಿಯೊಬ್ಬರಿಗೆ ಥಳಿಸಿ ಹಣ ದೋಚಿದ ಆರೋಪದ ಮೇಲೆ ಆರು ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ದೂರು ದಾಖಲಾದ 32 ವರ್ಷಗಳ ಬಳಿಕ ತೀರ್ಪು: ಕಲಬೆರಕೆ ಹಾಲು ಮಾರಾಟ ಮಾಡಿದ್ದ ವ್ಯಕ್ತಿಗೆ 6 ತಿಂಗಳ ಜೈಲು ಶಿಕ್ಷೆ!
ಕಲಬೆರಕೆ ಹಾಲು ಮಾರಾಟ ಮಾಡಿದ ಆರೋಪದ ಮೇಲೆ ಸ್ಥಳೀಯ ನ್ಯಾಯಾಲಯವು ವ್ಯಕ್ತಿಯೊಬ್ಬನಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಇನ್ನು ಅಚ್ಚರಿ ವಿಷಯವೆಂದರೆ ದೂರು ದಾಖಲಾದ 32 ವರ್ಷಗಳ ಬಳಿಕ ತೀರ್ಪು ಹೊರಬಂದಿದೆ.

'ಸ್ಯಾಂಟ್ರೋ ರವಿ' ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜ.17ಕ್ಕೆ ಮುಂದೂಡಿಕೆ
'ಸ್ಯಾಂಟ್ರೋ' ರವಿಯನ್ನು ಕೂಡಲೇ ಬಂಧಿಸಬೇಕು ಎಂಬ ಕೂಗು ಎಲ್ಲೆಡೆಯಿಂದ ಕೇಳಿಬರುತ್ತಿರುವ ಬೆನ್ನಲ್ಲೇ, ಮೈಸೂರಿನ 6ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸ್ಯಾಂಟ್ರೋ ರವಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನವರಿ 17ಕ್ಕೆ ಮುಂದೂಡಿದೆ.

