Court

ಮಂಗಳೂರು ಮಳಲಿ ಮಸೀದಿ ವಿವಾದ: ವಿಹೆಚ್ಪಿ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು
ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಬುಧವಾರ ಅಂಗೀಕರಿಸಿದೆ.

2ನೇ ಪೋಕ್ಸೋ ಪ್ರಕರಣ: ಮುರುಘಾ ಶ್ರೀ ಮೂರು ದಿನ ಪೊಲೀಸ್ ಕಸ್ಟಡಿಗೆ
ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಶಿವಮೊಗ್ಗ: ಸಾಹಿತಿ ಪ್ರೊ. ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ
ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಮೋರ್ಬಿ ಸೇತುವೆ ದುರಸ್ತಿ ಮಾಡಿದ ಗುತ್ತಿಗೆದಾರರು ಆ ಕೆಲಸಕ್ಕೆ ಅರ್ಹರಾಗಿರಲಿಲ್ಲ: ನ್ಯಾಯಾಲಯಕ್ಕೆ ತಿಳಿಸಿದ ಪ್ರಾಸಿಕ್ಯೂಷನ್
ಗುಜರಾತಿನ ಮೊರ್ಬಿಯಲ್ಲಿನ ತೂಗು ಸೇತುವೆಯ ದುರಸ್ತಿ ಮಾಡಿದ ಗುತ್ತಿಗೆದಾರರು ಆ ಕೆಲಸ ನಿರ್ವಹಿಸಲು ಅರ್ಹರಾಗಿರಲಿಲ್ಲ ಎಂದು ಪ್ರಾಸಿಕ್ಯೂಷನ್ ಮಂಗಳವಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ಹುಡುಗರೇ ಹುಷಾರ್, ಹುಡುಗಿಯರನ್ನು 'ಐಟಂ' ಅಂತಾ ಕರೆಯೋದು ಅವಹೇಳನಾಕಾರಿ; ಜೈಲೂಟ ಗ್ಯಾರಂಟಿ!
ಹುಡುಗಿಯರನ್ನು 'ಐಟಂ'' ಅಂತಾ ಕರೆಯೋದು ಅವಹೇಳನಾಕಾರಿ ಎಂದು ಹೇಳಿರುವ ಇಲ್ಲಿನ ವಿಶೇಷ ನ್ಯಾಯಾಲಯವೊಂದು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ವ್ಯಕ್ತಿಯೊಬ್ಬರಿಗೆ ಒಂದೂವರೆ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಬಿಬಿಎಂಪಿಯ ಅಕ್ರಮ ಒತ್ತುವರಿ ತೆರವು ಕಾರ್ಯಕ್ಕೆ ಬ್ರೇಕ್: ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮಾಲೀಕರಿಗೆ ಅನುಕೂಲ!
ವಾರಾಂತ್ಯಗಳಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಬಿಬಿಎಂಪಿಗೆ ಹಿನ್ನಡೆಯಾಗಿದೆ. ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯುವುದನ್ನು ತಪ್ಪಿಸಲು ವಾರಾಂತ್ಯದಲ್ಲಿ ಮಳೆನೀರು ಚರಂಡಿ ಒತ್ತುವರಿ ತೆರವು ಮಾಡಲು ಯೋಜನೆ ರೂಪಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ ಕಾರ್ಯವಿಳಂಬದಿಂದ ಅದರ ಕಾರ್ಯತಂತ್ರ ವಿಫಲವಾಗಿದೆ.

ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಪ್ರಕರಣದ ವಿಚಾರಣೆ ಅಕ್ಟೋಬರ್ 11ಕ್ಕೆ ಮುಂದೂಡಿಕೆ!
ಜ್ಞಾನವಾಪಿ ಮಸೀದಿಯೊಳಗೆ ಪತ್ತೆಯಾದ 'ಶಿವಲಿಂಗ' ಎಂದು ಹೇಳಿಕೊಳ್ಳುವ ರಚನೆಯ ಕಾರ್ಬನ್ ಡೇಟಿಂಗ್ ನಡೆಸುವಂತೆ ಕೋರಿ ಹಿಂದೂಗಳು ಸಲ್ಲಿಸಿದ ಮನವಿಯ ವಿಚಾರಣೆಯನ್ನು ವಾರಣಾಸಿಯ ನ್ಯಾಯಾಲಯ ಅಕ್ಟೋಬರ್ 11ಕ್ಕೆ ಮುಂದೂಡಿದೆ.

ಗ್ಯಾನ್ ವಾಪಿ ವಿವಾದ: ಶಿವಲಿಂಗದ ಕಾರ್ಬನ್ ಡೇಟಿಂಗ್ ಗೆ ಮನವಿ ಮಾಡಿದ್ದ ಅರ್ಜಿ ಮಾನ್ಯ; ಸೆ.29 ಕ್ಕೆ ಮುಂದಿನ ವಿಚಾರಣೆ
ಗ್ಯಾನ್ ವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸಲು ಮನವಿ ಮಾಡಿದ್ದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ಗುರುವಾರ ಅಂಗೀಕರಿಸಿದೆ.

ನಿಯಮ ಉಲ್ಲಂಘಿಸಿ ದುಬೈ ನಲ್ಲಿ ವಾಸ್ತವ್ಯವಿದ್ದ ವಾದ್ರ ನಡೆಗೆ ಕೋರ್ಟ್ ಕೆಂಡಾಮಂಡಲ
ಉದ್ಯಮಿ ರಾಬರ್ಟ್ ವಾದ್ರಗೆ ನೀಡಲಾಗಿದ್ದ ಅನುಮತಿಯ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕೆ ದೆಹಲಿಯ ಕೋರ್ಟ್ ಕೆಂಡಾಮಂಡಲವಾಗಿದೆ.

