COVID-19 cases

ರಾಜ್ಯದಲ್ಲಿ ಇಂದು ಕೊರೋನಾಗೆ 30 ಬಲಿ, ಬೆಂಗಳೂರಿನಲ್ಲಿ 981 ಸೇರಿ 1843 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 30 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 402ಕ್ಕೇರಿಕೆಯಾಗಿದೆ.

ರಾಜ್ಯದಲ್ಲಿ ಜುಲೈ-ಆಗಸ್ಟ್ ನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ: ಆರ್.ಅಶೋಕ್
ಕೋವಿಡ್ ನಿಯಂತ್ರಣ ತಂಡಕ್ಕೆ ಇನ್ನಷ್ಟು ತಜ್ಞ ವೈದ್ಯರ ನೇಮಕ ಮಾಡಲಾಗುವುದು, ಸೋಂಕು ಲಕ್ಷಣ ಹೊಂದಿರುವವರು ಆಸ್ಪತ್ರೆಗೆ ದಾಖಲಾಗಲು ಆಗಮಿಸಿದರೆ ಪ್ರವೇಶ ನಿರಾಕರಿಸಬಾರದು,...

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದಿರುವವರಿಂದ ಕೊರೋನಾ ಜಾಸ್ತಿ: ವೀರೇಂದ್ರ ಹೆಗ್ಗಡೆ ಸ್ಪಷ್ಟೀಕರಣ
ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬಂದಿರುವವರಿಂದ ಕೊರೋನಾ ಪ್ರಕರಣ ಜಾಸ್ತಿಯಾಗುತ್ತಿದೆ ಎಂಬ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ಹಾಗೂ ವಿರೋಧ ಚರ್ಚೆಗೆ ಕಾರಣವಾಗಿದೆ. ಕೆಲವರು ಹೆಗ್ಗಡೆ ಅವರ ಪರವಾಗಿ ವಾದಿಸುತ್ತಿದ್ದರೆ, ಮತ್ತೆ ಕೆಲವರು ವಿರುದ್ಧವಾಗಿ ವಾದಿಸುತ್ತಿದ್ದಾರೆ.

ಲಾಕ್ ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನಲ್ಲಿ ಹೆಚ್ಚಾದ ಕೊರೋನಾ: ಕಂಟೈನ್ಮೆಂಟ್ ವಲಯಗಳ ಸಂಖ್ಯೆ 31ಕ್ಕೇರಿಕೆ
ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರ ಪ್ರಮಾಣದ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 31ಕ್ಕೇರಿಕೆಯಾಗಿದೆ. ಕಳೆದ ಒಂದೇ ದಿನದಲ್ಲಿ 7 ವಾರ್ಡ್ ಗಳು ಕಂಟೈನ್ಮೆಂಟ್ ವಲಯಕ್ಕೆ ಸೇರ್ಪಡೆಯಾಗಿವೆ.

ದೇಶದಲ್ಲಿ ಒಂದೇ ದಿನದಲ್ಲಿ 3900 ಕೊರೋನಾ ಸೋಂಕು ಪ್ರಕರಣ, 195 ಜನರ ಸಾವು-ಕೇಂದ್ರ ಸರ್ಕಾರ
ದೇಶದಲ್ಲಿ ಇಂದು ಒಂದೇ ದಿನದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 46433ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ

ಕೊವಿಡ್-19: ದೇಶದಲ್ಲಿ ಇಂದು ಅತೀ ಕಡಿಮೆ ಪಾಸಿಟಿವ್ ಪ್ರಕರಣ ದಾಖಲು, ಸಾವಿನ ಪ್ರಮಾಣ ಶೇ. 3.1
ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆದರೆ ಶನಿವಾರ ಅತ್ಯಂತ ಕಡಿಮೆ ಕೊವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಧಾರವಾಡ: ಕೊರೋನಾ ಸೋಂಕಿತ ಏಕೈಕ ವ್ಯಕ್ತಿ ಡಿಸ್ಚಾರ್ಜ್, ಈಗ ಜಿಲ್ಲೆಯಲ್ಲಿ ಕೊವಿಡ್-19 ಪ್ರಕರಣ ಶೂನ್ಯ
ಧಾರವಾಡ ಜಿಲ್ಲೆಯ ಕೊರೋನಾ ಸೋಂಕಿತ ಏಕೈಕ ವ್ಯಕ್ತಿ ಈಗ ಸಂಪೂರ್ಣ ಗುಣಮುಖರಾಗಿದ್ದು, ಭಾನುವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಜಿಲ್ಲೆಯ ಕೊವಿಡ್-19 ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ಇಳಿದಿದೆ.

