COVID-19 Lock down

ಬೆಲೆ ಕುಸಿತ: ಕೋಲಾರದಲ್ಲಿ ಮಾವಿನ ಹಣ್ಣುಗಳನ್ನು ರಸ್ತೆಗೆ ಸುರಿದು ಹೋದ ರೈತರು!
ಹಣ್ಣುಗಳ ರಾಜ ಮಾವಿಗೆ ಸೂಕ್ತ ಬೆಲೆ ಸಿಗದ ಹಿನ್ನಲೆಯಲ್ಲಿ ಮಾವು ಬೆಳೆಗಾರರು ಅಪಾರ ಪ್ರಮಾಣದ ಮಾವಿನ ಹಣ್ಣನ್ನು ರಸ್ತೆಗೆ ಸುರಿದು ಹೋಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಲಾಕ್ಡೌನ್ ನಿಯಮ ಮೀರಿ ಮನೆಯಲ್ಲೇ ಜೂಜಾಟ: ದಕ್ಷಿಣ ಭಾರತದ ಖ್ಯಾತ ನಟ ಶ್ಯಾಮ್ ಸೇರಿ ಹಲವರ ಬಂಧನ
ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಚೆನ್ನೈನಲ್ಲಿ ಹೇರಲಾಗಿರುವ ಲಾಕ್ಡೌನ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಮನೆಯಲ್ಲಿ ಗುಂಪು ಸೇರಿಕೊಂಡು ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ದಕ್ಷಿಣ ಭಾರತದ ಖ್ಯಾತ ನಟ ಶ್ಯಾಮ್ ಸೇರಿ ಹಲವರನ್ನು ಬಂಧಿಸಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ದೇಶಾದ್ಯಂತ 18 ಲಕ್ಷ ಅರ್ಜಿಗಳು ದಾಖಲು: ನ್ಯಾಯಮೂರ್ತಿ ಚಂದ್ರಚೂಡ್
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಹೇರಲಾಗಿದ್ದ ಲಾಕ್ ಡೌನ್ ಅವಧಿಯಲ್ಲಿ ದೇಶಾದ್ಯಂತ ಸುಮಾರು 18 ಲಕ್ಷ ಅರ್ಜಿಗಳು ಕೋರ್ಟ್ ಗಳಲ್ಲಿ ದಾಖಲಾಗಿವೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಅಜ್ಞಾನಕ್ಕಿಂತ ಅಹಂಕಾರ ತುಂಬಾ ಅಪಾಯಕಾರಿ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ
ಕೊರೋನಾ ವೈರಸ್ ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಅಜ್ಞಾನಕ್ಕಿಂತ ಅಹಂಕಾರ ತುಂಬಾ ಅಪಾಯಕಾರಿ ಎಂದು ಹೇಳಿದ್ದಾರೆ.

ಕೊರೋನಾ ವೈರಸ್ ಎಫೆಕ್ಟ್: ಮತ್ತೆ ವಿದೇಶದಲ್ಲಿ ಐಪಿಎಲ್ ಆಯೋಜನೆ?
ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ನಿಂದಾಗಿ ಸ್ಥಗಿತವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಭಾರತದಿಂದ ಆಚೆ ಅಂದರೆ ವಿದೇಶದಲ್ಲಿ ಆಯೋಜಿಸುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

ಅನಿವಾಸಿ ಭಾರತೀಯರ ಕೌಶಲ್ಯದ ಸಮರ್ಥ ಬಳಕೆಗೆ ಕ್ರಮ: 'ಸ್ವದೇಶ್' ಜಾರಿಗೆ ತಂದ ಕೇಂದ್ರ ಸರ್ಕಾರ
ವಂದೇ ಭಾರತ್ ಯೋಜನೆಯಡಿಯಲ್ಲಿ ಭಾರತಕ್ಕೆ ಆಗಮಿಸಿರುವ ಅನಿವಾಸಿ ಭಾರತೀಯರ ಕೌಶಲ್ಯವನ್ನು ಸಮರ್ಥವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 'ಸ್ವದೇಶ್' ಎಂಬ ಯೋಜನೆ ಘೋಷಣೆ ಮಾಡಿದೆ.

ಕೊರೋನಾ ವೈರಸ್: ಮಹಾರಾಷ್ಟ್ರ, ಉ.ಪ್ರದೇಶ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರದಲ್ಲಿ ಲಾಕ್ ಡೌನ್ ವಿಸ್ತರಣೆ
ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಅವಧಿಯನ್ನು ಜೂನ್ 30ರವರೆಗೂ ವಿಸ್ತರಿಸಿದ ಬೆನ್ನಲ್ಲೇ ಮಹಾರಾಷ್ಟ್ರ, ಉ.ಪ್ರದೇಶ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ ಸರ್ಕಾರಗಳೂ ಕೂಡ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಿವೆ.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಜಗಿದು ಉಗಿಯುವುದು ನಿಷೇಧ; ಆರೋಗ್ಯ ಇಲಾಖೆ ಆದೇಶ
ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಕೊರೋನಾ ಲಾಕ್ ಡೌನ್ ಎಫೆಕ್ಟ್: ರಾಜ್ಯದಿಂದ ಕಾಲ್ಕಿತ್ತ 4 ರಿಂದ 5 ಲಕ್ಷ ಕಾರ್ಮಿಕರು: ಸಂಕಷ್ಟದಲ್ಲಿ ಕೈಗಾರಿಕೆಗಳು
ರಾಜ್ಯದಲ್ಲಿ ಕೈಗಾರಿಕಾ ಚಟುವಟಿಕೆಗಳು ಆರಂಭವಾಗಿದ್ದು, ಕಾರ್ಮಿಕರ ತೀವ್ರ ಕೊರತೆ ಎದುರಾಗಿದೆ. ಇದರಿಂದಾಗಿ ಕೈಗಾರಿಕಾ ಉತ್ಪಾದನೆ ಕುಂಠಿತಗೊಳ್ಳುವ ಆತಂಕ ವ್ಯಕ್ತವಾಗಿದೆ.

