COVID-19 Lock down

ಕೊರೋನಾ ಬಿಕ್ಕಟ್ಟು ಉಲ್ಬಣಿಸಿದರೆ ಬಡವರ ಕೈಗೇ ನೇರ ನಗದು!
ದೇಶದಲ್ಲಿ ಮಾರಕ ಕೊರೋನಾ ವೈರಸ್ ಬಿಕ್ಕಟ್ಟು ಉಲ್ಬಣಿಸಿದರೆ ದೇಶದ ಬಡವರ ಕೈಗೇ ನೇರವಾಗಿ ಹಣ ನೀಡುವ ವ್ಯವಸ್ಥೆಯ ಕುರಿತು ಆಲೋಚಿಸಲಾಗುತ್ತದೆ ಎಂದು ಕೇಂದ್ರ ವಿತ್ತಸಚಿವಾಲಯದ ಮೂಲಗಳು ತಿಳಿಸಿವೆ.

ಸುಗಮ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಪತ್ರ
ಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದು ಮನವಿಮಾಡಿದ್ದಾರೆ.

ಕೊರೋನಾ ಭೀತಿ: ಕುಟುಂಬ ಸದಸ್ಯರ ಪ್ರಯಾಣಕ್ಕೆ 180 ಸೀಟ್ ಗಳ ವಿಮಾನ ಬುಕ್ ಮಾಡಿದ ಉದ್ಯಮಿ
ಲಾಕ್ ಡೌನ್ ನಿಂದಾಗಿ ಭೋಪಾಲ್ ನಲ್ಲಿ ಸಿಲುಕಿದ್ದ ಕುಟುಂಬ ಸದಸ್ಯರನ್ನು ವಾಪಸ್ ಕರೆಸಿಕೊಳ್ಳಲು ಉದ್ಯಮಿಯೋರ್ವ ಒಂದು ಇಡೀ ವಿಮಾನವನ್ನು ಬುಕ್ ಮಾಡಿದ್ದಾರೆ.

ಕೊರೋನಾ ವೈರಸ್ ಲಾಕ್ ಡೌನ್: ಏಪ್ರಿಲ್ ನಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಶೇ.50ರಷ್ಟು ಇಳಿಕೆ
ಮಾರಕ ಕೊರೋನಾ ವೈರಸ್ ನಿಂದಾಗಿ ದೇಶಾದ್ಯಂತ ಜಾರಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಏಪ್ರಿಲ್ ತಿಂಗಳ ವಾಯುಮಾಲಿನ್ಯ ಶೇ.50ರಷ್ಟು ಕುಸಿತವಾಗಿದೆ.

ಶ್ರಮಿಕ್ ರೈಲುಗಳಲ್ಲಿ ಕಳೆದ 3 ದಿನಗಳಲ್ಲಿ ಒಂಬತ್ತು ವಲಸೆ ಕಾರ್ಮಿಕರ ಸಾವು
ಕೊರೋನಾ ವೈರಸ್ ಲಾಕ್ಡೌನ್ ಹಿನ್ನಲೆಯಲ್ಲಿ ತಮ್ಮ ತವರಿಗೆ ವಾಪಸ್ ತೆರಳಲು ಬಿಡುಗಡೆ ಮಾಡಿರುವ ವಿಶೇಷ ಶ್ರಮಿಕ್ ರೈಲುಗಳಲ್ಲಿ ಕಳೆದ 3 ದಿನಗಳಿಂದ 9 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಗಸ್ಟ್ ಹೊತ್ತಿಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ಪ್ರಯತ್ನ: ಸಚಿವ ಹರ್ದೀಪ್ ಸಿಂಗ್ ಪುರಿ
ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣದಿಂದಾಗಿ ಸ್ಥಗಿತವಾಗಿರುವ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಆಗಸ್ಟ್ ತಿಂಗಳ ಹೊತ್ತಿಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಭೀಕರ ಅಪಘಾತದಲ್ಲಿ ಬಿಹಾರ ಮೂಲದ 3 ವಲಸೆ ಕಾರ್ಮಿಕರ ಸಾವು, ಓರ್ವ ಗಂಭೀರ
ದೇಶದಲ್ಲಿ ವಲಸೆ ಕಾರ್ಮಿಕರ ಸಾವಿನ ಸರಣಿ ಮುಂದುವರೆದಿದ್ದು, ಇಂದು ಉತ್ತರ ಪ್ರದೇಶದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಬಿಹಾರ ಮೂಲದ ಮೂವರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇನ್ನೆರಡು ದಿನಗಳಲ್ಲಿ ಖಾಸಗಿ ಬಸ್ ಸೇವೆ, ಶೇ.15 ರಷ್ಟು ದರ ಹೆಚ್ಚಿಸಿ ಬಸ್ ಓಡಿಸಲು ಅವಕಾಶ: ಸಚಿವ ಲಕ್ಷ್ಮಣ ಸವದಿ
ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಖಾಸಗಿ ಬಸ್ ಗಳ ಸೇವೆ ಆರಂಭವಾಗಲಿದ್ದು, ಶೇ.15ರಷ್ಟು ಮಾತ್ರ ದರ ಹೆಚ್ಚಿಸಿ ಬಸ್ ಓಡಿಸಲು ಅನುಮತಿ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಲಾಕ್ ಡೌನ್ ಸಡಿಲಿಕೆ: ಕುಂತೂರಿನ ಬಣ್ಣಾರಿ ಅಮ್ಮನ್ ಶುಗರ್ಸ್ ಪುನಾರಂಭ; ರೈತರ ಮೊಗದಲ್ಲಿ ಮಂದಹಾಸ
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಮುಚ್ಚಲಾಗಿದ್ದ ಕುಂತೂರಿನ ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆ ಲಾಕ್ ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ಪುನಾರಂಭಗೊಂಡಿದ್ದು, ಇಲ್ಲಿನ ರೈತರ ಮೊಗದಲ್ಲಿ ಮಂದಹಾಸ ತರಿಸಿದೆ.

