COVID-19 Lock down

ಇನ್ನೆರಡು ದಿನದಲ್ಲಿ ಹೋಟೆಲ್ ಪುನರಾರಂಭ ಕುರಿತು ನಿರ್ಧಾರ: ಮುಖ್ಯಮಂತ್ರಿ ಯಡಿಯೂರಪ್ಪ
ಹೋಟೆಲ್ ಉದ್ಯಮ ಪುನರಾರಂಭ ಸಂಬಂಧ ಇನ್ನೆರಡು ದಿನದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಉತ್ತರ ಪ್ರದೇಶ ಟ್ರಕ್ ಅಪಘಾತ: ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಪ್ರಧಾನಿ ಮೋದಿ ಸಂತಾಪ
ಉತ್ತರ ಪ್ರದೇಶ ಸಂಭವಿಸಿದ ವಲಸೆ ಕಾರ್ಮಿಕರ ಹೊತ್ತಿದ್ದ ಟ್ರಕ್ ಗಳ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

ವಂದೇ ಭಾರತ್ ಮಿಷನ್: ಅಮೆರಿಕದಿಂದ ಬೆಂಗಳೂರಿಗೆ ಬಂದಿಳಿದ ಮೊದಲ ವಿಮಾನ, ಕೊವಿಡ್ ಲಕ್ಷಣವಿದ್ದ ಪ್ರಯಾಣಿಕ ಆಸ್ಪತ್ರೆಗೆ ದಾಖಲು
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ವಂದೇ ಭಾರತ್ ಮಿಷನ್ ಏರ್ ಲಿಫ್ಟ್ ಕಾರ್ಯಾಚರಣೆ ಮುಂದವರೆದಿದ್ದು, ಅಮೆರಿಕದಲ್ಲಿದ್ದ ಭಾರತೀಯರನ್ನು ಹೊತ್ತ ವಿಮಾನ ಬೆಂಗಳೂರಿಗೆ ಬಂದಿಳಿದಿದೆ.

ಕೃಷಿ ಮೂಲ ಸೌಕರ್ಯ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಮೀಸಲು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕೊರೋನಾ ವೈರಸ್ ಲಾಕ್ ಡೌನ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್ ನ ಮೂರನೇ ಹಂತದ ಘೋಷಣೆಗಳ ವಿವರವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡುತ್ತಿದ್ದು, ಕೃಷಿ ಮೂಲ ಸೌಕರ್ಯ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ಕೊರೋನಾ ಸಾಂಕ್ರಾಮಿಕ: ಶಾಶ್ವತವಾಗಿ 'ಮನೆಯಿಂದಲೇ ಕೆಲಸ' ಮಾಡಿ ಎಂದ ಟ್ವಿಟರ್!
ವಿಶ್ವಾದ್ಯಂತ ಮಾರಕ ಕೊರೋನಾ ವೈರಸ್ ಸೋಂಕು ಕಡಿಮೆಯಾಗುವ ಸಾಧ್ಯತೆಗಳು ಕಡಿಮೆಯಾಗುತ್ತಿರುವ ಆತಂಕದ ನಡುವೆಯೇ ತನ್ನ ಸಿಬ್ಬಂದಿಗಳ ಸುರಕ್ಷತೆಗೆ ಮುಂದಾಗಿರುವ ಖ್ಯಾತ ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್ ಶಾಶ್ವತವಾಗಿ 'ಮನೆಯಿಂದಲೇ ಕೆಲಸ' ಮಾಡುವಂತೆ ಸಿಬ್ಬಂದಿಗಳಿಗೆ ಅನುಮತಿ ನೀಡಿದೆ.

ಲಾಕ್ ಡೌನ್ ನಿಯಮ ಮುರಿದ ಹಿನ್ನಲೆ: ಪೂನಂ ಪಾಂಡೆ ವಿರುದ್ಧ ಪ್ರಕರಣ ದಾಖಲು
ಲಾಕ್ ಡೌನ್ ನಿಯಮ ಮುರಿದ ಹಿನ್ನಲೆಯಲ್ಲಿ ಬಾಲಿವುಡ್ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ.

ತವರಿನತ್ತ 1,000 ಕಿ.ಮೀ ಸೈಕಲ್ ಪ್ರಯಾಣ: ತಿಂಡಿ ತಿನ್ನಲು ಕುಳಿತಾಗ ಕಾರು ಡಿಕ್ಕಿಯಾಗಿ ವಲಸೆ ಕಾರ್ಮಿಕನ ದಾರುಣ ಸಾವು
ಕೊರೋನಾ ಲಾಕ್‍ಡೌನ್ ಪರಿಣಾಮ ತವರಿನತ್ತ ಹೆಜ್ಜೆ ಹಾಕುತ್ತಿದ್ದ ವಲಸೆ ಕಾರ್ಮಿಕನೋರ್ವ ಮಾರ್ಗ ಮಧ್ಯೆ ಬೆಳಗಿನ ತಿಂಡಿ ತಿನ್ನಲು ಕುಳಿತಿದ್ದಾಗ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದು ಆತ ಸಾವನ್ನಪ್ಪಿರುವ ಧಾರುಣ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದೆ.

#ವಂದೇ ಭಾರತ್ ಮಿಷನ್: ಇಂಗ್ಲೆಂಡ್ನಿಂದ ಬೆಂಗಳೂರಿಗೆ 250 ಕನ್ನಡಿಗರು ವಾಪಸ್!
ಭಾರತ ಸರ್ಕಾರದ ಅತೀ ದೊಡ್ಡ ಏರ್ ಲಿಫ್ಟ್ ಕಾರ್ಯಾಚರಣೆ ವಂದೇ ಭಾರತ್ ಮಿಷನ್ ನಡಿಯಲ್ಲಿ ಲಂಡನ್ ನಲ್ಲಿ ನಿರಾಶ್ರಿತರಾಗಿರುವ ಸುಮಾರು 250 ಕನ್ನಡಿಗರು ಮಂಗಳವಾರ ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ.

ಮಂಗಳೂರು: ಲಾರಿಯಲ್ಲಿ ಊರಿಗೆ ಹೊರಟಿದ್ದ 120 ಕಾರ್ಮಿಕರು ಪೊಲೀಸ್ ವಶಕ್ಕೆ
ಮಂಗಳೂರಿನಿಂದ ಅಕ್ರಮವಾಗಿ ಉತ್ತರ ಭಾರತದ ಕಡೆಗೆ ಲಾರಿಯಲ್ಲಿ ಹೊರಟಿದ್ದ 120 ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದು ಹಾಸ್ಟೆಲ್ ಒಂದರಲ್ಲಿ ಇರಿಸಿದ್ದಾರೆ.

