Covid-19 Patient

ರೋಗಿಯಿಂದ ದುಪ್ಪಟ್ಟು ಹಣ ವಸೂಲಿ ಮಾಡಿದ ನಗರದ ಖಾಸಗಿ ಆಸ್ಪತ್ರೆಗೆ ಐಸಿಎಂಆರ್ ನೋಟಿಸ್!
ರೋಗಿಗಳಿಂದ ದುಪ್ಪಟ್ಟು ಹಣ ಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗದ ನಿರ್ದೇಶಕರು ಸೋಮವಾರ ನೋಟಿಸ್ ಜಾರಿ ಮಾಡಿದ್ದಾರೆ.

ಕೊರೋನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನಿರಾಕರಣೆ: ಸರ್ಕಾರದಿಂದ 9 ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್
ಕೊರೋನಾ ಸೋಂಕಿತ ವ್ಯಕ್ತಿಯೋರ್ವರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲು ನಿರಾಕರಿಸಿದ ನಗರದ 9 ಆಸ್ಪತ್ರೆಗಳಿಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಆಂಬ್ಯುಲೆನ್ಸ್ ಸಿಕ್ಕದೆ 7 ಕಿ.ಮೀ ದೂರ ನಡೆದು ಆಸ್ಪತ್ರೆ ತಲುಪಿದ ಕೊರೋನಾ ರೋಗಿ!
ಕೋವಿಡ್ 19 ರೋಗಿಯು ತನ್ನ ಮನೆಯಿಂದ ಥಾಣೆ ಜಿಲ್ಲೆಯ ಡೊಂಬಿವಿಲ್ಲಿ ಯಲ್ಲಿರುವ ನಿಗದಿತ ಕೋವಿಡ್ ಆಸ್ಪತ್ರೆಗೆ ತಲುಪಲು ಸುಮಾರು 7 ಕಿ.ಮೀ ದೂರ ನಡೆದು ಹೋಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ರೋಗಿಯನ್ನು ಕರೆತರಲು ಯಾವುದೇ ಆಂಬ್ಯುಲೆನ್ಸ್ ಲಭ್ಯವಿಲ್ಲದೆ ಹಿನ್ನೆಲೆ ಆತ ನಡೆದೇ ಆಸ್ಪತ್ರೆ ತಲುಪಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್: ಪ್ರತ್ಯೇಕ ವಾರ್ಡ್ ನಿಂದ ತಪ್ಪಿಸಿಕೊಂಡಿದ್ದ ಕೊರೋನಾ ಸೋಂಕಿತ ವ್ಯಕ್ತಿ ಶವವಾಗಿ ಪತ್ತೆ
ಎರಡು ದಿನಗಳ ಹಿಂದೆ ಗುಜರಾತ್ ನ ಸೂರತ್ ನಗರದ ಸರ್ಕಾರಿ ಆಸ್ಪತ್ರೆಯ ಕೊವಿಡ್-19 ಪ್ರತ್ಯೇಕ ವಾರ್ಡ್ ನಿಂದತಪ್ಪಿಸಿಕೊಂಡಿದ್ದ ಕೊರೋನಾ ವೈರಸ್ ಸೋಂಕಿತ 50 ವರ್ಷದ ವ್ಯಕ್ತಿ ಗುರುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾಗೆ ಮತ್ತೊಂದು ಬಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45 ವರ್ಷದ ಮಹಿಳೆ ಸಾವು
ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಸುಮಾರು 45 ವರ್ಷ ಪ್ರಾಯದ ಮಹಿಳೆಯೊಬ್ಬರು ರವಿವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ಜಿಲ್ಲೆಯಲ್ಲಿ ಕೊರೋನಾಗೆ ಇದು ಮೊದಲ ಬಲಿಯಾಗಿದೆ.

