ದೇಶದೇಶದಲ್ಲಿ ಇದುವರೆಗೂ 1.1 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ ಒಟ್ಟು 2,19,103 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ತಿಳಿಸಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಕೋವಿಡ್ ಪರೀಕ್ಷೆಗಳ ಸಂಖ್ಯೆ 1,18,06,265ಗೆ ತಲುಪಿದೆ.