COVID care centre

ಪಾಳು ಬಿದ್ದ ಮಕ್ಕಳ ಆಸ್ಪತ್ರೆ ಕಟ್ಟಡವನ್ನು ಕೋವಿಡ್ ಕೇರ್ ಕೇಂದ್ರ ಮಾಡಿ: ಸರ್ಕಾರಕ್ಕೆ ಆರ್.ಆರ್.ನಗರದ ನಿವಾಸಿಗಳ ಒತ್ತಾಯ
ರಾಜರಾಜೇಶ್ವರಿ ನಗರದಲ್ಲಿ ಬಳಕೆಯಾಗದೇ ಪಾಳು ಬಿದ್ದಿರುವ ಮಕ್ಕಳ ಆಸ್ಪತ್ರೆ ಕಟ್ಟಡವನ್ನು ಕೋವಿಡ್ ಕೇರ್ ಕೇಂದ್ರವಾಗಿ ಮಾರ್ಪಡಿಸಬೇಕೆಂದು ಸ್ಥಳೀಯ ನಿವಾಸಿಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಲಯ ಮಟ್ಟದಲ್ಲಿ ಹೆಚ್ಚೆಚ್ಚು ಕೋವಿಡ್ ಕೇರ್ ಕೇಂದ್ರ: ಬಿಬಿಎಂಪಿ ಮುಖ್ಯ ಆಯುಕ್ತ
ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರಂತೆ ವಲಯ ಮಟ್ಟದಲ್ಲಿ ಹೆಚ್ಚೆಚ್ಚು ಕೋವಿಡ್ ಕೇರ್ ಕೇಂದ್ರ ಸ್ಥಾಪಿಸಲು ಮುಂದಾಗಿದೆ.

ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆಗಳಲ್ಲಿ ಇರುವ ವ್ಯವಸ್ಥೆ ಬಗ್ಗೆ ವರದಿ ಸಲ್ಲಿಸಿ:ಹೈಕೋರ್ಟ್ ಆದೇಶ
ಕೋವಿಡ್-19 ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಆದೇಶ ನೀಡಿರುವ ಕರ್ನಾಟಕ ಹೈಕೋರ್ಟ್, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಇರುವ ಕೋವಿಡ್ ರೋಗಿಗಳ ಸೌಲಭ್ಯದ ಬಗ್ಗೆ ವರದಿ ಸಲ್ಲಿಸುವಂತೆ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ, ಒಂದು ವಾರದೊಳಗೆ ಸಮಿತಿ ವರದಿ

ಕೊರೋನಾ: ಆಗತ್ಯವಿಲ್ಲದಿದ್ದರೂ ಕೋವಿಡ್ ಆರೈಕೆ ಕೇಂದ್ರಗಳಿಗೆ ಲಕ್ಷಣ ರಹಿತ ರೋಗಿಗಳ ರವಾನೆ ಆರೋಪ!
ಕೊರೋನಾ ವೈರಸ್ ದೃಢಪಟ್ಟು, ಲಕ್ಷಣವಿಲ್ಲದವರು ಕುಟುಂಬದ ವೈದ್ಯರ ಆರೈಕೆಯಲ್ಲಿ ಮನೆಯಲ್ಲಿ ಐಸೋಲೇಷನ್ ನಲ್ಲಿದ್ದರೂ, ಬಿಬಿಎಂಪಿ ಅಧಿಕಾರಿಗಳು ಅನಗತ್ಯವಾಗಿ ಕೋವಿಡ್ ಆರೈಕೆ ಕೇಂದ್ರಗಳಿಗೆ ರವಾನಿಸುತ್ತಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ.

ಕೋವಿಡ್ ಕೇರ್ ಕೇಂದ್ರದಲ್ಲಿಯೇ ಸಿಇಟಿ ಬರೆಯಲಿದ್ದಾರೆ 41 ಮಂದಿ ಕೊರೋನಾ ಪಾಸಿಟಿವ್ ವಿದ್ಯಾರ್ಥಿಗಳು!
ವೃತ್ತಿ ಶಿಕ್ಷಣ ಕೋರ್ಸ್'ಗಳ ಪ್ರವೇಶಾತಿ ಸಂಬಂಧ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸುವಂತೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿರುವ ಹಿನ್ನೆಲೆಯಲ್ಲಿ ಕೊರೋನಾ ಪಾಸಿಟಿವ್ ಬಂದಿರುವ 41 ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಕೇಂದ್ರದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬಿಐಇಸಿ ಕೇಂದ್ರ ಈಗ ಸೋಂಕಿತರ ಆರೈಕೆಗೆ ಮುಕ್ತ: ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ಆರ್.ಅಶೋಕ್
ಕೊರೋನಾ ಸೋಂಕಿತರ ಆರೈಕೆಗಾಗಿ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿರ್ಮಾಣ ಮಾಡಲಾಗಿರುವ ಕೋವಿಡ್ ಆರೈಕೆ ಕೇಂದ್ರವನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಹಾಗೂ ಕಂದಾಯ ಸಚಿವ ಆರ್. ಅಶೋಕ ಅವರು ಸೋಮವಾರ ಉದ್ಘಾಟನೆ ಮಾಡಿದರು.

ಕೋವಿಡ್ ಕೇರ್ ಕೇಂದ್ರಗಳಲ್ಲಿ ವೆಂಟಿಲೇಷನ್'ಗಳು ಉತ್ತಮವಾಗಿರಬೇಕು: ಸರ್ಕಾರಕ್ಕೆ ವೈದ್ಯರ ಸಲಹೆ
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಕೋವಿಡ್ ಕೇರ್ ಕೇಂದ್ರಗಳ ಸಂಖ್ಯೆಯನ್ನು ರಾಜ್ಯ ಸರ್ಕಾರ ಹೆಚ್ಚಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ಕೋವಿಡ್ ಕೇರ್ ಕೇಂದ್ರಗಳಲ್ಲಿ ಉತ್ತಮವಾಗ ವೆಂಟಿಲೇಷನ್ ಗಳಿರಬೇಕೆಂದು ವೈದ್ಯರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

160 ಹಾಸಿಗೆಯುಳ್ಳ ಕೋವಿಡ್ ಕೇರ್ ಕೇಂದ್ರ ಸ್ಥಾಪಿಸಿ ಪಾಲಿಕೆಗೆ ಹಸ್ತಾಂತರಿಸಿದ ಹೆಚ್ಎಎಲ್
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ನಡುವಲ್ಲೇ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೂಸ್ಥಾನ್ ಏರೋನಾಟಿಸ್ಕ್ ಲಿಮಿಟಿಡ್, ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಘಾಟೇಜ್ ಕನ್ವೆನ್ಷನ್ ಸೆಂಟರ್'ನ್ನು ಕೋವಿಡ್ ಕೇರ್ ಕೇಂದ್ರವಾಗಿ ಮಾರ್ಪಡಿಸಿದ್ದು, ಬಿಬಿಎಂಪಿಗೆ ಶುಕ್ರವಾರ ಹಸ್ತಾಂತರ ಮಾಡಿದೆ.

ಕೊರೋನಾ ಮಟ್ಟಹಾಕಲು ದಿಟ್ಟ ಹೋರಾಟ: ಬೆಂಗಳೂರು ನಗರದಲ್ಲಿ ತಲೆಎತ್ತಲಿದೆ ಮತ್ತೆರಡು ಕೋವಿಡ್ ಕೇರ್ ಸೆಂಟರ್!
ಕೊರೋನಾ ಮಟ್ಟಹಾಕಲು ಕಠಿಣ ಕ್ರಮಗಳನ್ನು ತೆಗೆದುಕೊಂಡು ದಿಟ್ಟ ಹೋರಾಟ ಮಾಡುತ್ತಿರುವ ರಾಜ್ಯ ಸರ್ಕಾರ ಇದೀಗ ಬೆಂಗಳೂರು ನಗರದಲ್ಲಿ ಮತ್ತೆರಡು ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

