ರಾಜ್ಯಆರೋಗ್ಯ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಕೋವಿಡ್ ಕೇಂದ್ರ ತೆರೆದ ಬಾಗಲಕೋಟೆ ವೈದ್ಯರು!
ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿರುವ ಆರೋಗ್ಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚಾಗಿ ಕಾಡಲು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ವೈದ್ಯರು, ಅವರ ಕುಟುಂಬ ಸದಸ್ಯರು ಹಾಗೂ ಇತರೆ ಆರೋಗ್ಯ ಸಿಬ್ಬಂದಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿಯೇ ಪ್ರತ್ಯೇಕವಾಗಿ ಕೋವಿಡ್ ಕೇಂದ್ರವನ್ನು ತೆರೆಯಲಾಗಿದೆ.